Diabetes Control: ಇತ್ತೀಚಿನ ದಿನಗಳಲ್ಲಿ ಮಧುಮೇಹ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಮಧುಮೇಹಕ್ಕೆ ಪ್ರಮುಖ ಕಾರಣಗಳು ಕಳಪೆ ಜೀವನಶೈಲಿ, ಒತ್ತಡ ಮತ್ತು ಅನಾರೋಗ್ಯಕರ ಆಹಾರ ಪದ್ಧತಿ ಎಂದು ವೈದ್ಯರು ಹೇಳುತ್ತಾರೆ.
Diabetes Control: ಇತ್ತೀಚಿನ ದಿನಗಳಲ್ಲಿ ಮಧುಮೇಹ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಮಧುಮೇಹಕ್ಕೆ ಪ್ರಮುಖ ಕಾರಣಗಳು ಕಳಪೆ ಜೀವನಶೈಲಿ, ಒತ್ತಡ ಮತ್ತು ಅನಾರೋಗ್ಯಕರ ಆಹಾರ ಪದ್ಧತಿ ಎಂದು ವೈದ್ಯರು ಹೇಳುತ್ತಾರೆ.
ಮಧುಮೇಹಕ್ಕೆ ಪ್ರಮುಖ ಕಾರಣಗಳು ಕಳಪೆ ಜೀವನಶೈಲಿ, ಒತ್ತಡ ಮತ್ತು ಅನಾರೋಗ್ಯಕರ ಆಹಾರ ಪದ್ಧತಿ ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ. ಆದಾಗ್ಯೂ, ಮಧುಮೇಹವನ್ನು ನಿಯಂತ್ರಣದಲ್ಲಿಡಲು ನಿಯಮಿತ ಕ್ರಮಗಳು ಬೇಕಾಗುತ್ತವೆ.
ಮಧುಮೇಹವು ಒಂದು ಪ್ರಮುಖ ಆರೋಗ್ಯ ಸಮಸ್ಯೆಯಾಗಿರುವುದರಿಂದ, ಆಹಾರ ಮತ್ತು ಪಾನೀಯಗಳ ಬಗ್ಗೆ ಹೆಚ್ಚಿನ ಗಮನ ನೀಡಬೇಕು. ನಡುವೆ ಏನಾದರೂ ತಿಂದರೆ ನಿಮ್ಮ ಸಕ್ಕರೆ ಮಟ್ಟ ಹೆಚ್ಚಾಗುತ್ತದೆ.
ಈ ಸಮಸ್ಯೆಯಿಂದ ಮುಕ್ತಿ ಪಡೆಯಲು, ನೀವು ನಿಮ್ಮ ಜೀವನಶೈಲಿ ಮತ್ತು ಆಹಾರ ಪದ್ಧತಿಯನ್ನು ಸುಧಾರಿಸಿಕೊಳ್ಳಬೇಕು. ಈ ಕಾರಣಕ್ಕಾಗಿ, ಸಕ್ಕರೆ ಮಟ್ಟವನ್ನು ನಿಯಂತ್ರಿಸುವ ಮನೆಮದ್ದುಗಳ ಬಗ್ಗೆ ತಿಳಿದುಕೊಳ್ಳುವುದು ಬಹಳ ಮುಖ್ಯ.
ಇಂತಹ ಮನೆಮದದುಗಳಲ್ಲಿ ಲವಂಗವೂ ಒಂದು, ಲವಂಗವು ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಆಯುರ್ವೇದ ತಜ್ಞರು ಹೇಳುತ್ತಾರೆ.
ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ಲವಂಗದ ಕಷಾಯವು ತುಂಬಾ ಉಪಯುಕ್ತವಾಗಿದೆ. ಇದಕ್ಕಾಗಿ, ಒಂದು ಲೋಟ ನೀರಿಗೆ 8-10 ಲವಂಗ ಸೇರಿಸಿ ಕುದಿಸಿ. ನಂತರ ನೀರನ್ನು ಶೋಧಿಸಿ ಸ್ವಲ್ಪ ತಣ್ಣಗಾದ ನಂತರ ಕುಡಿಯಿರಿ.
ನೀವು ಜೇನುತುಪ್ಪವನ್ನು ಲವಂಗದ ನೀರಿನೊಂದಿಗೆ ಬೆರೆಸಿ ಕುಡಿಯಬಹುದು. ಇದಕ್ಕಾಗಿ, ಪ್ರತಿದಿನ ರಾತ್ರಿ ಮಲಗುವ ಮುನ್ನ 4-5 ಲವಂಗವನ್ನು ಒಂದು ಲೋಟ ನೀರಿನಲ್ಲಿ ನೆನೆಸಿಡಿ. ನಂತರ ಬೆಳಿಗ್ಗೆ ಬೇಗನೆ ಎದ್ದು ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯಿರಿ.
ಇಲ್ಲದಿದ್ದರೆ, ನೀವು ಈ ನೆನಸಿಟ್ಟ ನೀರನ್ನು ಸ್ವಲ್ಪ ಬಿಸಿ ಮಾಡಿ ಜೇನುತುಪ್ಪ ಸೇರಿಸದೆ ಕುಡಿಯಬಹುದು. ಕೇವಲ ಲವಂಗ ನೀರನ್ನು ಕುಡಿಯುವುದು ಅಷ್ಟೇ ಅಲ್ಲ, ಲವಂಗವನ್ನು ನಿಮ್ಮ ಬಾಯಲ್ಲಿಟ್ಟುಕೊಂಡರೆ ಸಾಕು ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ.
ಹಗಲಿನಲ್ಲಿ ನೀವು ಎಷ್ಟು ಬೇಕಾದರೂ ಲವಂಗ ತಿನ್ನಬಹುದು. ಇದರ ಗುಣಗಳು ಸ್ವಲ್ಪವೂ ಕಡಿಮೆಯಾಗುವುದಿಲ್ಲ. ಇದನ್ನು ಆಹಾರದಲ್ಲಿ ಮಸಾಲೆಯಾಗಿಯೂ ಬಳಸಬಹುದು. ಇದು ದೇಹದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ ಮತ್ತು ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಡಿತಿಯೂ ಸಾಮಾನ್ಯ ಜ್ಞಾನ ಹಾಗೂ ಮೂಲಗಳ ಮಾಹಿತಿಯನ್ನು ಆಧರಿಸಿದೆ, ಇದನ್ನು ZEE KANNADA NEWS ಖಚಿತ ಪಡಿಸುವುದಿಲ್ಲ.