IND vs ENG, 3rd ODI: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪ್ರವಾಸಿ ಇಂಗ್ಲೆಂಡ್ ನಡೆಯುತ್ತಿರುವ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಆರಂಭಿಕ ಆಟಗಾರ ಶುಭಮನ್ ಗಿಲ್ ಸ್ಫೋಟಕ ಶತಕ ಸಿಡಿಸಿದ್ದಾರೆ. ಟಾಸ್ ಗೆದ್ದ ಇಂಗ್ಲೆಂಡ್ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ತಂಡವು ನಿಗದಿತ 50 ಓವರ್‌ಗಳಲ್ಲಿ ತನ್ನೆಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 356 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿತು.
ಶುಭಮನ್ ಗಿಲ್ ಸ್ಫೋಟಕ ಶತಕ!
ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ಕೇವಲ 1 ರನ್ ಗಳಿಸಿ ನಿರಾಸೆ ಮೂಡಿಸಿದರು. ಆದರೆ ಶುಭಮನ್ ಗಿಲ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. 102 ಎಸೆಗಳನ್ನು ಎದುರಿಸಿದ ಗಿಲ್ 14 ಬೌಂಡರಿ ಮತ್ತು 3 ಸಿಕ್ಸರ್ ಇದ್ದ 112 ರನ್ ಗಳಿಸಿ ಮಿಂಚಿದರು. ಇವರಿಗೆ ಉತ್ತಮ ಸಾಥ್ ನೀಡಿದ ವಿರಾಟ್ ಕೊಹ್ಲಿ (52) ಆಕರ್ಷಕ ಅರ್ಥಶಕತ ಸಿಡಿಸಿದರು. ಈ ಜೋಡಿ 2ನೇ ವಿಕೆಟ್‌ಗೆ 122 ರನ್‌ಗಳ ಅತ್ಯುತ್ತಮ ಜೊತೆಯಾಟವಾಡಿದರು.
𝐈𝐧𝐧𝐢𝐧𝐠𝐬 𝐁𝐫𝐞𝐚𝐤: An excellent batting performance has propelled #TeamIndia to 356-10, the second-highest ODI total at the Narendra Modi Stadium. Shubman Gill (112) struck an elegant century while Shreyas Iyer (78) and Virat Kohli (52) contributed with half-centuries.… pic.twitter.com/wqSVpYlV02
— BCCI (@BCCI) February 12, 2025
ಇದನ್ನೂ ಓದಿ: ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತಕ್ಕೆ ದೊಡ್ಡ ಆಘಾತ..! ಜಸ್ಪ್ರೀತ್ ಬುಮ್ರಾ ಔಟ್, ಈ ಆಟಗಾರ ತಂಡಕ್ಕೆ ಸೇರ್ಪಡೆ
ನಂತರ ಬಂದ ಶ್ರೇಯಸ್ ಅಯ್ಯರ್ (78) ಕೂಡ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಕನ್ನಡಿಗ ಕೆ.ಎಲ್.ರಾಹುಲ್ (40) ಗಳಿಸಿ ಔಟಾದರೆ, ಹಾರ್ದಿಕ್ ಪಾಂಡ್ಯ 17 ರನ್ ಗಳಿಸಿದರು. ಇಂಗ್ಲೆಂಡ್ ಪರ ಬೌಲಿಂಗ್‌ನಲ್ಲಿ ಆದಿಲ್ ರಶೀದ್ 64ಕ್ಕೆ 4 ವಿಕೆಟ್ ಪಡೆದರೆ, ಮಾರ್ಕ್ ವುಡ್ 45ಕ್ಕೆ 2 ವಿಕೆಟ್ ಪಡೆದು ಮಿಂಚಿದರು.
ಶುಭಮನ್ ಗಿಲ್ ದಾಖಲೆ!
ಈ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪದರ್ಶನದ ಮೂಲಕ ಶತಕ ಸಿಡಿಸಿ ಮಿಂಚಿದ ಶುಭಮನ್ ಗಿಲ್ ಹೊಸ ದಾಖಲೆಯೊಂದನ್ನು ನಿರ್ಮಿಸಿದರು. ಕೇವಲ 50 ಇನ್ನಿಂಗ್ಸ್‌ಗಳಲ್ಲಿ 2,500 ರನ್ ಗಳಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.