ಚಾಂಪಿಯನ್‌ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಅಬ್ಬರಿಸಿದ್ರೆ ತೆಂಡೂಲ್ಕರ್‌ & ಪಾಟಿಂಗ್‌ ದಾಖಲೆಗಳು ಧೂಳಿಪಟವಾಗಲಿವೆ!!

Champions trophy 2025: ಭಾರತ ತಂಡದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ 2025 ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಬ್ಯಾಟ್‌ನಿಂದ ಅದ್ಭುತಗಳನ್ನು ಮಾಡಲು ಸಿದ್ಧರಾಗಿದ್ದಾರೆ. ಈ ಸಮಯದಲ್ಲಿ, ಅನೇಕ ದೊಡ್ಡ ದಾಖಲೆಗಳು ಅವರ ಗುರಿಯ ಮೇಲೆ ಇರುತ್ತವೆ.

Written by - Puttaraj K Alur | Last Updated : Feb 18, 2025, 11:33 PM IST
  • ನಾಳೆಯಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿ ಆರಂಭ
  • ಐಸಿಸಿ ಟೂರ್ನಮೆಂಟ್‌ನಲ್ಲಿ ಎಲ್ಲರ ಕಣ್ಣು ವಿರಾಟ್ ಕೊಹ್ಲಿ ಮೇಲಿವೆ
  • ಕೊಹ್ಲಿ ಅಬ್ಬರಿಸಿದರೆ ತೆಂಡೂಲ್ಕರ್‌ & ಪಾಟಿಂಗ್‌ ದಾಖಲೆ ಧೂಳಿಪಟ
ಚಾಂಪಿಯನ್‌ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಅಬ್ಬರಿಸಿದ್ರೆ ತೆಂಡೂಲ್ಕರ್‌ & ಪಾಟಿಂಗ್‌ ದಾಖಲೆಗಳು ಧೂಳಿಪಟವಾಗಲಿವೆ!! title=
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025

ICC Champions Trophy 2025: ಬುಧವಾರ(ಫೆಬ್ರವರಿ ೧೯)ದಿಂದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಆರಂಭವಾಗಲಿದೆ. ನಾಳೆ ಕರಾಚಿಯ ನ್ಯಾಷನಲ್‌ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಪಾಕಿಸ್ತಾನ vs ನ್ಯೂಜಿಲ್ಯಾಂಡ್‌ ಮುಖಾಮುಖಿಯಾಗಲಿವೆ. ಭಾರತ ತಂಡವು ಫೆಬ್ರವರಿ 20ರಂದು ದುಬೈನಲ್ಲಿ ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಎಲ್ಲಾ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ನೀಡುವ ನಿರೀಕ್ಷೆಯಿದ್ದರೂ, ಐಸಿಸಿ ಟೂರ್ನಮೆಂಟ್‌ನಲ್ಲಿ ಎಲ್ಲರ ಕಣ್ಣುಗಳು ವಿರಾಟ್ ಕೊಹ್ಲಿಯ ಮೇಲಿವೆ.

ಈ ಬಾರಿಯೂ ಸಹ 36 ವರ್ಷದ ವಿರಾಟ್ ಕೊಹ್ಲಿಯವರೇ ಪಂದ್ಯಾವಳಿಯ ಆಕರ್ಷಣೆಯ ಕೇಂದ್ರಬಿಂದುವಾಗಿದ್ದಾರೆ. ರನ್‌ ಮಷಿನ್‌ಗೆ ಇದು ಕೊನೆಯ ಚಾಂಪಿಯನ್ಸ್ ಟ್ರೋಫಿ ಎಂದು ಎಂದು ಹೇಳಲಾಗುತ್ತಿದೆ. ಹೀಗಾಗಿ ಕೊಹ್ಲಿ ತಮ್ಮ ಬ್ಯಾಟಿಂಗ್‌ನಿಂದ ಅದ್ಭುತ ಪ್ರದರ್ಶನ ನೀಡುವ ಮೂಲಕ ಹಲವಾರು ದಾಖಲೆಗಳನ್ನು ನಿರ್ಮಿಸಲು ಸಜ್ಜಾಗಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊಹ್ಲಿ ನಿರ್ಮಿಸಬಹುದಾದ ದಾಖಲೆಗಳ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...

ಇದನ್ನೂ ಓದಿ: GG ವಿರುದ್ಧದ ಸೆಣಸಾಟದಲ್ಲಿ MIಗೆ ಜಯ - 5 ವಿಕೆಟ್ ನಿಂದ ಮೊದಲ ಗೆಲುವು ಸಾಧಿಸಿದ ಮುಂಬೈ

ಸಚಿನ್ ತೆಂಡೂಲ್ಕರ್ ದಾಖಲೆ ಮುರಿಯಲಿದೆ!

