“ಈ 2 ಶ್ರೇಷ್ಠ ತಂಡಗಳು ಚಾಂಪಿಯನ್ಸ್ ಟ್ರೋಫಿ ಫೈನಲ್‌ ಪ್ರವೇಶಿಸುತ್ತವೆ”- ಟೂರ್ನಿ ಆರಂಭಕ್ಕೂ ಮುನ್ನ ಭವಿಷ್ಯ ನುಡಿದ ಆಸೀಸ್ ದಿಗ್ಗಜ ರಿಕಿ ಪಾಂಟಿಂಗ್

Ricky Ponting statement about ICC Champions Trophy: ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯಾವಳಿಯು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. 50 ಓವರ್‌ಗಳ ವಿಶ್ವಕಪ್ ನಂತರ, ಮುಂದಿನ ಅತ್ಯುನ್ನತ ಟ್ರೋಫಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯಾಗಿದೆ. ಒಂದು ರೀತಿಯಲ್ಲಿ ಇದನ್ನು ಮಿನಿ ವಿಶ್ವಕಪ್ ಎಂದೂ ಕರೆಯುತ್ತಾರೆ.

Written by - Bhavishya Shetty | Last Updated : Feb 2, 2025, 12:07 PM IST
    • ಆಸ್ಟ್ರೇಲಿಯಾ ತಂಡವನ್ನು ಎರಡು ವಿಶ್ವಕಪ್ ಗೆಲುವುಗಳಿಗೆ ಮುನ್ನಡೆಸಿದ್ದ ನಾಯಕ ರಿಕಿ ಪಾಂಟಿಂಗ್
    • ರಿಕಿ ಪಾಂಟಿಂಗ್, ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬಗ್ಗೆ ಭವಿಷ್ಯ ನುಡಿದಿದ್ದಾರೆ.
    • ಅಂತಿಮ ಪಂದ್ಯ ನಡೆಯಲಿರುವ ಎರಡು ತಂಡಗಳನ್ನು ರಿಕಿ ಪಾಂಟಿಂಗ್ ಹೆಸರಿಸಿದ್ದಾರೆ.
“ಈ 2 ಶ್ರೇಷ್ಠ ತಂಡಗಳು ಚಾಂಪಿಯನ್ಸ್ ಟ್ರೋಫಿ ಫೈನಲ್‌ ಪ್ರವೇಶಿಸುತ್ತವೆ”- ಟೂರ್ನಿ ಆರಂಭಕ್ಕೂ ಮುನ್ನ ಭವಿಷ್ಯ ನುಡಿದ ಆಸೀಸ್ ದಿಗ್ಗಜ ರಿಕಿ ಪಾಂಟಿಂಗ್ title=
File Photo

Ricky Ponting statement about ICC Champions Trophy: ಆಸ್ಟ್ರೇಲಿಯಾ ತಂಡವನ್ನು ಎರಡು ವಿಶ್ವಕಪ್ ಗೆಲುವುಗಳಿಗೆ (2003 ಮತ್ತು 2007) ಮುನ್ನಡೆಸಿದ್ದ ನಾಯಕ ರಿಕಿ ಪಾಂಟಿಂಗ್, ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಬಗ್ಗೆ ಭವಿಷ್ಯ ನುಡಿದಿದ್ದಾರೆ. ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯ ನಡೆಯಲಿರುವ ಎರಡು ತಂಡಗಳನ್ನು ರಿಕಿ ಪಾಂಟಿಂಗ್ ಹೆಸರಿಸಿದ್ದಾರೆ.

ಇದನ್ನೂ ಓದಿ: ಇದನ್ನು ಹಚ್ಚಿದ ನಿಮಿಷಕ್ಕೆ ಒಂದೇ ಒಂದು ಬಿಳಿಕೂದಲು ಸಹ ಬಾಕಿಯಾಗದಂತೆ ಬೇರಿನಿಂದಲೇ ಕಡುಕಪ್ಪಾಗುತ್ತೆ!

