ಬೆಳಗ್ಗಿನ ಉಪಹಾರಕ್ಕಿಂತ ಮುನ್ನ ಹೀಗೊಂದು ಕೆಲಸ ಮಾಡಿ ಮುದುಕರಾಗುವವರೆಗೂ ಹಾರ್ಟ್ ಅಟ್ಯಾಕ್ ಆಗುವುದೇ ಇಲ್ಲ !ಬ್ಲಡ್ ಶುಗರ್ ಕೂಡಾ ಕಂಟ್ರೋಲ್ ನಲ್ಲಿರುವುದು

How to prevent heart attack  : ಹೃದಯವು ಯಾವಾಗಲೂ ಸದೃಢವಾಗಿ ಮತ್ತು ಆರೋಗ್ಯವಾಗಿರಬೇಕಾದರೆ  ಉಪಾಹಾರಕ್ಕೆ ಮೊದಲು ಕೆಲವು ಪ್ರಮುಖ ಆರೋಗ್ಯ ದಿನಚರಿಗಳನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.
 

ಬೆಂಗಳೂರು : ಬದಲಾಗುತ್ತಿರುವ ಜೀವನಶೈಲಿ ಮತ್ತು ಅನಾರೋಗ್ಯಕರ ಆಹಾರ ಪದ್ಧತಿಯಿಂದಾಗಿ, ಹೃದಯಾಘಾತದ ಅಪಾಯವು ವೇಗವಾಗಿ ಹೆಚ್ಚುತ್ತಿದೆ. ಸಣ್ಣ ವಯಸ್ಸಿನಲ್ಲಿಯೇ ಜನರು ಹೃದಯದ ಕಾಯಿಲೆಗಳಿಗೆ ಬಲಿಯಾಗುತ್ತಿದ್ದಾರೆ. ಅನಾರೋಗ್ಯಕರ ಆಹಾರ ಪದ್ಧತಿ, ವ್ಯಾಯಾಮದ ಕೊರತೆ ಮತ್ತು ಒತ್ತಡದಂತಹ ಅಭ್ಯಾಸಗಳು ಹೃದಯದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /8

ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೆಳಗಿನ ಸಮಯವನ್ನು ಅತ್ಯಂತ ಮುಖ್ಯವೆಂದು ಪರಿಗಣಿಸಲಾಗಿದೆ. ಈ ಸಮಯದಲ್ಲಿ ಅಳವಡಿಸಿಕೊಳ್ಳುವ ಉತ್ತಮ ಅಭ್ಯಾಸಗಳು ಇಡೀ ದಿನದ ಶಕ್ತಿ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ.   

2 /8

ಹೃದಯವು ಯಾವಾಗಲೂ ಸದೃಢವಾಗಿ ಮತ್ತು ಆರೋಗ್ಯವಾಗಿರಬೇಕಾದರೆ  ಉಪಾಹಾರಕ್ಕೆ ಮೊದಲು ಕೆಲವು ಪ್ರಮುಖ ಆರೋಗ್ಯ ದಿನಚರಿಗಳನ್ನು ಅಳವಡಿಸಿಕೊಳ್ಳುವುದು ಬಹಳ ಮುಖ್ಯ.  

3 /8

ಈ ಅಭ್ಯಾಸಗಳು ರಕ್ತದೊತ್ತಡ, ಕೊಲೆಸ್ಟ್ರಾಲ್ ಮತ್ತು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಡುತ್ತವೆ.ಇದು ಹೃದಯಾಘಾತದ ಅಪಾಯವನ್ನು ಬಹಳ ಮಟ್ಟಿಗೆ ಕಡಿಮೆ ಮಾಡುತ್ತದೆ. 