ವಿರಾಟ್ ಕೊಹ್ಲಿ ಭಾರತ ಪರ 297 ಪಂದ್ಯಗಳಲ್ಲಿ 13,963 ರನ್ ಗಳಿಸಿದ್ದಾರೆ. ಅವರು ಇನ್ನೂ 37 ರನ್ ಗಳಿಸಿದರೆ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ 14000 ರನ್ ಗಳಿಸಿದ ಅತ್ಯಂತ ವೇಗದ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗುತ್ತಾರೆ. ಪ್ರಸ್ತುತ ಈ ದಾಖಲೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದೆ. ಸಚಿನ್ ತಮ್ಮ 359ನೇ ಏಕದಿನ ಪಂದ್ಯದ 350ನೇ ಇನ್ನಿಂಗ್ಸ್‌ನಲ್ಲಿ ಈ ಸಾಧನೆ ಮಾಡಿದರೆ, ಸಂಗಕ್ಕಾರ ತಮ್ಮ 402ನೇ ಪಂದ್ಯದ 378ನೇ ಇನ್ನಿಂಗ್ಸ್‌ನಲ್ಲಿ ಈ ಮಹಾನ್ ಸಾಧನೆ ಮಾಡಿದ್ದರು. ಕೊಹ್ಲಿ ಇದುವರೆಗೆ ಏಕದಿನ ಪಂದ್ಯಗಳಲ್ಲಿ 285 ಇನ್ನಿಂಗ್ಸ್‌ಗಳನ್ನು ಆಡಿದ್ದಾರೆ. ಇದರರ್ಥ ಸಚಿನ್ ಮತ್ತು ಸಂಗಕ್ಕಾರ ಅವರ ದಾಖಲೆಗಳು ಮುರಿಯುವುದು ಖಚಿತ. ಇಲ್ಲಿಯವರೆಗೆ ವಿಶ್ವದ ಇಬ್ಬರು ಬ್ಯಾಟ್ಸ್‌ಮನ್‌ಗಳು ಮಾತ್ರ ಅಂದರೆ ಸಚಿನ್ ಮತ್ತು ಸಂಗಕ್ಕಾರ ಏಕದಿನ ಕ್ರಿಕೆಟ್‌ನಲ್ಲಿ 14 ಸಾವಿರ ರನ್‌ಗಳನ್ನು ಪೂರೈಸಿದ್ದಾರೆ. 37 ರನ್ ಗಳಿಸಿದ ನಂತರ ವಿರಾಟ್ ಕೊಹ್ಲಿ ಏಕದಿನ ಪಂದ್ಯದಲ್ಲಿ 14 ಸಾವಿರ ರನ್ ಗಳಿಸಿದ ವಿಶ್ವದ ಮೂರನೇ ಆಟಗಾರನಾಗಲಿದ್ದಾರೆ. 

ವಿರಾಟ್ ಕೊಹ್ಲಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್ ಗಳಿಸುವ ಮೂರನೇ ಆಟಗಾರನಾಗುವ ಅವಕಾಶವೂ ಇದೆ. ಕೊಹ್ಲಿ 545 ಪಂದ್ಯಗಳಲ್ಲಿ 27,381 ರನ್ ಗಳಿಸಿದ್ದಾರೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರು 103 ರನ್ ಗಳಿಸಿದರೆ, ರಿಕಿ ಪಾಂಟಿಂಗ್‌ರನ್ನ ಹಿಂದಿಕ್ಕಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೂರನೇ ಅತಿಹೆಚ್ಚು ರನ್ ಗಳಿಸಿದ ಆಟಗಾರನಾಗುತ್ತಾರೆ. ಪಾಂಟಿಂಗ್ 560 ಪಂದ್ಯಗಳಲ್ಲಿ 27,483 ರನ್ ಗಳಿಸಿದ್ದಾರೆ. 

ಇದನ್ನೂ ಓದಿ: ಕ್ರೀಡಾಭಿಮಾನಿಗಳಿಗೆ ಬಿಗ್ ಸರ್ಪ್ರೈಸ್! ಐಪಿಎಲ್‌ಗೆ ಮರಳಿದ ಟೀಂ ಇಂಡಿಯಾ ಆಟಗಾರ...

ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿಹೆಚ್ಚು ರನ್‌ ಗಳಿಸಿದ ಆಟಗಾರರು

* ಸಚಿನ್ ತೆಂಡೂಲ್ಕರ್ - 34,357
* ಕುಮಾರ್ ಸಂಗಕ್ಕಾರ - 28,016
* ರಿಕಿ ಪಾಂಟಿಂಗ್ - 27,483
* ವಿರಾಟ್ ಕೊಹ್ಲಿ - 27,381 

ವಿರಾಟ್ ಕೊಹ್ಲಿ ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾಗವಹಿಸಿದ್ದು 2009ರಲ್ಲಿ. ಅಂದಿನಿಂದ ಕೊಹ್ಲಿ 13 ಚಾಂಪಿಯನ್ಸ್ ಟ್ರೋಫಿ ಪಂದ್ಯಗಳಲ್ಲಿ ಒಟ್ಟು 529 ರನ್ ಗಳಿಸಿದ್ದಾರೆ. ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊಹ್ಲಿ 263 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ವೆಸ್ಟ್ ಇಂಡೀಸ್‌ನ ಮಾಜಿ ನಾಯಕ ಕ್ರಿಸ್ ಗೇಲ್ ಅವರ 791 ರನ್‌ಗಳ ದಾಖಲೆಯನ್ನು ಹಿಂದಿಕ್ಕಲಿದ್ದಾರೆ ಮತ್ತು ಚಾಂಪಿಯನ್ಸ್ ಟ್ರೋಫಿಯ ಇತಿಹಾಸದಲ್ಲಿ ಅತಿಹೆಚ್ಚು ರನ್ ಗಳಿಸಿದ ಆಟಗಾರನೆಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ. ಇಷ್ಟೇ ಅಲ್ಲ ಚಾಂಪಿಯನ್ಸ್ ಟ್ರೋಫಿಯಲ್ಲಿ ಕೊಹ್ಲಿ 2 ಅರ್ಧಶತಕಗಳನ್ನು ಗಳಿಸಿದ ತಕ್ಷಣ ರಾಹುಲ್ ದ್ರಾವಿಡ್ ಅವರ ಅತಿಹೆಚ್ಚು ಅರ್ಧಶತಕಗಳ ದಾಖಲೆಯನ್ನೂ ಮುರಿಯಲಿದ್ದಾರೆ. ಕಿಂಗ್ ಕೊಹ್ಲಿ ಪ್ರಸ್ತುತ 5 ಅರ್ಧಶತಕಗಳನ್ನು ಗಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News