Ganesh Kasaragod Post: ಇತ್ತೀಚಿಗೆಯಷ್ಟೇ ಬಿಗ್ ಬಾಸ್ ಕನ್ನಡ ಸೀಸನ್ 11 ಮುಕ್ತಾಯಗೊಂಡಿದೆ. ಹನುಮಂತ ಲಮಾಣಿ ವಿನ್ನರ್ ಆಗಿ ಹೊರಹೊಮ್ಮಿದರೆ, ತ್ರಿವಿಕ್ರಮ್ ರನ್ನರ್ ಅಪ್ ಆಗಿದ್ದಾರೆ. ಆದರೆ ಈ ಬೆನ್ನಲ್ಲೇ ಗೌತಮಿ ಜಾಧವ್ ಕುಟುಂಬದ ಸುದ್ದಿ ಮುನ್ನೆಲೆಗೆ ಬಂದಿದ್ದು, ಇವರ ಕುಟುಂಬದಲ್ಲಿ ಬಿರುಕು ಕಾಣಿಸಿಕೊಂಡಿದೆಯೇ? ಎಂಬ ಅನುಮಾನ ಮೂಡಲಾರಂಭಿಸಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಇತ್ತೀಚಿಗೆಯಷ್ಟೇ ಬಿಗ್ ಬಾಸ್ ಕನ್ನಡ ಸೀಸನ್ 11 ಮುಕ್ತಾಯಗೊಂಡಿದೆ. ಹನುಮಂತ ಲಮಾಣಿ ವಿನ್ನರ್ ಆಗಿ ಹೊರಹೊಮ್ಮಿದರೆ, ತ್ರಿವಿಕ್ರಮ್ ರನ್ನರ್ ಅಪ್ ಆಗಿದ್ದಾರೆ. ಆದರೆ ಈ ಬೆನ್ನಲ್ಲೇ ಗೌತಮಿ ಜಾಧವ್ ಕುಟುಂಬದ ಸುದ್ದಿ ಮುನ್ನೆಲೆಗೆ ಬಂದಿದ್ದು, ಇವರ ಕುಟುಂಬದಲ್ಲಿ ಬಿರುಕು ಕಾಣಿಸಿಕೊಂಡಿದೆಯೇ? ಎಂಬ ಅನುಮಾನ ಮೂಡಲಾರಂಭಿಸಿದೆ.
ಸತ್ಯ ಧಾರಾವಾಹಿ ಮೂಲಕ ಗೌತಮಿ ಫೇಮಸ್ ಆಗಿದ್ದರು. ಧಾರಾವಾಹಿಯಲ್ಲಿ ಖಡಕ್ ರೋಲ್‌ನಲ್ಲಿ ಕಾಣಿಸಿಕೊಂಡಿದ್ದ ನಟಿ, ನಿಜ ಜೀವನದಲ್ಲಿ ಪಾಸಿಟಿವ್ ವರ್ತನೆಯಿಂದಲೇ ಮನೆಮಾತಾಗಿದ್ದರು.
ಆದರೆ ಇದೀಗ ಗೌತಮಿ ಕುಟುಂಬದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ಪುಷ್ಟಿ ನೀಡುತ್ತಿರುವುದು ಅವರ ಮಾವ ಗಣೇಶ್ ಕಾಸರಗೋಡು ಅಪ್ಲೋಡ್ ಮಾಡಿರುವ ಫೇಸ್‌ಬುಕ್ ಪೋಸ್ಟ್. ಗಣೇಶ್ ಕಾಸರಗೋಡು ಅವರಿಗೆ ಇಬ್ಬರು ಗಂಡು ಮಕ್ಕಳು. ಹಿರಿಯ ಮಗ ಅಭಿಷೇಕ್ ಕಾಸರಗೋಡು ಮತ್ತು ಎರಡನೇ ಮಗ ಅಲೋಕ್.
ಇನ್ನು ಬಿಗ್ ಬಾಸ್ ಮನೆಯಲ್ಲಿದ್ದಾಗಲೇ ಅಭಿಷೇಕ್ ಮತ್ತು ಗೌತಮಿ ತಮ್ಮ ಆರನೇ ವರ್ಷದ ವಿವಾಹ ವಾರ್ಷಿಕೋತ್ಸವವನ್ನು ಆಚರಿಸಿಕೊಂಡಿದ್ದರು. ಆ ಸಂದರ್ಭದಲ್ಲಿ ಯಾವುದೇ ಪೋಸ್ಟ್ ಹಂಚಿಕೊಳ್ಳದ ಗಣೇಶ್ ಅವರು, ತಮ್ಮ ಎರಡನೇ ಮಗನ ಮದುವೆ ವಾರ್ಷಿಕೋತ್ಸವದ ಫೋಟೋ ಹಂಚಿಕೊಂಡು ಶುಭ ಕೋರಿದ್ದರು. ಅದರಲ್ಲಿ ಗೌತಮಿ ಪೋಟೋಗಳೇ ಇಲ್ಲ. ಒಂದು ಫೋಟೋದಲ್ಲಷ್ಟೇ ಅಭಿಷೇಕ್ ಕಾಣಿಸುತ್ತಿದ್ದಾರೆ.
ಇದಕ್ಕೂ ಮುನ್ನ ಗಣೇಶ್ ಕಾಸರಗೋಡು ಅವರು ತಮ್ಮ ಪತ್ನಿ, ಕಿರಿಯ ಮಗ ಮತ್ತು ಸೊಸೆಯ ಜೊತೆಗಿರುವ ಫೋಟೊವನ್ನು ಹಂಚಿಕೊಂಡು, "ಯಾವ ಸುಂಟರಗಾಳಿಯೂ ಇಲ್ಲ ಬಿರುಗಾಳಿಯೂ ಇಲ್ಲ, ಇದು ನಮ್ಮ ಹ್ಯಾಪಿ ಕುಟುಂಬ" ಎಂದು ಬರೆದಿದ್ದರು.
ಅಷ್ಟೇ ಅಲ್ಲದೆ, "ಅಪ್ಪ-ಅಮ್ಮನನ್ನು ಬಿಟ್ಟು ಕುರುಡು ಮೋಹಕ್ಕೆ ಮರುಳಾಗಿ ಹೆಂಡತಿಯ ಬಾಲ ಹಿಡಿದು ಹೊರಟು ಹೋಗುವ ನಿಯತ್ತಿಲ್ಲದ ಗಂಡು ಮಕ್ಕಳಿಗೆ ಅರ್ಪಣೆ...!' ಶ್ರಮ ಅರ್ಥವಾದರೆ ಅಪ್ಪ ಅರ್ಥವಾಗುತ್ತಾನೆ, ಕರುಣೆ ಅರ್ಥವಾದರೆ ತಾಯಿ ಅರ್ಥವಾಗುತ್ತಾಳೆ. ಶುಭಂ' ಎಂದು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದರು.