Ayodhya Rape Case: ಉತ್ತರಪ್ರದೇಶದ ಅಯೋಧ್ಯೆಯಲ್ಲಿ 22 ವರ್ಷದ ಯುವತಿಯನ್ನ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿದ್ದ ಯುವತಿಯೊಬ್ಬಳ ಕಣ್ಣುಗುಡ್ಡೆ ಕಿತ್ತು, ಬಟ್ಟೆ ಹರಿದು ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. 22 ವರ್ಷದ ಯುವತಿ ಗುರುವಾರ ರಾತ್ರಿಯಾದರೂ ಮನೆಗೆ ಬಾರದಿದ್ದಾಗ ಆತಂಕಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದರು. ಆದರೆ ದೂರು ಸ್ವೀಕರಿಸಿ ಸಹಕರಿಸಬೇಕಿದ್ದ ಪೊಲೀಸರೇ, ʼನಿಮ್ಮ ಮಗಳನ್ನು ನೀವೇ ಹುಡುಕಿಕೊಳ್ಳಿʼ ಅಂತಾ ಹೇಳಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಅಯೋಧ್ಯೆಯ ಕಾಲುವೆಯೊಂದರಲ್ಲಿ ಯುವತಿಯ ಮೃತದೇಹವು ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿ ಪತ್ತೆಯಾಗಿತ್ತು. ಆ ಮೃತದೇಹದ ಮೇಲೆ ಯಾವುದೇ ಬಟ್ಟೆ ಇರಲಿಲ್ಲ. ಕಣ್ಣುಗುಡ್ಡೆ ಕಿತ್ತುಹಾಕಲಾಗಿತ್ತು. ದೇಹದ ಹಲವೆಡೆ ಗಂಭೀರ ಗಾಯಗಳಾಗಿದ್ದವು. ಕೈಕಾಲುಗಳನ್ನು ಹಗ್ಗಗಳಿಂದ ಕಟ್ಟಲಾಗಿತ್ತು. ಆಕೆಯ ಮೇಲೆ ಅತ್ಯಾಚಾರ ನಡೆಸಿ ನಂತರ ಬರ್ಬರವಾಗಿ ಕೊಲೆ ಮಾಡಲಾಗಿದೆ ಅಂತಾ ಪೋಷಕರು ಶಂಕಿಸಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಯುವತಿಯ ಕುಟುಂಬಸ್ಥರು ಶುಕ್ರವಾರ ದೂರು ದಾಖಲಿಸಿದ ನಂತರ ಪೊಲೀಸರು ನಾಪತ್ತೆ ದೂರು ದಾಖಲಿಸಿಕೊಳ್ಳಲಾಗಿದೆ ಅಂತಾ ಅಧಿಕಾರಿ ಅಶುತೋಷ್ ತಿವಾರಿ ತಿಳಿಸಿದ್ದಾರೆ.
ಇದನ್ನೂ ಓದಿ: ಈ ಪ್ರಾಣಿಯ ಮಾಂಸ ತಿನ್ನುವ ಮುನ್ನ ಎಚ್ಚರ..! ಎಕ್ಸ್ ರೇನಲ್ಲಿ ಪತ್ತೆಯಾಯ್ತು ಜೀವ ತೆರೆಯುವ "ಹುಳು"..
ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅದರ ಫಲಿತಾಂಶ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಅಂತಾ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಕುಟುಂಬಸ್ಥರು ನೀಡಿಯೋ ಮಾಹಿತಿ ಪ್ರಕಾರ, ಮೃತ ಯುವತಿ ಭಗವದ್ ಕಥಾ ಕಾರ್ಯಕ್ರಮಕ್ಕೆ ಹೋಗಿದ್ದಳಂತೆ. ಆದರೆ ರಾತ್ರಿಯಾದರೂ ಮನೆಗೆ ಹಿಂತಿರುಗದಿದ್ದಾಗ ಆತಂಕಗೊಂಡು ಪೊಲೀಸರಿಗೆ ದೂರು ನೀಡಲು ಹೋಗಿದ್ದೇವು. ಆದರೆ ಆರಂಭದಲ್ಲಿ ದೂರು ಸ್ವೀಕರಿಸಲು ಪೊಲೀಸರು ಹಿಂದೇಟು ಹಾಕಿದರು. ʼನಿಮ್ಮ ಮಗಳನ್ನ ನೀವೇ ಹುಡುಕಿಕೊಳ್ಳಿʼ ಅಂತಾ ನಮಗೆ ಗದರಿಸಿದರುʼ ಎಂದು ಆರೋಪಿಸಿದ್ದಾರೆ. ಬಳಿಕ ಕಾಲುವೆಯಲ್ಲಿ ಆಕೆಯ ಮೃತದೇಹವನ್ನು ಕಂಡೆವು. ಆಕೆಯ ದೇಹದ ಮೇಲೆ ಯಾವುದೇ ಬಟ್ಟೆ ಇರಲಿಲ್ಲ. ಆಕೆಯನ್ನು ಹಗ್ಗಗಳಿಂದ ಕಟ್ಟಲಾಗಿತ್ತು, ಮೂಳೆಗಳು ಮುರಿದಿದ್ದವು. ಆಕೆಯನ್ನು ನಿರ್ದಯವಾಗಿ ಕೊಲ್ಲಲಾಗಿದೆ ಎಂದು ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.
