ದೇಶವನ್ನು ಅಭಿವೃದ್ಧಿ ಹೊಂದಿದ ಆರ್ಥಿಕತೆಯನ್ನಾಗಿ ಮಾಡುವ ಜವಾಬ್ದಾರಿ ಅವರ ಹೆಗಲ ಮೇಲಿದೆ. ಉದ್ಯೋಗಿಗಳಿಗೆ ತೆರಿಗೆ ವಿನಾಯಿತಿ, ರೈತರಿಗೆ ಯೋಜನೆ ಹೀಗೆ ಹತ್ತು ಹಲವು ಜವಾಬ್ದಾರಿ ಇವರ ಹೆಗಲ ಮೇಲಿದೆ.
Nirmala Sitaraman : ಮೋದಿ ಸರ್ಕಾರದ ಮೂರನೇ ಅವಧಿಯ ಮೊದಲ ಬಜೆಟ್ ಇಂದು ಮಂಡನೆಯಾಗಲಿದೆ. ವಿತ್ತ ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅವರು ತಮ್ಮ ಏಳನೇ ಬಜೆಟ್ ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್ ಮಂಡನೆಯೊಂದಿಗೆ ತಮ್ಮ ಹೆಸರಿನಲ್ಲಿ ಹೊಸ ದಾಖಲೆ ಬರೆಯಲಿದ್ದಾರೆ.ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ದಾಖಲೆ ನಿರ್ಮಲಾ ಸೀತಾರಾಮನ್ ಅವರದ್ದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ನಿರ್ಮಲಾ ಸೀತಾರಾಮನ್ ಮಧುರೈನ ಬ್ರಾಹ್ಮಣ ಕುಟುಂಬದಲ್ಲಿ 18 ಆಗಸ್ಟ್ 1959 ರಂದು ಜನಿಸಿದರು.ತಂದೆ ರೈಲ್ವೇಯಲ್ಲಿದ್ದರೆ ತಾಯಿ ಗೃಹಿಣಿ.
ತಿರುಚಿರಾಪಳ್ಳಿಯ ಸೀತಾಲಕ್ಷ್ಮಿ ರಾಮಸ್ವಾಮಿ ಕಾಲೇಜಿನಲ್ಲಿ ಅರ್ಥಶಾಸ್ತ್ರವನ್ನು ಅಧ್ಯಯನ ಮಾಡಿದ ಅವರು ದೆಹಲಿಯ ಜೆಎನ್‌ಯುನಲ್ಲಿ ಸ್ನಾತಕೋತ್ತರ ಮತ್ತು ಎಂಫಿಲ್ ಮಾಡಿದರು.ಇಲ್ಲಿಯೇ ಪರಕಾಲ ಪ್ರಭಾಕರ್ ಅವರನ್ನು ಭೇಟಿಯಾಗಿ, ಒಬ್ಬರನ್ನೊಬ್ಬರು ಇಷ್ಟಪಡಲು ಪ್ರಾರಂಭಿಸಿದರು.
ಆದರೆ ಇವರ ಕುಟುಂಬಕ್ಕೆ ಈ ಸಂಬಂಧ ಸುತಾರಾಂ ಇಷ್ಟವಿರಲಿಲ್ಲ. ನಂತರ ಮಕ್ಕಳ ಸುಖವನ್ನು ಗಮನದಲ್ಲಿಟ್ಟುಕೊಂಡು ಇಬ್ಬರ ಕುಟುಂಬ ಈ ಮದುವೆಗೆ ಒಪ್ಪಿಗೆ ನೀಡಿತು. ಪರಿಣಾಮವಾಗಿ 1986ರಲ್ಲಿ ಇಬ್ಬರೂ ಮದುವೆಯಾದರು.
ಮದುವೆಯ ನಂತರ ನಿರ್ಮಲಾ ಸೀತಾರಾಮನ್ ಪತಿಯೊಂದಿಗೆ ಲಂಡನ್‌ಗೆ ತೆರಳಿದ್ದರು.ಅಲ್ಲಿ ಆಕೆಗೆ ರೀಜೆಂಟ್ ಸ್ಟ್ರೀಟ್‌ನಲ್ಲಿರುವ ಹೋಮ್ ಡೆಕೋರ್ ಸ್ಟೋರ್‌ನಲ್ಲಿ ಸೇಲ್ಸ್ ಗರ್ಲ್ ಆಗಿ ಕೆಲಸ ಸಿಕ್ಕಿತು.ನಂತರ ಕೆಲವು ದಿನಗಳ ಕಾಲ BCC ವರ್ಲ್ಡ್ ಸರ್ವೀಸ್‌ನೊಂದಿಗೆ ಕೆಲಸ ಮಾಡಿದರು.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಿಜೆಪಿಯ ತೀಕ್ಷ್ಣ ಮತ್ತು ಕ್ರಿಯಾಶೀಲ ನಾಯಕರಲ್ಲಿ ಒಬ್ಬರು.ಆದರೆ ಅವರು ಮದುವೆಯಾಗಿ ಹೋದದ್ದು ಕಾಂಗ್ರೆಸ್ ಹಿನ್ನೆಲೆಯುಳ್ಳ ಪರಿವಾರಕ್ಕೆ.ಅತ್ತೆ ಮತ್ತು ಮಾವ ಇಬ್ಬರೂ ಕಾಂಗ್ರೆಸ್‌ನಲ್ಲಿದ್ದಾರೆ. ನಿರ್ಮಲಾ ಅತ್ತೆ ಆಂಧ್ರಪ್ರದೇಶದ ಕಾಂಗ್ರೆಸ್ ಶಾಸಕರಾಗಿದ್ದರೆ,ಮಾವ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದವರು.
