Delhi Election Results 2025 : ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಭರ್ಜರಿ ಜಯ..! ಇವರೇ ನೋಡಿ ಮುಂದಿನ ಬಿಜೆಪಿ "ದೆಹಲಿ CM" 

Delhi BJP CM updates : ದೆಹಲಿ ಚುನಾವಣಾ ಫಲಿತಾಂಶ ಪ್ರಕಟವಾಗಿದೆ.. ಬಹುತೇಕ ಆಮ್ ಆದ್ಮಿ ಪಕ್ಷವನ್ನು ಸೋಲಿಸುವ ಮೂಲಕ ಬಿಜೆಪಿ ದೆಹಲಿ ಗದ್ದುಗೆ ಏರುವುದು ಖಚಿತವಾಗಿದೆ.. ಇದರ ಬೆನ್ನಲ್ಲೆ ರಾಷ್ಟ್ರ ರಾಜಧಾನಿಯ ಮುಂದಿನ ಸಿಎಂ ಯಾರು ಎನ್ನುವ ವಿಚಾರ ಜನರ ತಲೆ ಕೆಡಿಸುತ್ತಿದೆ.. 

Written by - Krishna N K | Last Updated : Feb 8, 2025, 01:34 PM IST
    • ದೆಹಲಿ ಚುನಾವಣಾ ಫಲಿತಾಂಶ ಪ್ರಕಟವಾಗಿದೆ..
    • ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಮತ ಏಣಿಕೆ ನಡೆಯುತ್ತಿದೆ.
    • ಬಿಜೆಪಿ ಮ್ಯಾಜಿಕ್ ನಂಬರ್ ಗಡಿ ದಾಟಿ ಬಹುತೇಕ ಕ್ಷೇತ್ರಗಳಲ್ಲಿ ಮುನ್ನೆಡೆ ಸಾಧಿಸುತ್ತಿದೆ
Delhi Election Results 2025 : ರಾಷ್ಟ್ರ ರಾಜಧಾನಿಯಲ್ಲಿ ಬಿಜೆಪಿಗೆ ಭರ್ಜರಿ ಜಯ..! ಇವರೇ ನೋಡಿ ಮುಂದಿನ ಬಿಜೆಪಿ "ದೆಹಲಿ CM"  title=

Delhi Election Results 202 : ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶ ಮತ ಏಣಿಕೆ ನಡೆಯುತ್ತಿದೆ.. ಈಗಾಗಲೇ ಬಿಜೆಪಿ ಮ್ಯಾಜಿಕ್ ನಂಬರ್ ಗಡಿ ದಾಟಿ ಬಹುತೇಕ ಕ್ಷೇತ್ರಗಳಲ್ಲಿ ಮುನ್ನೆಡೆ ಸಾಧಿಸುತ್ತಿದೆ.. ಇದರ ನಡುವೆ ಮುಂದಿನ ದೆಹಲಿ ಮುಖ್ಯಮಂತ್ರಿ ಯಾರು ಎನ್ನುವ ಕುರಿತು ಚರ್ಚೆಗಳು ಜೋರಾಗಿ ನಡೆತ್ತಿದೆ.. ಬನ್ನಿ ಸದ್ಯ ಸಿಎಂ ರೇಸ್‌ನಲ್ಲಿ ಯಾರಿದ್ದಾರೆ ಅಂತ ನೋಡೋಣ..

ದೆಹಲಿ ವಿಧಾನಸಭಾ ಚುನಾವಣಾ ಫಲಿತಾಂಶದಲ್ಲಿ ಭಾರತೀಯ ಜನತಾ ಪಕ್ಷ 46 ಸ್ಥಾನಗಳನ್ನು ಗೆದ್ದಿರುವುದರಿಂದ, ಕೇಸರಿ ಪಕ್ಷದ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಬಗ್ಗೆ ಈಗ ಗಮನ ಹರಿಸಲಾಗಿದೆ. ಹಾಗಾದರೆ, ದೆಹಲಿಯಲ್ಲಿ ಬಿಜೆಪಿ ಸರ್ಕಾರ ರಚಿಸಿದರೆ ಮುಖ್ಯಮಂತ್ರಿಯಾಗುವ ಅವಕಾಶ ಯಾರಿಗೆ ಇದೆ ಎಂಬುದನ್ನು ವಿವರವಾಗಿ ನೋಡೋಣ.

ಇದನ್ನೂ ಓದಿ:ರಮೇಶ್ ಬಿಧುರಿ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದ ಅತಿಶಿ! ಎಎಪಿ 'ಗೌರವ' ಉಳಿಸಿದ ದೆಹಲಿ ಮುಖ್ಯಮಂತ್ರಿ..