ಕಣ್ಣೀರು ಸುರಿಸಿದ ಸಂಸದ
ಈ ಆಘಾತಕಾರಿ ಘಟನೆ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಫೈಜಾಬಾದ್ ಸಂಸದ ಅವಧೇಶ್ ಪ್ರಸಾದ್, ತಮ್ಮ ದುಃಖವನ್ನ ಹೊರಹಾಕುತ್ತಾ ಕಣ್ಣೀರು ಸುರಿಸಿದ್ದಾರೆ. ಅಯೋಧ್ಯೆಯ ಬಳಿ ಕೊಲೆಯಾಗಿ ಪತ್ತೆಯಾದ 22 ವರ್ಷದ ದಲಿತ ಮಹಿಳೆಯ ಕುಟುಂಬಕ್ಕೆ ನ್ಯಾಯ ಸಿಗದಿದ್ದರೆ ತಾವು ಲೋಕಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡುವುದಾಗಿʼ ಅವರು ಹೇಳಿದ್ದಾರೆ. ಅಯೋಧ್ಯೆಯು ಫೈಜಾಬಾದ್ ಸಂಸದೀಯ ಕ್ಷೇತ್ರದ ಭಾಗವಾಗಿದೆ.
यह जघन्य अपराध बेहद दुःखद हैं।
अयोध्या के ग्रामसभा सहनवां, सरदार पटेल वार्ड में 3 दिन से गायब दलित परिवार की बेटी का शव निर्वस्त्र अवस्था में मिला है, उसकी दोनों आँखें फोड़ दी गई हैं उसके साथ अमानवीय व्यवहार हुआ है।
यह सरकार इंसाफ नही कर सकती। pic.twitter.com/aSvI3N74Kl
— Awadhesh Prasad (@Awadheshprasad_) February 2, 2025
ಇದನ್ನೂ ಓದಿ: ಕುಂಭಮೇಳದಲ್ಲಿ ಬಹುದಿನಗಳ ಗೆಳತಿಯೊಂದಿಗೆ ಮದುವೆ! ಗ್ರೀಕ್ ಯುವತಿಯ ಕೈ ಹಿಡಿದ ಭಾರತೀಯ ಯುವಕ...
ʼನಾನು ದೆಹಲಿಗೆ ಹೋಗಿ ಈ ವಿಷಯವನ್ನು ಲೋಕಸಭೆಯಲ್ಲಿ ಪ್ರಧಾನಿ ಮೋದಿಯವರ ಮುಂದೆ ಪ್ರಸ್ತಾಪಿಸುತ್ತೇನೆ. ನಮಗೆ ನ್ಯಾಯ ಸಿಗದಿದ್ದರೆ ನಾನು ರಾಜೀನಾಮೆ ನೀಡುತ್ತೇನೆ. ನಾವು ಹೆಣ್ಣುಮಕ್ಕಳನ್ನು ಉಳಿಸುವಲ್ಲಿ ವಿಫಲರಾಗಿದ್ದೇವೆ. ಇತಿಹಾಸವು ನಮ್ಮನ್ನು ಹೇಗೆ ನೋಡುತ್ತದೆ? ʼಮರ್ಯಾದಾ ಪುರುಷೋತ್ತಮ ಶ್ರೀರಾಮ ಮತ್ತು ತಾಯಿ ಸೀತಾ ಮಾತೆ ನೀವು ಎಲ್ಲಿದ್ದೀರಿ?ʼ ಎಂದು ಅಳುತ್ತಾ ಸಂಸದರು ಪ್ರಶ್ನಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.