Delhi Election Results 2025: ತೀವ್ರ ಕುತೂಹಲ ಕೆರಳಿಸಿದ್ದ ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. 47 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿಯು ದೆಹಲಿಯಲ್ಲಿ ಸುದೀರ್ಘ ಅವಧಿಯ ಬಳಿಕ ಅಧಿಕಾರ ಹಿಡಿದಿದೆ. ಸತತ 3ನೇ ಬಾರಿಗೆ ಅಧಿಕಾರ ಹಿಡಿಯುವ ಮೂಲಕ ಹ್ಯಾಟ್ರಿಕ್ ಜಯದ ನಿರೀಕ್ಷೆಯಲ್ಲಿದ್ದ ಆಡಳಿತರೂಢ ಆಮ್ ಆದ್ಮಿ ಪಕ್ಷಕ್ಕೆ ತೀವ್ರ ಹಿನ್ನಡೆ ಉಂಟಾಗಿದೆ. ಬರೋಬ್ಬರಿ 27 ವರ್ಷಗಳ ಬಳಿಕ ದೆಹಲಿ ಗದ್ದುಗೆ ಬಿಜೆಪಿ ಪಾಲಾಗಿದೆ.
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಪ್ ಸಂಚಾಲಕ ಹಾಗೂ ಮುಖ್ಯಮಂತ್ರಿ ಅಭ್ಯರ್ಥಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ ಆಪ್ನ ಅನೇಕ ದಿಗ್ಗಜ ನಾಯಕರು ಸೋಲು ಕಂಡಿದ್ದಾರೆ. ಆಪ್ ಹೀನಾಯ ಸೋಲು ಒಂದು ಕಡೆಯಾದ್ರೆ, ಒಂದೇ ಒಂದು ಕ್ಷೇತ್ರದಲ್ಲಿಯೂ ಖಾತೆ ತೆರೆಯದ ಕಾಂಗ್ರೆಸ್ ಪಕ್ಷವು ಭಾರೀ ಮುಖಭಂಗವನ್ನು ಅನುಭವಿಸಿದೆ. ದೆಹಲಿ ಜನರ ತೀರ್ಪನ್ನು ನಾವು ಒಪ್ಪಿಕೊಂಡಿದ್ದೇವೆ ಎಂದು ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ದೆಹಲಿಯ ನೂತನ ಸಿಎಂ ಯಾರು?
ದೆಹಲಿ ಚುನಾವಣೆಯಲ್ಲಿ ಬಿಜೆಪಿಯು ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಣೆ ಮಾಡಿರಲಿಲ್ಲ. ಹೀಗಾಗಿ ದೆಹಲಿಯ ನೂತನ ಸಿಎಂ ಯಾರಾಗಲಿದ್ದಾರೆ ಅನ್ನೋ ಬಗ್ಗೆ ಕುತೂಹಲ ಮೂಡಿದೆ. ಈ ಬಗ್ಗೆ ದೆಹಲಿ ಬಿಜೆಪಿ ಅಧ್ಯಕ್ಷ ವಿರೇಂದ್ರ ಸಚ್ದೇವ್ ಮಾತನಾಡಿದ್ದು, ʼಸಿಎಂ ಯಾರಾಗಲಿದ್ದಾರೆ? ಅನ್ನೋ ಪ್ರಶ್ನೆಗೆ ಹೈಕಮಾಂಡ್ ನಿರ್ಧಾರವೇ ಉತ್ತರವಾಗಲಿದೆ ಎಂದು ಹೇಳಿದ್ದಾರೆ. ದೆಹಲಿ ಸಿಎಂ ಹುದ್ದೆಗೆ ಕೆಲವು ನಾಯಕರ ಹೆಸರುಗಳು ಕೇಳಿಬರುತ್ತಿವೆ. ಕೇಜ್ರಿವಾಲ್ ಅವರನ್ನ ನವದೆಹಲಿ ಕ್ಷೇತ್ರದಿಂದ ಸೋಲಿಸಿದ ಪರ್ವೇಶ್ ಸಾಹಿಬ್ ಸಿಂಗ್ ವರ್ಮಾ ದೆಹಲಿ ಸಿಎಂ ಹುದ್ದೆಯ ರೇಸ್ನಲ್ಲಿರುವ ಪ್ರಮುಖ ನಾಯಕರಾಗಿದ್ದಾರೆ.
ಅವರಷ್ಟೇ ಅಲ್ಲದೇ ದೆಹಲಿಯ ರೋಹಿಣಿ ಕ್ಷೇತ್ರದಲ್ಲಿ ಸತತ ಗೆಲುವು ಸಾಧಿಸಿರುವ ಬಿಜೆಪಿಯ ಹಿರಿಯ ನಾಯಕ ವಿಜಯೇಂದ್ರ ಗುಪ್ತ ಅವರೂ ಸಿಎಂ ರೇಸ್ನಲ್ಲಿರುವ ಪ್ರಮುಖ ಅಭ್ಯರ್ಥಿ. ಒಂದು ವೇಳೆ ದೆಹಲಿಯಲ್ಲಿ ಬಿಜೆಪಿ ಗೆದ್ದರೆ ರಮೇಶ್ ಬಿಧುರಿ ಅವರನ್ನ ಬಿಜೆಪಿ ಸಿಎಂ ಮಾಡಲಿದೆ ಅಂತಾ ಆಮ್ ಆದ್ಮಿ ಪಕ್ಷವೇ ಹೇಳಿತ್ತು. ಇದೀಗ ಅವರ ಹೆಸರೂ ಸಹ ಸಿಎಂ ಹುದ್ದೆ ರೇಸ್ನಲ್ಲಿದೆ. ಇದಲ್ಲದೆ ರಾಜೌರಿ ಗಾರ್ಡನ್ನಿಂದ ಮಜೀಂದರ್ ಸಿಂಗ್ ಸಿರ್ಸಾ ಮತ್ತು ಕರೋಲ್ ಬಾಗ್ನಿಂದ ದುಷ್ಯಂತ್ ಗೌತಮ್ ಅವರ ಹೆಸರುಗಳು ಸಹ ಕೇಳಿಬರುತ್ತಿವೆ.
ಇದನ್ನೂ ಓದಿ: ಮಾಜಿ ಸಿಎಂ ಕೇಜ್ರಿವಾಲ್ಗೆ ಸೋಲಿನ ರುಚಿ ತೋರಿಸಿದ ಬಿಜೆಪಿ ಅಭ್ಯರ್ಥಿ ಯಾರ್ ಗೊತ್ತೆ..? ಮುಂದಿನ CM ಇವರೇನಾ..?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.