ಬೆಂಗಳೂರು : '2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ನೇಮಕಾತಿಯಿಂದ 9,800ಕ್ಕೂ ಹೆಚ್ಚು ಮಂದಿ ಕೆಲಸ ಕಳೆದುಕೊಳ್ಳಲಿದ್ದಾರೆ ಎನ್ನುವ ವರದಿ ವಸ್ತುಸ್ಥಿತಿಗೆ ದೂರವಾಗಿದೆ’ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್ ಹೇಳಿದ್ದಾರೆ.
ಈ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ಬಂದಿರುವ ವರದಿಗೆ ಸ್ಪಷ್ಟನೆ ನೀಡಿರುವ ಆಯುಕ್ತ ಪಿ.ಪ್ರದೀಪ್(P Pradeep), 'ಈವರೆಗೆ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅಂದಾಜು 14 ಸಾವಿರ ಮಂದಿ ಅತಿಥಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈಗ ಕಾರ್ಯಭಾರ ಮತ್ತು ವೇತನ ಎರಡನ್ನೂ ಸೂಕ್ತವಾಗಿ ನಿಗದಿಪಡಿಸಿ ಇವರ ಪೈಕಿ 10,600 ಅತಿಥಿ ಉಪನ್ಯಾಸಕರನ್ನು ನೇಮಿಸಿಕೊಳ್ಳಲಾಗುತ್ತಿದೆ. ವಾಸ್ತವ ಹೀಗಿರುವಾಗ, 9,881 ಮಂದಿ ಕೆಲಸ ಕಳೆದುಕೊಳ್ಳುವ ಪ್ರಶ್ನೆ ಎಲ್ಲಿ ಉದ್ಭವವಾಗುತ್ತದೆ?’ ಎಂದರು.
ಇದನ್ನೂ ಓದಿ : Siddaramaiah : 'ಸಿಎಂ ಇಬ್ರಾಹಿಂ ಇಲ್ಲೇ ಇದ್ರೂ ನನ್ನ ಸ್ನೇಹಿತ, ಪಕ್ಷ ಬಿಟ್ಟರೂ ನನ್ನ ಸ್ನೇಹಿತ'
ನೇಮಕ ಪ್ರಕ್ರಿಯೆಯಲ್ಲಿ ಸೇವಾಹಿರಿತನ, ವಯಸ್ಸು ಮತ್ತು ಯುಜಿಸಿ ನಿಗದಿತ ಅರ್ಹತೆ ಮೂರನ್ನೂ ಸಮಾನವಾಗಿ ಪರಿಗಣಿಸಲಾಗಿದೆ. ನೇಮಕಾತಿ(Guest Lecturers Appointment)ಯಲ್ಲಿ ಇವರಿಗೇ ಆದ್ಯತೆ ಕೊಡಲಾಗುತ್ತಿದೆ. ಜತೆಗೆ ನಿಯಮಾನುಸಾರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಹೀಗಾಗಿ 14 ಸಾವಿರ ಮಂದಿಯ ಪೈಕಿ ಕೇವಲ 3,400 ಮಂದಿ ಮಾತ್ರ ಆಯ್ಕೆ ಆಗುತ್ತಿಲ್ಲ. ಆದರೆ, ಇವರಲ್ಲಿ ಕೂಡ ಹೆಚ್ಚಿನವರು ಅತ್ಯಂತ ಕಡಿಮೆ ಅನುಭವ ಹೊಂದಿದವರಾಗಿದ್ದಾರೆ ಎಂದು ಅವರು ವಿವರಿಸಿದರು.
ಇದುವರೆಗೂ ಅತಿಥಿ ಉಪನ್ಯಾಸಕರು(Guest Lecturers) ಗರಿಷ್ಠ ಅವಧಿ ಬೋಧನೆ ಮಾಡಿದರೂ ಅವರ ಮಾಸಿಕ ವೇತನ 13 ಸಾವಿರ ರೂ. ದಾಟುತ್ತಿರಲಿಲ್ಲ. ಆದರೆ, ಈಗ ನೇಮಕ ಆಗುತ್ತಿರುವವರಿಗೆ ಗರಿಷ್ಠ 32 ಸಾವಿರ ರೂ.ಗಳವರೆಗೆ ಸಿಗುವ ಹಾಗೆ ಮಾಡಲಾಗಿದೆ ಎಂದು ಪ್ರದೀಪ್ ನುಡಿದರು.
ಅತಿಥಿ ಉಪನ್ಯಾಸಕರ ಹುದ್ದೆಗೆ 60 ಸಾವಿರ ಮಂದಿ ಅರ್ಜಿ ಸಲ್ಲಿಸಿದ್ದರು. ಇವರಲ್ಲಿ ಇದುವರೆಗೆ ಅತಿಥಿ ಉಪನ್ಯಾಸಕರಾಗಿ ಕೆಲಸ ಮಾಡಿದರವರನ್ನೇ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.