ನಿರ್ಮಲಾ ಸೀತಾರಾಮನ್ 1990 ರಲ್ಲಿ ದೇಶಕ್ಕೆ ಮರಳಿದ ನಂತರ 2008ರಲ್ಲಿ ಬಿಜೆಪಿ ಸೇರಿದರು.ಎರಡು ವರ್ಷಗಳಲ್ಲಿ,ಅವರು ಸುಷ್ಮಾ ಸ್ವರಾಜ್ ನಂತರ ಪಕ್ಷದ ಎರಡನೇ ಮಹಿಳಾ ವಕ್ತಾರರಾದರು.ಟಿವಿ ಚರ್ಚಾ ಕಾರ್ಯಕ್ರಮಗಳಲ್ಲಿ ಪ್ರಸಿದ್ಧ ಮುಖವಾಗಿ ಹೊರ ಹೊಮ್ಮಿದರು.
2014ರಲ್ಲಿ ಮೋದಿ ಸರ್ಕಾರದ ಸಂಪುಟದಲ್ಲಿ ಸ್ಥಾನ ಪಡೆದರು. ಮೊದಲು ಹಣಕಾಸು ಖಾತೆ ರಾಜ್ಯ ಸಚಿವರಾದರು.2017 ರಲ್ಲಿ, ಅವರು ದೇಶದ ರಕ್ಷಣಾ ಸಚಿವರಾಗುವ ಗೌರವ ಪಡೆದರು. 2019ರಲ್ಲಿ ಅವರಿಗೆ ಹಣಕಾಸು ಸಚಿವರ ಜವಾಬ್ದಾರಿಯನ್ನು ನೀಡಲಾಯಿತು.
ಮೋದಿ 3.0 ನಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ನಿರ್ಮಲಾ ಸೀತಾರಾಮನ್ ಹಲವು ದಾಖಲೆಗಳನ್ನು ಮಾಡಿದ್ದಾರೆ. ಮೋದಿ ಸರ್ಕಾರದ ಸತತ ಮೂರನೇ ಅವಧಿಗೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದರೊಂದಿಗೆ ಹಣಕಾಸು ಸಚಿವರಾಗಿ ಪೂರ್ಣಾವಧಿ ಪೂರ್ಣಗೊಳಿಸುವ ಮೂಲಕ ಮಾಜಿ ಹಣಕಾಸು ಸಚಿವರಾದ ಅರುಣ್ ಜೇಟ್ಲಿ ಮತ್ತು ಮನಮೋಹನ್ ಸಿಂಗ್ ಅವರನ್ನು ಸರಿಗಟ್ಟಿದ್ದಾರೆ.
1. 2017ರಲ್ಲಿ ಮೊದಲ ಮಹಿಳಾ ರಕ್ಷಣಾ ಸಚಿವೆಯಾಗಿ ನೇಮಕಗೊಂಡು ಹೊಸ ದಾಖಲೆ ನಿರ್ಮಿಸಿದ್ದರು. 2. ಸ್ವತಂತ್ರ ಭಾರತದಲ್ಲಿ ಮೊದಲ ಪೂರ್ಣಾವಧಿ ಮಹಿಳಾ ಹಣಕಾಸು ಸಚಿವೆ ಎಂಬ ದಾಖಲೆ ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿದೆ. 3. ಸತತ ಆರನೇ ಬಜೆಟ್ ಮಂಡಿಸಿ ದಾಖಲೆ ಸೃಷ್ಟಿ 4. ಜುಲೈನಲ್ಲಿ ಸತತ ಏಳನೇ ಬಾರಿಗೆ ಬಜೆಟ್ ಮಂಡಿಸುವ ಮೂಲಕ, ಇನ್ನೂ ಒಂದು ಹೆಜ್ಜೆ ಮುಂದು.