ದೆಹಲಿಯ ಮಾಜಿ ಮುಖ್ಯಮಂತ್ರಿ ಸಾಹಿಬ್ ಸಿಂಗ್ ವರ್ಮಾ ಪುತ್ರ ಪರ್ವೇಶ್ ವರ್ಮಾ.. ನವದೆಹಲಿ ಕ್ಷೇತ್ರದಿಂದ ಎಎಪಿ ಮುಖ್ಯಸ್ಥ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಸ್ಪರ್ಧಿಸಿದ್ದಾರೆ. ಸದ್ಯ ಮುನ್ನೆಡೆ ಸಾಧಿಸುತ್ತಿರುವ ಪರ್ವೇಶ್‌ ಅವರ ಗೆಲುಗು ಖಚಿತವಾಗಿದೆ.. ಇದರ ನಡುವೆ.. ಇವರೂ ಸಹ ಮುಂದಿನ ಸಿಎಂ ರೇಸ್‌ನಲ್ಲಿ ಇದ್ದಾರೆ ಎನ್ನಲಾಗಿದೆ.. 

ರಮೇಶ್ ಬಿಧುರಿಯವರೂ ಸಹ ದೆಹಲಿ ಸಿಎಂ ರೇಸ್‌ನಲ್ಲಿ ಇದ್ದಾರೆ.. ಬಹುತೇಕವಾಗಿ ಮುಖ್ಯಮಂತ್ರಿ ಅಂತ ಬಂದಾಗ ಇವರ ಹೆಸರು ಕೇಳಿ ಬಂದಿತ್ತು. ಚುನಾವಣಾ ಪ್ರಚಾರದ ಸಮಯದಲ್ಲಿಯೂ ಇವರನ್ನು ಎಎಪಿ ಚರ್ಚೆಗೂ ಆಹ್ವಾನಿಸಿತ್ತು. ಆದರೆ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಅಭ್ಯರ್ಥಿ ಅತಿಶಿ ಅವರು ಕಲ್ಕಾಜಿ ಕ್ಷೇತ್ರದಿಂದ ಇವರ ವಿರುದ್ಧ ಗೆಲುವು ಸಾಧಿಸಿದ್ದಾರೆ.

ಇದನ್ನೂ ಓದಿ:Jangpura Election Results 2025: ಜಂಗ್‌ಪುರ ಕ್ಷೇತ್ರದಲ್ಲಿ ಎಎಪಿ ಅಭ್ಯರ್ಥಿ ಮನೀಶ್ ಸಿಸೋಡಿಯಾ ಅವರನ್ನು ಮಣಿಸಿ ಗೆಲುವಿನ ನಗೆ ಬೀರಿದ ಬಿಜೆಪಿ ಅಭ್ಯರ್ಥಿ ತರವಿಂದರ್ ಸಿಂಗ್ ಮಾರ್ವಾ!

ಬಿಜ್ವಾಸನ್‌ನಿಂದ ಸ್ಪರ್ಧಿಸಿದ ಗಹ್ಲೋಟ್, ಬಿಜೆಪಿಯ ಮತ್ತೊಬ್ಬ ಸಂಭಾವ್ಯ ಸಿಎಂ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ.. ಅಲ್ಲದೆ, ಕರವಾಲ್ ನಗರದಿಂದ ಸ್ಪರ್ಧಿಸಿರುವ ಮಿಶ್ರಾ ಅವರು ಸಿಎಂ ರೇಸ್‌ನಲ್ಲಿದ್ದಾರೆ.. ಇವರು ಮತ ಏಣಿಕೆ ಪ್ರಾರಂಭವಾದಾಗಿನಿಂದ ಮುನ್ನಡೆಯಲ್ಲಿದ್ದಾರೆ.

ಬಿಜೆಪಿಯ ಹಿರಿಯ ನಾಯಕ ವಿಜೇಂದರ್ ಗುಪ್ತಾ ಅವರು ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಸ್ಪರ್ಧಿ.. ದೆಹಲಿ ಬಿಜೆಪಿಯ ಮಾಜಿ ಮುಖ್ಯಸ್ಥರಾಗಿರುವ ವಿಜೇಂದರ್‌ ಅವರು, ಎಎಪಿ ಪ್ರಾಬಲ್ಯದ ಹೊರತಾಗಿಯೂ 2015 ಮತ್ತು 2020 ಎರಡರಲ್ಲೂ ರೋಹಿಣಿ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.. ಗುಪ್ತಾ ದೆಹಲಿ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿಯೂ ಸೇವೆ ಸಲ್ಲಿಸಿದ್ದಾರೆ..

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News