ಬೆಂಗಳೂರು: ಮೇ 12 ರಂದು ನಡೆಯಲಿರುವ ರಾಜ್ಯ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಮತ ಭೇಟೆಯಲ್ಲಿ ತೊಡಗಿರುವ ರಾಜಕೀಯ ಪಕ್ಷಗಳ ನಾಯಕರು ಹಲವು ಭಾಗಗಳಲ್ಲಿ ತಮ್ಮ ಪ್ರವಾಸ ಮುಂದುವರೆಸಿದ್ದಾರೆ. ಈಗಾಗಲೇ ಹಲವು ಬಾರಿ ರಾಜ್ಯದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿರುವ ರಾಹುಲ್ ಗಾಂಧಿ, ಇಂದು ದಕ್ಷಿಣ ಕನ್ನಡ ಪ್ರವಾಸ ಕೈಗೊಳ್ಳಲಿದ್ದಾರೆ.
ಇನ್ನು ಇದೇ ವೇಳೆ ರಾಜ್ಯ ವಿಧಾನಸಭಾ ಚುನಾವಣೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಮಂಗಳೂರಿನಲ್ಲಿ ಹಾಗೂ ಸ್ವತಃ ಎಐಸಿಸಿ ಅಧ್ಯಕ್ಷರಿಂದ ಕಾಂಗ್ರೆಸ್ನ ರಾಜ್ಯ ಪ್ರಣಾಳಿಕೆ ಇಂದು ಬಿಡುಗಡೆಯಾಗಲಿದೆ.
ರಾಹುಲ್ ಗಾಂಧಿಯ ಇಂದಿನ ಕಾರ್ಯಕ್ರಮಗಳ ವಿವರ ಇಂತಿದೆ
ಬೆಳಿಗ್ಗೆ 11:00ಗಂಟೆಗೆ ಬಂಟ್ವಾಳದಲ್ಲಿ ಕಾರ್ನರ್ ಮೀಟಿಂಗ್ ನಲ್ಲಿ ಭಾಗವಹಿಸಲಿರುವ ರಾಹುಲ್, ಮಧ್ಯಾಹ್ನ 01:20ಕ್ಕೆ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು,ನಂತರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಲಿದ್ದಾರೆ. ಇದಾದ ಬಳಿಕ ಕೊಡಗಿನ ಗೋಣಿಕೊಪ್ಪಲಿಗೆ ತೆರಳಲಿರುವ ರಾಹುಲ್ ಗಾಂಧಿ, ಅಲ್ಲಿನ ಕಾರ್ಯಕರ್ತರ ಜೊತೆ ಸಭೆ ನಡೆಸಲಿದ್ದಾರೆ. ನಂತರ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದಲ್ಲಿ ರೋಡ್ ಶೋ ನಡೆಸಿ ಮೈಸೂರಿನಿಂದ ದೆಹಲಿಗೆ ತೆರಳಲಿದ್ದಾರೆ.
Day - 2 Itinerary of Congress President Shri @RahulGandhi's visit to Karnataka where he will be holding rallies & roadshows in Dakshina Kannada, Kodagu & Mysuru Districts.
He will also be launching the Congress Manifesto in Mangaluru today. #NavaKarnatakaManifesto pic.twitter.com/7KBhQQOx5Y
— Karnataka Congress (@INCKarnataka) April 26, 2018