ಕರೋನಾ ಅವಧಿಯಲ್ಲಿ ತಡೆಹಿಡಿಯಲಾಗಿರುವ ತುಟ್ಟಿಭತ್ಯೆಯನ್ನು ನೀಡಬೇಕು ಎನ್ನುವ ಒತ್ತಾಯ ಸರ್ಕಾರಿ ನೌಕರರಿಂದ ಕೇಳಿ ಬರುತ್ತಲೇ ಇದೆ. ಈಗ ಈ ಬಗ್ಗೆಯೂ ಮಾಹಿತಿ ಹೊರ ಬಿದ್ದಿದೆ.
ಬೆಂಗಳೂರು : ಕರೋನಾ ಸಮಯದಲ್ಲಿ ಉಂಟಾದ ಅಸಾಧಾರಣ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿತು. ಅದರ ಭಾಗವಾಗಿ, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಜನವರಿ 2020 ರಿಂದ ಜೂನ್ 2021 ರವರೆಗೆ ಸ್ಥಗಿತಗೊಳಿಸಲಾಗಿತ್ತು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಇತ್ತೀಚೆಗಷ್ಟೇ 8ನೇ ವೇತನ ಆಯೋಗದ ರಚನೆಯನ್ನು ಘೋಷಿಸುವ ಮೂಲಕ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇದರ ಬೆನ್ನಲ್ಲೇ ತಮ್ಮ ಇತರ ಬೇಡಿಕೆ ಬಗ್ಗೆಯೂ ನೌಕರರ ನಿರೀಕ್ಷೆ ಹೆಚ್ಚಾಗಿದೆ.
ಕರೋನಾ ಅವಧಿಯಲ್ಲಿ ತಡೆಹಿಡಿಯಲಾಗಿರುವ ತುಟ್ಟಿಭತ್ಯೆಯನ್ನು ನೀಡಬೇಕು ಎನ್ನುವ ಒತ್ತಾಯ ಸರ್ಕಾರಿ ನೌಕರರಿಂದ ಕೇಳಿ ಬರುತ್ತಲೇ ಇದೆ. ಈಗ ಈ ಬಗ್ಗೆಯೂ ಮಾಹಿತಿ ಹೊರ ಬಿದ್ದಿದೆ.
ಕರೋನಾ ಸಮಯದಲ್ಲಿ ಉಂಟಾದ ಅಸಾಧಾರಣ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರ ಸರ್ಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿತು. ಅದರ ಭಾಗವಾಗಿ, ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಮತ್ತು ಪಿಂಚಣಿದಾರರ ತುಟ್ಟಿಭತ್ಯೆಯನ್ನು ಜನವರಿ 2020 ರಿಂದ ಜೂನ್ 2021 ರವರೆಗೆ ಸ್ಥಗಿತಗೊಳಿಸಲಾಗಿತ್ತು.
ಇದೀಗ 18 ತಿಂಗಳ ಡಿಎ ಅರಿಯರ್ ಮೊತ್ತವನ್ನು ವಾಪಸ್ ನೀಡಬೇಕು ಎಂದು ಎನ್ಸಿ ಜೆಸಿಎಂ ಕಾರ್ಯದರ್ಶಿ ಗೋಪಾಲ್ ಮಿಶ್ರಾ ಹಣಕಾಸು ಸಚಿವಾಲಯಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ.
“ಸುಪ್ರೀಂ ಕೋರ್ಟ್ನ ತೀರ್ಪಿನ ಪ್ರಕಾರ ದೇಶದ ಆರ್ಥಿಕ ಪರಿಸ್ಥಿತಿ ತೃಪ್ತಿಕರವಾಗಿದೆ ಎಂದು ಪರಿಗಣಿಸಿ, ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ನೀಡಬೇಕಾದ 18 ತಿಂಗಳ ಬಾಕಿ ಡಿಎಯನ್ನು ನೌಕರರು ಮತ್ತು ಪಿಂಚಣಿದಾರರಿಗೆ ಮರುಪಾವತಿಸುವಂತೆ ಒತ್ತಾಯಿಸಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2025-26ನೇ ಹಣಕಾಸು ವರ್ಷದ ಬಜೆಟ್ ಅನ್ನು ಫೆಬ್ರವರಿ 1 ರಂದು ಮಂಡಿಸಲಿದ್ದಾರೆ. ಈ ಬಜೆಟ್ನಲ್ಲಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ 18 ತಿಂಗಳ ಬಾಕಿ ತುಟ್ಟಿಭತ್ಯೆಯನ್ನು ನೀಡುವ ಬಗ್ಗೆ ಘೋಷಿಸಲಿದ್ದಾರೆ ಎನ್ನಲಾಗಿದೆ.
18 ತಿಂಗಳ ಬಾಕಿ ಡಿಎಯನ್ನು ಸರ್ಕಾರ ವರ್ಗಾಯಿಸಿದರೆ ನೌಕರರ ಶ್ರೇಣಿಗೆ ಅನುಗುಣವಾಗಿ ಭಾರಿ ದೊಡ್ಡ ಮಟ್ಟದ ಮೊತ್ತ ಸರ್ಕಾರಿ ನೌಕರರ ಖಾತೆ ಸೇರುವುದು.