ಇದೇ ಕಾರಣಕ್ಕೆ ರಕ್ತನಾಳಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುತ್ತೆ; ಜೀವಕ್ಕೆ ಅಪಾಯ ತರುವ ಇದ್ರಿಂದ ಪಾರಾಗುವುದು ಹೇಗೆ?

Bad cholesterol: ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ಹೃದಯಾಘಾತ, ಅಧಿಕ ರಕ್ತದೊತ್ತಡ ಮತ್ತು ಬೊಜ್ಜು ಮುಂತಾದ ಸಮಸ್ಯೆಗಳು ಉಂಟಾಗಬಹುದು. ಇಂತಹ ಪರಿಸ್ಥಿತಿಯಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗಲು ಕಾರಣಗಳೇನು ಮತ್ತು ಅದನ್ನು ನಿಯಂತ್ರಿಸಲು ಮನೆಮದ್ದುಗಳು ಯಾವುವು ಎಂದು ತಿಳಿಯಿರಿ...

Written by - Puttaraj K Alur | Last Updated : Feb 9, 2025, 11:31 PM IST
  • ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಖ್ಯ ಕಾರಣವೇ ನಿಮ್ಮ ಕೆಟ್ಟ ಆಹಾರ ಪದ್ಧತಿ
  • ಬೆಳ್ಳುಳ್ಳಿ ಎಲ್‌ಡಿಎಲ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ
  • ಆರೋಗ್ಯಕರ ಜೀವನಶೈಲಿ & ಆಹಾರದಿಂದ ಕೊಲೆಸ್ಟ್ರಾಲ್‌ನಿಂದ ಮುಕ್ತಿ ಪಡೆಯಬಹುದು
ಇದೇ ಕಾರಣಕ್ಕೆ ರಕ್ತನಾಳಗಳಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುತ್ತೆ; ಜೀವಕ್ಕೆ ಅಪಾಯ ತರುವ ಇದ್ರಿಂದ ಪಾರಾಗುವುದು ಹೇಗೆ? title=
ಕೆಟ್ಟ ಕೊಲೆಸ್ಟ್ರಾಲ್

Bad Cholesterol: ನಮ್ಮ ದೇಹದಲ್ಲಿ HDL ಮತ್ತು LDL ಎಂಬ ಎರಡು ರೀತಿಯ ಕೊಲೆಸ್ಟ್ರಾಲ್‌ಗಳಿವೆ. HDL ಅಂದರೆ ಒಳ್ಳೆಯ ಕೊಲೆಸ್ಟ್ರಾಲ್, ರಕ್ತನಾಳಗಳಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಹೊರಹಾಕುತ್ತದೆ. ಆದರೆ ಕೆಟ್ಟ ಕೊಲೆಸ್ಟ್ರಾಲ್ ದಪ್ಪವಾಗಿರುತ್ತದೆ. ಇದರ ಪ್ರಮಾಣ ಹೆಚ್ಚಿದ್ದರೆ ಅದು ರಕ್ತನಾಳಗಳು ಮತ್ತು ಅಪಧಮನಿಗಳ ಗೋಡೆಗಳ ಮೇಲೆ ಶೇಖರಣೆಯಾಗಿ ರಕ್ತದ ಹರಿವಿಗೆ ಅಡಚಣೆಯಾಗುತ್ತದೆ. ಕೊಲೆಸ್ಟ್ರಾಲ್ ಹೆಚ್ಚಾಗುವುದರಿಂದ ಹೃದಯಾಘಾತ, ಅಧಿಕ ರಕ್ತದೊತ್ತಡ ಮತ್ತು ಬೊಜ್ಜು ಮುಂತಾದ ಸಮಸ್ಯೆಗಳು ಉಂಟಾಗಬಹುದು. ಇಂತಹ ಪರಿಸ್ಥಿತಿಯಲ್ಲಿ ಕೊಲೆಸ್ಟ್ರಾಲ್ ಹೆಚ್ಚಾಗಲು ಕಾರಣಗಳೇನು ಮತ್ತು ಅದನ್ನು ನಿಯಂತ್ರಿಸಲು ಮನೆಮದ್ದುಗಳು ಯಾವುವು ಎಂದು ತಿಳಿಯಿರಿ...

ಈ ಕಾರಣಗಳಿಂದ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ

ಕೆಟ್ಟ ಆಹಾರ ಪದ್ಧತಿ: ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗಲು ಮುಖ್ಯ ಕಾರಣ ನಿಮ್ಮ ಕೆಟ್ಟ ಆಹಾರ ಪದ್ಧತಿ. ನಿಮ್ಮ ಆಹಾರದಲ್ಲಿ ಹೆಚ್ಚು ಕೆಂಪು ಕೊಬ್ಬಿನ ಮಾಂಸ, ಬೆಣ್ಣೆ, ಚೀಸ್, ಕೇಕ್, ತುಪ್ಪ ಸೇವಿಸಿದರೆ, ದೇಹದಲ್ಲಿ ಕೊಬ್ಬು ಮತ್ತು ಕೆಟ್ಟ ಕೊಲೆಸ್ಟ್ರಾಲ್ ವೇಗವಾಗಿ ಹೆಚ್ಚಾಗುತ್ತದೆ. 

