ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧ ಐದನೇ ಮತ್ತು ಅಂತಿಮ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ ಸ್ಪೋಟಕ ಬ್ಯಾಟಿಂಗ್ ಪದರ್ಶನ ನೀಡುವ ಮೂಲಕ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.
ಟಾಸ್ ಗೆದ್ದ ಇಂಗ್ಲೆಂಡ್ ತಂಡವು ಟೀಮ್ ಇಂಡಿಯಾಗೆ ಬ್ಯಾಟಿಂಗ್ ಅವಕಾಶವನ್ನು ನೀಡಿತು. ಇದನ್ನು ಸದುಪಯೋಗಪಡಿಸಿಕೊಂಡ ಟೀಮ್ ಇಂಡಿಯಾ ಕೇವಲ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 247 ರನ್ ಗಳ ಬೃಹತ್ ಮೊತ್ತವನ್ನು ಗಳಿಸಿತು. ಟೀಮ್ ಇಂಡಿಯಾದ ಪರವಾಗಿ ಸ್ಪೋಟಕ ಬ್ಯಾಟಿಂಗ್ ಆಟವಾಡಿದ ಅಭಿಷೇಕ್ ವರ್ಮಾ ಭಾರತದ ಪರವಾಗಿ ಟಿ20 ಪಂದ್ಯಗಳಲ್ಲಿ ಎರಡನೇ ಅತಿ ವೇಗದ ಶತಕ ದಾಖಲಿಸಿದರು.ಇದಕ್ಕೂ ಮೊದಲು ರೋಹಿತ್ ಶರ್ಮಾ 2017 ರಲ್ಲಿ ಇಂದೋರ್‌ನಲ್ಲಿ ಶ್ರೀಲಂಕಾ ವಿರುದ್ಧ 35 ಎಸೆತಗಳಲ್ಲಿ ಶತಕ ಗಳಿಸಿದ್ದರು.
Abhishek Sharma’s rip-roaring knock at Wankhede propels him in the record books 🌟#INDvsENG 📝: https://t.co/vZbQbyBKWD pic.twitter.com/1iHxHbjRbl
— ICC (@ICC) February 2, 2025
ಇದೇ ವೇಳೆ ಅಭಿಷೇಕ್ ಶರ್ಮಾ 13 ಭರ್ಜರಿ ಸಿಕ್ಸರ್ ಗಳನ್ನು ಸಿಡಿಸುವ ಮೂಲಕ ಟಿ 20 ಪಂದ್ಯದಲ್ಲಿ ಅತಿ ಸಿಕ್ಸರ್ ಗಳನ್ನು ಸಿಡಿಸಿದ ದಾಖಲೆಯನ್ನು ನಿರ್ಮಿಸಿದರು.ಇದಕ್ಕೂ ಮೊದಲು ರೋಹಿತ್ ಶರ್ಮಾ ಶ್ರೀಲಂಕಾ ವಿರುದ್ಧ 10 ಸಿಕ್ಸರ್ ಗಳನ್ನು ಸಿಡಿಸಿದ ದಾಖಲೆಯನ್ನು ಹೊಂದಿದ್ದರು. ಇನ್ನು ಟಿ20ಐ ಪಂದ್ಯದಲ್ಲಿ ಕೇವಲ 54 ಎಸೆತಗಳಲ್ಲಿ 135 ರನ್ ಗಳಿಸುವ ಮೂಲಕ ಭಾರತದ ಪರ ಅತಿ ಹೆಚ್ಚು ವೈಯಕ್ತಿಕ ಸ್ಕೋರರ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ಸಹ ಅಭಿಷೇಕ್ ಶರ್ಮಾ ಪಾತ್ರರಾದರು.
ಅಷ್ಟೇ ಅಲ್ಲದೆ ಪವರ್ ಪ್ಲೇ ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತದ ಬ್ಯಾಟ್ಸ್ ಮನ್ ಎನ್ನುವ ಶ್ರೇಯ ಅಭಿಷೇಕ್ ಶರ್ಮಾ ಅವರದ್ದಾಗಿದೆ.ಅವರು ಈ ಇನ್ನಿಂಗ್ಸ್‌ನಲ್ಲಿ ಪವರ್‌ಪ್ಲೇನಲ್ಲಿ 58 ರನ್ ಗಳಿಸುವ ಮೂಲಕ ಈ ಸಾಧನೆ ಮಾಡಿದರು.ಇದಲ್ಲದೆ, ಅವರು ಕೇವಲ 11 ನೇ ಓವರ್‌ನಲ್ಲಿ ತಮ್ಮ ಶತಕವನ್ನು ಗಳಿಸಿದ್ದರಿಂದಾಗಿ ಭಾರತದಿಂದ ದಾಖಲಾದ ಅತಿ ವೇಗದ ಓವರ್‌ಗಳ ಶತಕವಾಗಿದೆ.ಇದಕ್ಕೂ ಮೊದಲು ಈ ದಾಖಲೆ ರೋಹಿತ್ ಹೆಸರಿನಲ್ಲಿತ್ತು, ಅವರು 12 ನೇ ಓವರ್‌ನಲ್ಲಿ ತಮ್ಮ ಶತಕ ಗಳಿಸಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.