'ಭುವನಂ ಗಗನಂ'ಗೆ ಸ್ಯಾಂಡಲ್ ವುಡ್ ಸಾಥ್...ಫೆ.14ಕ್ಕೆ ಪ್ರಮೋದ್-ಪೃಥ್ವಿ ಸಿನಿಮಾ ರಿಲೀಸ್

Bhuvanam Gaganam: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಪ್ರಮೋದ್ ಹಾಗೂ ಪೃಥ್ವಿ ಅಂಬರ್ ನಟನೆಯ ಭುವನಂ ಗಗನಂ ಸಿನಿಮಾ ಫೆಬ್ರವರಿ 14ಕ್ಕೆ ತೆರೆಗೆ ಬರ್ತಿದೆ. ಚಿತ್ರದ ಪ್ರಚಾರ ಕಾರ್ಯಭರದಿಂದ ಸಾಗುತ್ತಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಭುವನಂ ಗಗನಂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.   

Written by - YASHODHA POOJARI | Edited by - Zee Kannada News Desk | Last Updated : Feb 10, 2025, 06:07 PM IST
  • ಪ್ರಮೋದ್ ಹಾಗೂ ಪೃಥ್ವಿ ಅಂಬರ್ ನಟನೆಯ ಭುವನಂ ಗಗನಂ ಸಿನಿಮಾ ಫೆಬ್ರವರಿ 14ಕ್ಕೆ ತೆರೆಗೆ ಬರ್ತಿದೆ.
  • ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಭುವನಂ ಗಗನಂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.
'ಭುವನಂ ಗಗನಂ'ಗೆ ಸ್ಯಾಂಡಲ್ ವುಡ್ ಸಾಥ್...ಫೆ.14ಕ್ಕೆ ಪ್ರಮೋದ್-ಪೃಥ್ವಿ ಸಿನಿಮಾ ರಿಲೀಸ್ title=

Bhuvanam Gaganam: ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟರಾದ ಪ್ರಮೋದ್ ಹಾಗೂ ಪೃಥ್ವಿ ಅಂಬರ್ ನಟನೆಯ ಭುವನಂ ಗಗನಂ ಸಿನಿಮಾ ಫೆಬ್ರವರಿ 14ಕ್ಕೆ ತೆರೆಗೆ ಬರ್ತಿದೆ. ಚಿತ್ರದ ಪ್ರಚಾರ ಕಾರ್ಯಭರದಿಂದ ಸಾಗುತ್ತಿದ್ದು, ಅದರ ಭಾಗವಾಗಿ ನಿನ್ನೆ ಬೆಂಗಳೂರಿನ ಜಿಟಿ ಮಾಲ್ ನಲ್ಲಿ ಭುವನಂ ಗಗನಂ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. 

ಈ ವೇಳೆ ನಟರಾದ ಡಾರ್ಲಿಂಗ್ ಕೃಷ್ಣ, ನೀನಾಸಂ ಸತೀಶ್, ಬಿಗ್ ಬಾಸ್ ಖ್ಯಾತಿಯ ಮಂಜು ಪಾವಗಡ, ತ್ರಿವಿಕ್ರಮ್,ಅನುಷಾ ರೈ, ಹಾಸ್ಯ ಕಲಾವಿದ ಶಿವರಾಜ್ ಕೆ ಆರ್ ಪೇಟೆ, ಡೈರೆಕ್ಟರ್ ಚೇತನ್ ಕುಮಾರ್, ನಟಿಯರಾದ ಪವನಾ ಗೌಡ, ಸಾನ್ಯಾ ಐಯ್ಯರ್, ಸಂಭಾಷಣೆಗಾರ ಮಾಸ್ತಿ ಸೇರಿದಂತೆ ಮತ್ತಿತರರು ಭುವನಂ ಗಗನಂಗೆ ಸಾಥ್ ಕೊಟ್ಟರು.  