4 /8

ಬೆಳಿಗ್ಗೆ ಎದ್ದ ತಕ್ಷಣ 2 ಗ್ಲಾಸ್ ನೀರು  :ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ನೀರು ಕುಡಿಯುವುದು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದು ದೇಹದಿಂದ ವಿಷವನ್ನು ತೆಗೆದುಹಾಕಲು ಮತ್ತು ರಕ್ತ ಪರಿಚಲನೆ ಸುಧಾರಿಸಳು ಸಹಾಯ ಮಾಡುತ್ತದೆ.ರಕ್ತದೊತ್ತಡ ನಿಯಂತ್ರಣದಲ್ಲಿಡುತ್ತದೆ ಮತ್ತು ಹೃದಯ ಸ್ನಾಯುಗಳನ್ನು ಬಲಪಡಿಸುತ್ತದೆ. ಈ ಅಭ್ಯಾಸವು ಹೃದಯಾಘಾತ ಮತ್ತು ಪಾರ್ಶ್ವವಾಯು ಅಪಾಯವನ್ನು ಕಡಿಮೆ ಮಾಡುತ್ತದೆ.

5 /8

ಸೂರ್ಯನ ಕಿರಣಕ್ಕೆ ಒಡ್ಡಿಕೊಳ್ಳುವುದು : ಬೆಳಿಗ್ಗೆ ಸೂರ್ಯನ ಬೆಳಕಿನಲ್ಲಿ ಸ್ವಲ್ಪ ಸಮಯ ಕಳೆಯುವುದು ಮೂಳೆಗಳಿಗೆ ಮಾತ್ರವಲ್ಲದೆ ನಿಮ್ಮ ಹೃದಯದ ಆರೋಗ್ಯಕ್ಕೂ ಮುಖ್ಯವಾಗಿದೆ. ಸೂರ್ಯನ ಬೆಳಕು ದೇಹದಲ್ಲಿ ವಿಟಮಿನ್ ಡಿ ಮಟ್ಟವನ್ನು ಹೆಚ್ಚಿಸುತ್ತದೆ.ಇದು ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.  ವಿಟಮಿನ್ ಡಿ ಕೊರತೆಯು ಹೃದಯ ಕಾಯಿಲೆಯ ಅಪಾಯವನ್ನು ಹೆಚ್ಚಿಸುತ್ತದೆ. 

6 /8

ದೇಹವನ್ನು ಕ್ರಿಯಾಶೀಲವಾಗಿಡಿ :ಬೆಳಗಿನ ಜಾವ ಲಘು ವ್ಯಾಯಾಮ, ಯೋಗ ಅಥವಾ ನಡಿಗೆ ಮಾಡುವುದರಿಂದ ಹೃದಯವನ್ನು ಆರೋಗ್ಯವಾಗಿಡಬಹುದು. ಇದು ರಕ್ತದ ಹರಿವನ್ನು ಹೆಚ್ಚಿಸುತ್ತದೆ, ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಹೃದಯದ ಕಾರ್ಯವನ್ನು ಸುಧಾರಿಸುತ್ತದೆ. 

7 /8

ಆರೋಗ್ಯಕರ ಉಪಹಾರ ಸೇವಿಸಿ :ಆರೋಗ್ಯಕರ ಉಪಹಾರವಿಲ್ಲದೆ ನಿಮ್ಮ ದಿನವನ್ನು ಪ್ರಾರಂಭಿಸುವುದು ಅಪೂರ್ಣ. ಧಾನ್ಯಗಳು, ಹಣ್ಣುಗಳು, ಬೀಜಗಳು ಮತ್ತು ಪ್ರೋಟೀನ್‌ಗಳಿಂದ ಸಮೃದ್ಧವಾಗಿರುವ ಉಪಾಹಾರವನ್ನು ಸೇವಿಸುವುದರಿಂದ ಚಯಾಪಚಯ ಕ್ರಿಯೆ ಸುಧಾರಿಸುತ್ತದೆ ಮತ್ತು ಹೃದಯದ ಆರೋಗ್ಯಕ್ಕೆ ಪ್ರಯೋಜನವಾಗುತ್ತದೆ.

8 /8

ಸೂಚನೆ : ಈ ಲೇಖನವನ್ನು ಸಾಮಾನಿ ಮಾಹಿತಿ ಮತ್ತು ಮನೆ ಮದ್ದಿನ ಆಧಾರದಲ್ಲಿ ಬರೆಯಲಾಗಿದೆ. ಜೀ ನ್ಯೂಸ್ ಇದನ್ನು ಅನುಮೋದಿಸುವುದಿಲ್ಲ.