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯಾವಳಿಯು ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. 50 ಓವರ್‌ಗಳ ವಿಶ್ವಕಪ್ ನಂತರ, ಮುಂದಿನ ಅತ್ಯುನ್ನತ ಟ್ರೋಫಿ ಐಸಿಸಿ ಚಾಂಪಿಯನ್ಸ್ ಟ್ರೋಫಿಯಾಗಿದೆ. ಒಂದು ರೀತಿಯಲ್ಲಿ ಇದನ್ನು ಮಿನಿ ವಿಶ್ವಕಪ್ ಎಂದೂ ಕರೆಯುತ್ತಾರೆ. ಭಾರತ ತಂಡವು ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧದ ಪಂದ್ಯದೊಂದಿಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಟೂರ್ನಮೆಂಟ್‌ನಲ್ಲಿ ಪಾದಾರ್ಪಣೆ ಮಾಡಲಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಅದ್ಧೂರಿ ಪಂದ್ಯ ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲಿದೆ. ಮಾರ್ಚ್ 2 ರಂದು ಟೀಮ್ ಇಂಡಿಯಾ ಅಪಾಯಕಾರಿ ತಂಡ ನ್ಯೂಜಿಲೆಂಡ್ ಅನ್ನು ಎದುರಿಸಲಿದೆ.

ರಿಕಿ ಪಾಂಟಿಂಗ್ ಭವಿಷ್ಯವಾಣಿ:
2025ರ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಅಂತಿಮ ಪಂದ್ಯ ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿದೆ ಎಂದು ರಿಕಿ ಪಾಂಟಿಂಗ್ ದೊಡ್ಡ ಭವಿಷ್ಯ ನುಡಿದಿದ್ದಾರೆ. 'ಭಾರತ ಮತ್ತು ಆಸ್ಟ್ರೇಲಿಯಾವನ್ನು ಹಿಂದಿಕ್ಕುವುದು ಕಷ್ಟ. ಈಗ ಎರಡೂ ದೇಶಗಳ ಆಟಗಾರರ ಗುಣಮಟ್ಟದ ಬಗ್ಗೆ ಯೋಚಿಸಿ ಮತ್ತು ಇತ್ತೀಚಿನ ಇತಿಹಾಸವನ್ನು ನೋಡಿ... ಫೈನಲ್‌ಗಳು ಮತ್ತು ಐಸಿಸಿ ಈವೆಂಟ್‌ಗಳು ನಡೆದಾಗಲೆಲ್ಲಾ, ಆಸ್ಟ್ರೇಲಿಯಾ ಮತ್ತು ಭಾರತ ಇರುತ್ತವೆ" ಎಂದಿದ್ದಾರೆ.

ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಪ್ರಕಾರ, ಈ ರೇಸ್‌ನಲ್ಲಿ ಮತ್ತೊಬ್ಬ ಸ್ಪರ್ಧಿ ಇದ್ದಾರೆ. ಆತಿಥೇಯ ಪಾಕಿಸ್ತಾನ ಎರಡೂ ತಂಡಗಳಿಗೆ ಕಠಿಣ ಸವಾಲನ್ನು ಒಡ್ಡಬಲ್ಲದು ಎಂದು ರಿಕಿ ಪಾಂಟಿಂಗ್ ನಂಬಿದ್ದಾರೆ. 'ಪ್ರಸ್ತುತ ಉತ್ತಮ ಕ್ರಿಕೆಟ್ ಆಡುತ್ತಿರುವ ಮತ್ತೊಂದು ತಂಡ ಪಾಕಿಸ್ತಾನ' ಎಂದು ರಿಕಿ ಪಾಂಟಿಂಗ್ ಹೇಳಿದರು.

ಇದನ್ನೂ ಓದಿ: ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ... ಬಜೆಟ್ ದಿನದಂದು ಆಭರಣ ಪ್ರಿಯರಿಗೆ ಬಿಗ್‌ ಶಾಕ್‌ !!

ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತದ ಪಂದ್ಯಗಳು
ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಪಂದ್ಯಾವಳಿ ಫೆಬ್ರವರಿ 19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಭಾರತ ತಂಡವು ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧದ ಪಂದ್ಯದೊಂದಿಗೆ ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಟೂರ್ನಮೆಂಟ್‌ನಲ್ಲಿ ಪಾದಾರ್ಪಣೆ ಮಾಡಲಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಅದ್ಧೂರಿ ಪಂದ್ಯ ಫೆಬ್ರವರಿ 23 ರಂದು ದುಬೈನಲ್ಲಿ ನಡೆಯಲಿದೆ. ಮಾರ್ಚ್ 2 ರಂದು ಟೀಮ್ ಇಂಡಿಯಾ ಅಪಾಯಕಾರಿ ತಂಡ ನ್ಯೂಜಿಲೆಂಡ್ ಅನ್ನು ಎದುರಿಸಲಿದೆ. ಭಾರತ ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಮುನ್ನಡೆದರೆ, ಸೆಮಿಫೈನಲ್ ಮತ್ತು ಫೈನಲ್ ಸೇರಿದಂತೆ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ.

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News