ಎರಡು ಮುಗ್ದ ಮನಸ್ಸುಗಳ ಪಯಣದ ಭುವನಂ ಗಗನಂ ಟ್ರೇಲರ್ ಪ್ರಾಮಿಸಿಂಗ್ ಆಗಿದೆ. ಗಿರೀಶ್ ಮೂಲಿಮನಿ ಒಂದೊಳ್ಳೆ ಕಥೆಯನ್ನು ಆಯ್ಕೆ ಮಾಡ್ಕೊಂಡು ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಈ ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕನ್ನಡ ಸಿನಿಮಾ ರಂಗಕ್ಕೆ ಅದ್ಭುತ ಸಿನಿಮಾಗಳನ್ನು ಕೊಡುಗೆಯಾಗಿ ನೀಡ್ಬೇಕೆಂಬ ಕನಸಿನೊಂದಿಗೆ ನಿರ್ಮಾಪಕ ಎಂ ಮುನೇಗೌಡ ತಮ್ಮದೇ ಎಸ್ ವಿಸಿ ಫಿಲ್ಮಂಸ್ ಪ್ರೊಡಕ್ಷನ್ ನಡಿ ಭುವನಂ ಗಗನಂ ಚಿತ್ರಕ್ಕೆ ಹಣ ಹಾಕಿದ್ದಾರೆ,

ಭುವನಂ ಗಗನಂ ಸಿನಿಮಾ ಲವ್, ರೋಮ್ಯಾನ್ಸ್, ಫ್ಯಾಮಿಲಿ ಎಮೋಷನ್ ಕಥಾಹಂದರ ಸಿನಿಮಾವಾಗಿದ್ದು, ನಗರ, ಹಳ್ಳಿ ಎರಡು ಬ್ಯಾಕ್ ಡ್ರಾಪ್ ನಲ್ಲಿ ನಡೆಯುವ ಕಥೆಯಾಗಿದ್ದು, ಪ್ರಮೋದ್ ಗೆ ಜೋಡಿಯಾಗಿ ಲವ್ ಮಾಕ್ಟೇಲ್ ಖ್ಯಾತಿಯ ರೆಚೆಲ್ ಡೇವಿಡ್, ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸ್ತಿದ್ದಾರೆ. ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ಸಿದ್ಲಿಂಗು ಶ್ರೀಧರ್, ಹರಿಣಿ, ಸ್ಪರ್ಶ ರೇಖಾ, ಪ್ರಜ್ವಲ್ ಶೆಟ್ಟಿ, ಚೇತನ್ ದುರ್ಗ ತಾರಾಬಳಗದಲ್ಲಿದ್ದಾರೆ. ಉದಯ್ ಲೀಲಾ ಕ್ಯಾಮೆರಾ ಕೈಚಳಕ, ಗುಮ್ಮಿನೇನಿ ವಿಜಯ್, ಮ್ಯೂಸಿಕ್ ಕಿಕ್, ಸುನೀಲ್ ಕಶ್ಯಪ್ ಸಂಕಲನ, ಗಿರೀಶ್ ಮೂಲಿಮನಿ, ಪ್ರಸನ್ನ ವಿ ಸಂಭಾಷಣೆ ಸಿನಿಮಾಕ್ಕಿದೆ.

ಪ್ರೀಮಿಯರ್ ಶೋಗೆ ಭರ್ಜರಿ ರೆಸ್ಪಾನ್ಸ್
ಭುವನಂ ಗಗನಂ ಸಿನಿಮಾದ ಪ್ರೀಮಿಯರ್ ಶೋಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇತ್ತೀಚೆಗೆ ಚಿತ್ರತಂಡ ದುಬೈನಲ್ಲಿ ಆಯೋಜಿಸಿದ್ದ ಪ್ರೀಮಿಯರ್ ಶೋನಲ್ಲಿ ದುಬೈ ಕನ್ನಡಿಗರು ಸಿನಿಮಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪ್ರೇಮಿಗಳ ದಿನದಂದು ಭುವನಂ ಗಗನಂ ಸಿನಿಮಾದ ಕನ್ನಡ ಸಿನಿಮಾಪ್ರೇಮಿಗಳ ಎದುರು ಬರಲಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News