ಹಿಮಾಚಲ ಪ್ರದೇಶ: ಭಾರೀ ಭೂಕುಸಿತ ಸಂಭವಿಸಿದ ಪರಿಣಾಮ ಬೆಟ್ಟದಿಂದ ಬಂಡೆಗಳು ಉರುಳಿಬಿದ್ದು 9 ಪ್ರವಾಸಿಗರು ದುರ್ಮರಣ ಹೊಂದಿದ್ದಾರೆ. ಹಿಮಾಚಲ ಪ್ರದೇಶದ ಕಿನ್ನೌರ್ ಜಿಲ್ಲೆಯ ಸಾಂಗ್ಲಾ ಕಣಿವೆಯಲ್ಲಿ ಈ ದುರ್ಘಟನೆ ನಡೆದಿದೆ. ಪ್ರವಾಸಿಗರು ತಮ್ಮ ಮೊಬೈನಲ್ಲಿ ಸೆರೆಹಿಡಿದಿರುವ ಈ ವಿಡಿಯೋ ನೋಡಲು ಭಯಾನಕವಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.
ಕಿನ್ನೌರ್ ಜಿಲ್ಲೆಯ ಸಾಂಗ್ಲಾ ಕಣಿವೆ(Sangla Valley)ಯಲ್ಲಿ ಇದ್ದಕ್ಕಿದ್ದಂತೆ ಭೂಕುಸಿತ ಉಂಟಾಗಿದೆ. ಪರಿಣಾಮ ಬೆಟ್ಟದ ಮೇಲಿಂದ ದೊಡ್ಡ ದೊಡ್ಡ ಬಂಡೆಗಳು ಉರುಳಿ ಬಿದ್ದಿವೆ. ಭಾರೀ ಗಾತ್ರದ ಬಂಡೆಯೊಂದು ಟೆಂಪೊ ಟ್ರಾವಲರ್ ಮೇಲೆ ಬಿದ್ದ ಪರಿಣಾಮ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ.
#WATCH | Himachal Pradesh: Boulders roll downhill due to landslide in Kinnaur district resulting in bridge collapse; vehicles damaged pic.twitter.com/AfBvRgSxn0
— ANI (@ANI) July 25, 2021
ಇದನ್ನೂ ಓದಿ: ಭಾರತದಲ್ಲಿ 42 ಕೋಟಿ ಜನರಿಗೆ ಕರೋನವೈರಸ್ ಲಸಿಕೆ -ಆರೋಗ್ಯ ಸಚಿವಾಲಯ
ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು, ಅನೇಕ ವಾಹನಗಳು ಜಖಂಗೊಂಡಿವೆ ಎಂದು ಕಿನ್ನೌರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಸಾಜು ರಾಮ್ ರಾಣಾ ತಿಳಿಸಿದ್ದಾರೆ. ಘಟನೆಯಲ್ಲಿ ಗಾಯಗೊಂಡವರಿಗೆ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ದೊಡ್ಡ ಬಂಡೆಯೊಂದು ಬಂದು ಬಿದ್ದ ಪರಿಣಾಮ ಬಟ್ಸೆರಿ ಸೇತುವೆ ಸಂಪೂರ್ಣವಾಗಿ ಜಖಂಗೊಂಡಿದೆ. ಪರ್ವತದ ಮೇಲಿನಿಂದ ಬಂಡೆಗಳು ಕೆಳಕ್ಕೆ ಉರುಳುತ್ತಿರು ವೇಳೆ ಪ್ರವಾಸಿಗರು ಭಯದಿಂದ ಜೋರಾಗಿ ಕಿರುಚಿಕೊಂಡಿದ್ದಾರೆ. ಬೆಟ್ಟದ ಕೆಳಭಾಗದಲ್ಲಿ ಪಾರ್ಕಿಂಗ್ ಮಾಡಲಾಗಿದ್ದ ಅನೇಕ ವಾಹನಗಳ ಮೇಲೆ ಬಂಡೆಗಳು ಉರುಳಿ ಬಿದ್ದಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣ(Social Media)ಗಳಲ್ಲಿ ವೈರಲ್ ಆಗುತ್ತಿದೆ.
ಇದನ್ನೂ ಓದಿ: ಪಾಸ್ವರ್ಡ್ ಇಲ್ಲದೆಯೇ ಓಪನ್ ಆಗಲಿದೆ Twitter, ಬಂದಿದೆ ಹೊಸ ವೈಶಿಷ್ಟ್ಯ
किन्नौर के बटसेरी में पहाड़ी दरकने से हुआ हादसा हृदयविदारक है।
इसकी चपेट में आया पर्यटकों से सवार वाहन जिसमें 9 की मृत्यु व 2 घायल तथा 1 अन्य राहगीर के घायल होने की खबर अत्यंत दुखद है।
ईश्वर दिवंगत आत्माओं को शांति तथा शोकग्रस्त परिवार को संबल प्रदान करें। pic.twitter.com/MqesANNlV0
— Jairam Thakur (@jairamthakurbjp) July 25, 2021
ಘಟನೆಯಲ್ಲಿ ಮೃತಪಟ್ಟ ಪ್ರವಾಸಿಗರಿಗೆ ಹಿಮಾಚಲ ಪ್ರದೇಶ ಸಿಎಂ ಜೈರಾಮ್ ಠಾಕೂರ್(JaiRam Thakur) ಸಂತಾಪ ಸೂಚಿಸಿದ್ದಾರೆ. ‘ನಾನು ಕಿನ್ನೌರ್ ಜಿಲ್ಲಾಡಳಿತದೊಂದಿಗೆ ಮಾತನಾಡಿದ್ದೇನೆ. ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಲಾಗುವುದು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಅವರು ಟ್ವೀಟ್ ಮಾಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