ಆನುವಂಶಿಕ ಕಾರಣಗಳು: ನಿಮ್ಮ ಕುಟುಂಬದಲ್ಲಿ ಅಧಿಕ ಕೊಲೆಸ್ಟ್ರಾಲ್ ಇತಿಹಾಸವಿದ್ದರೆ, ಇದು ನಿಮಗೆ ಕಳವಳಕಾರಿ ವಿಷಯವಾಗಿದೆ. ಆನುವಂಶಿಕವಾಗಿ ಹೆಚ್ಚಿನ ಕೊಲೆಸ್ಟ್ರಾಲ್ ಕೂಡ ಅಕಾಲಿಕ ಅಡಚಣೆ ಮತ್ತು ಪಾರ್ಶ್ವವಾಯುವಿಗೆ ಕಾರಣವಾಗುತ್ತದೆ.

ಇದನ್ನೂ ಓದಿ: ಖಾಲಿ ಹೊಟ್ಟೆಯಲ್ಲಿ ಮಜ್ಜಿಗೆ ಕುಡಿಯೋದ್ರಿಂದ ಆಗುವ ಪ್ರಯೋಜನಳೇನು ಗೊತ್ತೇ?

ಒತ್ತಡ: ಅನೇಕ ಜನರು ಒತ್ತಡದಲ್ಲಿದ್ದಾಗ, ಅವರು ತಮ್ಮನ್ನು ತಾವು ಸಮಾಧಾನಪಡಿಸಿಕೊಳ್ಳಲು ಧೂಮಪಾನ, ಮದ್ಯಪಾನ ಮತ್ತು ಕೊಬ್ಬಿನ ಆಹಾರವನ್ನು ಸೇವಿಸುತ್ತಾರೆ. ಆದ್ದರಿಂದ ದೀರ್ಘಕಾಲದ ಒತ್ತಡವು ರಕ್ತದಲ್ಲಿನ ಕೊಲೆಸ್ಟ್ರಾಲ್ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಈ ಆಹಾರ ಸೇವಿಸುವುದರಿಂದ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ

ಬೆಳ್ಳುಳ್ಳಿ: ಬೆಳ್ಳುಳ್ಳಿ ಎಲ್‌ಡಿಎಲ್ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಎಲ್‌ಡಿಎಲ್ ಕೊಲೆಸ್ಟ್ರಾಲ್ ಮಟ್ಟವನ್ನು ಶೇ.9ರಿಂದ 15ರಷ್ಟು ಕಡಿಮೆ ಮಾಡಬಹುದು. ಇದು ಅಧಿಕ ರಕ್ತದೊತ್ತಡವನ್ನು ಸಹ ನಿಯಂತ್ರಿಸುತ್ತದೆ. ಪ್ರತಿದಿನ ಎರಡು ಎಸಳು ಬೆಳ್ಳುಳ್ಳಿಯನ್ನು ಸಿಪ್ಪೆ ತೆಗೆದು ತಿನ್ನುವುದು ಅತ್ಯುತ್ತಮ ಮನೆಮದ್ದು.

ಓಟ್ಸ್: ಓಟ್ಸ್‌ನಲ್ಲಿರುವ ಬೀಟಾ ಗ್ಲುಕೋನ್ ಅಂಶವು ಕರುಳನ್ನು ಸ್ವಚ್ಛಗೊಳಿಸುವುದಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ. ಇದಲ್ಲದೆ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಸಹ ನಿಯಂತ್ರಿಸಲಾಗುತ್ತದೆ. ಓಟ್ಸ್ ಅನ್ನು ಮೂರು ತಿಂಗಳ ಕಾಲ ನಿಯಮಿತವಾಗಿ ಸೇವಿಸಿದರೆ, ಕೊಲೆಸ್ಟ್ರಾಲ್ ಮಟ್ಟವನ್ನು ಶೇ.5ರಷ್ಟು ಕಡಿಮೆ ಮಾಡಬಹುದು.

ಇದನ್ನೂ ಓದಿ: ಕುಂಬಳಕಾಯಿ ಅಷ್ಟೇ ಅಲ್ಲ ಅದರ ಎಲೆಗಳಲ್ಲಿಯೂ ಇವೆ ಪೋಷಕಾಂಶ..! ಇದು ಮಲಬದ್ಧತೆಗೆ ಅದ್ಭುತ ಪರಿಹಾರ

ಸಿಟ್ರಸ್ ಹಣ್ಣುಗಳು: ಸಿಟ್ರಸ್ ಹಣ್ಣುಗಳು ಕರಗುವ ನಾರಿನಂಶವನ್ನು ಹೊಂದಿರುತ್ತವೆ, ಇದು ಕೆಟ್ಟ ಕೊಲೆಸ್ಟ್ರಾಲ್ ರಕ್ತಪ್ರವಾಹಕ್ಕೆ ಪ್ರವೇಶಿಸುವುದನ್ನು ತಡೆಯುತ್ತದೆ. ಇಂತಹ ಹಣ್ಣುಗಳಲ್ಲಿರುವ ವಿಟಮಿನ್ ʼಸಿʼ ರಕ್ತನಾಳಗಳನ್ನು ಸ್ವಚ್ಛಗೊಳಿಸುತ್ತದೆ. ಈ ರೀತಿ ಕೆಟ್ಟ ಕೊಲೆಸ್ಟ್ರಾಲ್ ಜೀರ್ಣಾಂಗ ವ್ಯವಸ್ಥೆಯ ಮೂಲಕ ದೇಹದಿಂದ ಹೊರಬರುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News