Delhi Election Results 2025: ತೀವ್ರ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. 47 ಸ್ಥಾನಗಳಲ್ಲಿ ಗೆಲುವು ಸಾಧಿಸಿದ ಬಿಜೆಪಿ ದೆಹಲಿಯಲ್ಲಿ ಸುದೀರ್ಘ ಅವಧಿಯ ಬಳಿಕ ಅಧಿಕಾರ ಹಿಡಿದಿದೆ. ಸತತ 3ನೇ ಬಾರಿಗೆ ಅಧಿಕಾರ ಹಿಡಿಯುವ ಮೂಲಕ ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದ ಆಡಳಿತರೂಢ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟಾಗಿದೆ. ಬರೋಬ್ಬರಿ 27 ವರ್ಷಗಳ ಬಳಿಕ ಬಿಜೆಪಿ ದೆಹಲಿ ಗದ್ದುಗೆಯನ್ನ ಹಿಡಿದುಕೊಂಡಿದೆ.
ಅರವಿಂದ್ ಕೇಜ್ರಿವಾಲ್‌ಗೆ ಸೋಲು!!
ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ʼಪೊರಕೆʼ ಪಕ್ಷಕ್ಕೆ ಈ ಬಾರಿ ಮತದಾರ ದೊಡ್ಡ ಆಘಾತ ನೀಡಿದ್ದಾನೆ. ಈ ಚುನಾವಣೆಯಲ್ಲಿ ಪಕ್ಷದ ಸಂಚಾಲಕ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್ ಸೋಲು ಕಂಡಿದ್ದಾರೆ. ನವದೆಹಲಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಅರವಿಂದ್ ಕೇಜ್ರಿವಾಲ್ ಸೋಲು ಕಂಡಿದ್ದಾರೆ. 3,182 ಮತಗಳ ಅಂತರದಲ್ಲಿ ಕೇಜ್ರಿವಾಲ್ ಸೋಲು ಕಂಡಿದ್ದು, ಅವರ ವಿರುದ್ದ ಸ್ಪರ್ಧಿಸಿದ್ದ ಬಿಜೆಪಿಯ ಪರ್ವೇಶ್ ವರ್ಮಾ ದೊಡ್ಡ ಗೆಲುವು ಸಾಧಿಸಿದ್ದಾರೆ.
#WATCH | Delhi: BJP workers celebrate outside party office as the party is set to form the government in Delhi
As of now, BJP has won 19 seats and is leading on 28 seats#DelhiElections2025 pic.twitter.com/2lyafaZixl
— ANI (@ANI) February 8, 2025
2013ರಲ್ಲಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಮತ್ತು ಅಂದಿನ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರನ್ನೇ ಸೋಲಿಸಿದ್ದ ಕೇಜ್ರಿವಾಲ್ ಇದೀಗ ಆದೇ ಕ್ಷೇತ್ರದಲ್ಲಿ ದಶಕದ ನಂತರ ಸೋಲು ಕಂಡಿದ್ದಾರೆ. ಇದಲ್ಲದೆ ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಸ ಹೀನಾಯ ಸೋಲು ಕಂಡಿದ್ದಾರೆ. ಜಂಗ್‌ಪುರ ಕ್ಷೇತ್ರದ ಎಎಪಿ ಅಭ್ಯರ್ಥಿ ಸಿಸೋಡಿಯಾ ಅವರು ಬಿಜೆಪಿಯ ತರವಿಂದರ್ ಸಿಂಗ್ ಮಾರ್ವಾ ಎದುರು ಸೋಲು ಕಂಡಿದ್ದಾರೆ.
ಖಾತೆ ತೆರೆಯದ ಕಾಂಗ್ರೆಸ್‌ಗೆ ಭಾರೀ ಮುಖಭಂಗ!
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಭಾರೀ ಮುಖಭಂಗವನ್ನ ಅನುಭವಿಸಿದೆ. ಉಚಿತ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದ ಕಾಂಗ್ರೆಸ್ ಒಂದೇ ಒಂದು ಕ್ಷೇತ್ರದಲ್ಲಿಯೂ ಖಾತೆ ತೆರೆಯದೆ ದೊಡ್ಡ ಮುಖಭಂಗ ಅನುಭವಿಸಿದೆ.
#WATCH | Outgoing CM and AAP candidate from Kalkaji assembly seat, Atishi greets the people of her constituency after registering her victory against BJP's Ramesh Bidhuri#DelhiElections2025 pic.twitter.com/NTMA13Rm4O
— ANI (@ANI) February 8, 2025
ಇದನ್ನೂ ಓದಿ: ಮಾಜಿ ಸಿಎಂ ಕೇಜ್ರಿವಾಲ್‌ಗೆ ಸೋಲಿನ ರುಚಿ ತೋರಿಸಿದ ಬಿಜೆಪಿ ಅಭ್ಯರ್ಥಿ ಯಾರ್ ಗೊತ್ತೆ..? ಮುಂದಿನ CM ಇವರೇನಾ..?
ಸದ್ಯದ ಮಾಹಿತಿ ಪ್ರಕಾರ, ಒಟ್ಟು 70 ಕ್ಷೇತ್ರಗಳನ್ನ ಹೊಂದಿರುವ ದೆಹಲಿಯಲ್ಲಿ ಬಿಜೆಪಿ+ 47 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಎಎಪಿ 23 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಕಾಂಗ್ರೆಸ್ ಯಾವುದೇ ಕ್ಷೇತ್ರದಲ್ಲಿ ಖಾತೆ ತೆರೆಯದೆ ದೊಡ್ಡ ಹಿನ್ನಡೆಯನ್ನು ಅನುಭವಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.