ರಿಂಕು ಸಿಂಗ್‌ಗೆ ಕೂಡಿಬಂತು ಕಂಕಣಭಾಗ್ಯ... ಪ್ರಖ್ಯಾತ ಸಂಸದೆ ಜೊತೆ ಸ್ಟಾರ್‌ ಕ್ರಿಕೆಟಿಗನ ಮದುವೆ! ಯಾರು ಗೊತ್ತಾ ಆ ಚೆಲುವೆ?

ಟೀಂ ಇಂಡಿಯಾದ ಸ್ಟಾರ್‌ ಕ್ರಿಕೆಟಿಗ ರಿಂಕು ಸಿಂಗ್, ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಅನೇಕ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ಹೇಳಲಾಗುತ್ತಿದೆ. ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆದರೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

Written by - Bhavishya Shetty | Last Updated : Jan 17, 2025, 06:30 PM IST
    • ಟೀಂ ಇಂಡಿಯಾದ ಸ್ಟಾರ್‌ ಕ್ರಿಕೆಟಿಗ ರಿಂಕು ಸಿಂಗ್ ವಿವಾಹ ನಿಶ್ಚಿತಾರ್ಥ
    • ರಿಂಕು ಸಿಂಗ್ ಭಾರತದ 2024 ರ ಟಿ20 ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು
    • ರಿಂಕು ಭಾರತ ಪರ 30 ಟಿ20 ಪಂದ್ಯಗಳನ್ನು ಆಡಿದ್ದು, 507 ರನ್ ಗಳಿಸಿದ್ದಾರೆ
ರಿಂಕು ಸಿಂಗ್‌ಗೆ ಕೂಡಿಬಂತು ಕಂಕಣಭಾಗ್ಯ... ಪ್ರಖ್ಯಾತ ಸಂಸದೆ ಜೊತೆ ಸ್ಟಾರ್‌ ಕ್ರಿಕೆಟಿಗನ ಮದುವೆ! ಯಾರು ಗೊತ್ತಾ ಆ ಚೆಲುವೆ? title=
Rinku Singh-Priya Saroj

Rinku Singh engagement: ಟೀಂ ಇಂಡಿಯಾದ ಸ್ಟಾರ್‌ ಕ್ರಿಕೆಟಿಗ ರಿಂಕು ಸಿಂಗ್, ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರೊಂದಿಗೆ ವಿವಾಹ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಅನೇಕ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಲ್ಲಿ ಹೇಳಲಾಗುತ್ತಿದೆ. ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದು ವರದಿಯಾಗಿದೆ. ಆದರೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: ಬುಧ-ಗುರುವಿನಿಂದ ರೂಪುಗೊಳ್ಳುವ ಷಡಷ್ಟಕ ಯೋಗ; ಈ ರಾಶಿಗಳಿಗೆ ಉದ್ಯೋಗದಲ್ಲಿ ಪ್ರಗತಿ, ಅಪಾರ ಧನಲಾಭ!!

ರಿಂಕು ಸಿಂಗ್ ಭಾರತದ 2024 ರ ಟಿ20 ವಿಶ್ವಕಪ್ ವಿಜೇತ ತಂಡದ ಭಾಗವಾಗಿದ್ದರು. ಜನವರಿ 22ರಿಂದ ಇಂಗ್ಲೆಂಡ್ ವಿರುದ್ಧ ಆರಂಭವಾಗುವ ಟಿ20 ಸರಣಿ ತಂಡದಲ್ಲಿ ರಿಂಕು ಸಿಂಗ್ ಸ್ಥಾನ ಪಡೆದಿದ್ದಾರೆ. ಐಪಿಎಲ್ 2023 ರಲ್ಲಿ ಹೆಸರು ಮಾಡಿದ ಕ್ರಿಕೆಟಿಗ, 2024ರ ಋತುವಿನಲ್ಲಿ 18.67 ರ ಸರಾಸರಿಯಲ್ಲಿ ಕೇವಲ 168 ರನ್ ಗಳಿಸಿದರು.

ರಿಂಕು ಭಾರತ ಪರ 30 ಟಿ20 ಪಂದ್ಯಗಳನ್ನು ಆಡಿದ್ದು, 507 ರನ್ ಗಳಿಸಿದ್ದಾರೆ. ಇದಲ್ಲದೆ, 2 ಏಕದಿನ ಪಂದ್ಯಗಳನ್ನು ಆಡಿರುವ ಅವರು 55 ರನ್ ಗಳಿಸಿದ್ದಾರೆ. ರಿಂಕು ಸಿಂಗ್ ಹಲವು ಸಂದರ್ಭಗಳಲ್ಲಿ ಮ್ಯಾಚ್‌ ಫಿನಿಶರ್‌ ಆಗಿ ಯಶಸ್ಸು ಕಂಡಿದ್ದಾರೆ. ಈಗ ರಿಂಕು ಅವರು ಸಮಾಜವಾದಿ ಪಕ್ಷದ ಸಂಸದೆ ಪ್ರಿಯಾ ಸರೋಜ್ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮದಲ್ಲಿ ಹೇಳಲಾಗುತ್ತಿದೆ.

ಇದನ್ನೂ ಓದಿ: Free Electricity Bill: ಕೇಂದ್ರ ಸರಕಾರದಿಂದ ಬಂಪರ್ ಆಫರ್: 300 ಯೂನಿಟ್ ಉಚಿತ ವಿದ್ಯುತ್, 78,000 ರೂ.ವರೆಗೆ ಸಬ್ಸಿಡಿ!

ಪ್ರಿಯಾ ಸರೋಜ್ ಯಾರು?
ಉತ್ತರ ಪ್ರದೇಶದ ವಾರಣಾಸಿಯಲ್ಲಿ 23 ನವೆಂಬರ್ 1998 ರಂದು ಜನಿಸಿದ ಪ್ರಿಯಾ ಸರೋಜ್ ಸಮಾಜವಾದಿ ಪಕ್ಷದ ಸದಸ್ಯೆ. ರಾಜಕೀಯದಲ್ಲಿ ಛಾಪು ಮೂಡಿಸಿದ ಅತ್ಯಂತ ಕಿರಿಯ ನಾಯಕಿಯರಲ್ಲಿ ಒಬ್ಬರು. ಪ್ರಿಯಾ ಸರೋಜ್ ಅವರು ಉತ್ತರ ಪ್ರದೇಶದ ಮೂರು ಬಾರಿ ಸಂಸದೆ ಮತ್ತು ಪ್ರಸ್ತುತ ಶಾಸಕಿ ತೂಫಾನಿ ಸರೋಜ್ ಅವರ ಪುತ್ರಿ. ತನ್ನ ತಂದೆಯ ಹೆಜ್ಜೆಗಳನ್ನು ಅನುಸರಿಸಿ, ಪ್ರಿಯಾ ರಾಜಕೀಯಕ್ಕೆ ಕಾಲಿಟ್ಟಿದ್ದು, 2024 ರಲ್ಲಿ ಮಚ್ಲಿಶಹರ್ ಕ್ಷೇತ್ರವನ್ನು ಪ್ರತಿನಿಧಿಸುವ ಮೂಲಕ ಲೋಕಸಭೆಗೆ ಆಯ್ಕೆಯಾದರು. ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಆ ಸ್ಥಾನವನ್ನು ಗೆದ್ದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News