ಬೆಂಗಳೂರು : ಜ್ಯೋತಿಷ್ಯದ ಪ್ರಕಾರ, ಗ್ರಹಗಳ ಸಂಯೋಗವಾದಾಗಲೆಲ್ಲಾ, ಎಲ್ಲಾ ರಾಶಿಯವರ ಜೀವನದ ಮೇಲೆ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮ ಬೀರುತ್ತದೆ. ಜ್ಯೋತಿಷ್ಯ ಲೆಕ್ಕಾಚಾರಗಳ ಪ್ರಕಾರ, ಜನವರಿ 29 ರಂದು ಶುಕ್ರನು ಮೀನ ರಾಶಿಯನ್ನು ಪ್ರವೇಶಿಸಿದ್ದಾನೆ. ರಾಹು ಈಗಾಗಲೇ ಮೀನ ರಾಶಿಯಲ್ಲಿಯೇ ಇದ್ದಾನೆ. ಹೀಗಾಗಿ ಮೀನ ರಾಶಿಯಲ್ಲಿ ಶುಕ್ರ ಮತ್ತು ರಾಹುವಿನ ಸಂಯೋಗವಾಗಿದೆ. ರಾಹು ಮತ್ತು ಶುಕ್ರರ ಸಂಯೋಗವು 18 ವರ್ಷಗಳ ನಂತರ ಸಂಭವಿಸುತ್ತಿದೆ. ಇದು ಕೆಲವು ರಾಶಿಯವರಿಗೆ ಅತ್ಯಂತ ಶುಭವಾಗಿರಲಿದೆ.
ಮಿಥುನ ರಾಶಿ :
ಮಿಥುನ ರಾಶಿಯವರು ತಮ್ಮ ವೃತ್ತಿಜೀವನದಲ್ಲಿ ಪ್ರಗತಿಯನ್ನು ಪಡೆಯುತ್ತಾರೆ. ವ್ಯವಹಾರ ಮತ್ತು ಉದ್ಯೋಗದಲ್ಲಿ ಉತ್ತಮ ಫಲಿತಾಂಶಗಳು ದೊರೆಯುತ್ತವೆ. ಉದ್ಯೋಗದಲ್ಲಿರುವವರಿಗೆ ಬಡ್ತಿಯ ಲಾಭ ಸಿಗಬಹುದು. ಆದಾಯದ ಮೂಲಗಳು ಹುಟ್ಟಿಕೊಳ್ಳುತ್ತವೆ. ಅದೃಷ್ಟ ಇದ್ದಕ್ಕಿದ್ದಂತೆ ಹೊಳೆಯಲಿದೆ. ಸಂಪತ್ತಿನಲ್ಲಿ ಹೆಚ್ಚಳವಾಗಲಿದೆ.
ಇದನ್ನೂ ಓದಿ : ಮಾಘ ಪೂರ್ಣಿಮೆಯಂದು ಶುಭ ಕಾಕತಾಳೀಯ: ಈ 4 ರಾಶಿಯವರಿಗೆ ವೃತ್ತಿ & ಆರ್ಥಿಕ ಪ್ರಗತಿ, ಹಠಾತ್ ಧನಲಾಭ!!
ಕರ್ಕಾಟಕ ರಾಶಿ :
ಕರ್ಕಾಟಕ ರಾಶಿಯವರಿಗೆ ರಾಹು ಮತ್ತು ಶುಕ್ರನ ಸಂಯೋಗವು ಪ್ರಯೋಜನಕಾರಿಯಗಿರಲಿದೆ. ಅದೃಷ್ಟ ನಿಮ್ಮ ಕಡೆ ಇರುತ್ತದೆ. ಉದ್ಯೋಗಿಗಳು ಯಶಸ್ಸಿನ ಹೊಸ ಎತ್ತರಕ್ಕೆ ಏರುವರು. ಇದಲ್ಲದೆ, ವೃತ್ತಿಜೀವನದಲ್ಲಿ ಉತ್ತಮ ಬೆಳವಣಿಗೆಯಾಗಲಿದೆ. ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ವ್ಯವಹಾರದಲ್ಲಿ ಆರ್ಥಿಕ ಲಾಭಕ್ಕೆ ಹಲವು ಅವಕಾಶಗಳು ದೊರೆಯುತ್ತವೆ.
ಮೀನ ರಾಶಿ :
ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುವಿರಿ. ವ್ಯವಹಾರಕ್ಕೆ ಸಂಬಂಧಿಸಿದಂತೆ ವಿದೇಶ ಪ್ರವಾಸ ಮಾಡಬೇಕಾಗಬಹುದು. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಾಗುತ್ತದೆ. ಪೂರ್ವಜರ ಆಸ್ತಿಯಿಂದ ನಿಮಗೆ ಲಾಭವಾಗಬಹುದು. ಆರ್ಥಿಕ ಪರಿಸ್ಥಿತಿ ಮೊದಲಿಗಿಂತ ಉತ್ತಮವಾಗಿರುತ್ತದೆ. ಅನಿರೀಕ್ಷಿತವಾಗಿ ಹಣ ಒಲಿದು ಬರುವುದು.
ಇದನ್ನೂ ಓದಿ : ಗಣಪತಿ ಮೂಷಿಕನಷ್ಟೇ ಪ್ರೀತಿಸುವ ಏಕೈಕ ಜನ್ಮರಾಶಿಯಿದು: ಇವರಿಗೆ ಯಾರ ಕೆಟ್ಟದೃಷ್ಟಿಯೂ ಕಿಂಚಿತ್ತೂ ಬೀಳದಂತೆ ಜನ್ಮಜನ್ಮಕ್ಕೂ ಕಾಯುವನು ವಿನಾಯಕ
(ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ದೃಢೀಕರಿಸುವುದಿಲ್ಲ.)
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