ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ.. ನಾಲ್ಕು ಸ್ಟಾರ್ ಆಟಗಾರರಿಗೆ ಗಾಯ!

Four star players injured: ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡದಲ್ಲಿ ದೀರ್ಘಕಾಲದ ಗಾಯದ ನಂತರ ಮೂವರು ಆಟಗಾರರು ಮರಳಲಿದ್ದಾರೆ. ಜಸ್ಪ್ರೀತ್ ಬುಮ್ರಾ ಆಟದ ಪರಿಸ್ಥಿತಿ ಸ್ಪಷ್ಟವಾಗಿಲ್ಲ. ಸ್ಕ್ಯಾನಿಂಗ್ ನಂತರ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು.  

Written by - Savita M B | Last Updated : Jan 20, 2025, 06:14 PM IST
  • ಚಾಂಪಿಯನ್ಸ್ ಟ್ರೋಫಿಗೆ ಭಾರತೀಯ ತಂಡವನ್ನು ಪ್ರಕಟಿಸಲಾಗಿದೆ.
  • ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಹಳಿತಪ್ಪುವ ಸಾಧ್ಯತೆಯಿದೆ.
ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಟೀಂ ಇಂಡಿಯಾಗೆ ಆಘಾತ.. ನಾಲ್ಕು ಸ್ಟಾರ್ ಆಟಗಾರರಿಗೆ ಗಾಯ!  title=

Team India: ಚಾಂಪಿಯನ್ಸ್ ಟ್ರೋಫಿಗೆ ಭಾರತೀಯ ತಂಡವನ್ನು ಪ್ರಕಟಿಸಲಾಗಿದೆ. ಸುದೀರ್ಘ ಸಮಯದ ನಂತರ ಮೊಹಮ್ಮದ್ ಶಮಿ ಮತ್ತು ಹಾರ್ದಿಕ್ ಪಾಂಡ್ಯ ಏಕದಿನ ತಂಡಕ್ಕೆ ಮರಳಿದ್ದಾರೆ. ಕುಲದೀಪ್ ಯಾದವ್ ಮತ್ತು ಜಸ್ಪ್ರೀತ್ ಬುಮ್ರಾ ಕೂಡ ತಂಡದಲ್ಲಿದ್ದಾರೆ. ಆದರೆ, ಕಳೆದ ಕೆಲವು ತಿಂಗಳುಗಳಿಂದ ಈ ನಾಲ್ವರು ಆಟಗಾರರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇವರೆಲ್ಲರೂ ಚಾಂಪಿಯನ್ಸ್ ಟ್ರೋಫಿಯ ಪ್ಲೇಯಿಂಗ್‌ ೧೧ರಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತವಾಗಿದೆ. ಆದರೆ, ಅವರ ಫಿಟ್ನೆಸ್ ಬಗ್ಗೆ ಅತಿಯಾದ ಆತ್ಮವಿಶ್ವಾಸವಿಲ್ಲವಾಗಿದ್ದರಿಂದ ಟೀಂ ಇಂಡಿಯಾಗೆ ದೊಡ್ಡ ಅಪಾಯ ಎದುರಾಗಿದೆ. ಪ್ರಮುಖ ಆಟಗಾರರು ಗಾಯಗೊಂಡಿರುವ ಕಾರಣ ಟೀಮ್ ಇಂಡಿಯಾದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಹಳಿತಪ್ಪುವ ಸಾಧ್ಯತೆಯಿದೆ.

ಜಸ್ಪ್ರೀತ್ ಬುಮ್ರಾ:
ಸಿಡ್ನಿ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾದ ಮೊದಲ ಇನ್ನಿಂಗ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ ಬೆನ್ನು ನೋವಿನಿಂದ ಬಳಲುತ್ತಿದ್ದರು. ಬಳಿಕ ಅವರನ್ನು ಸ್ಕ್ಯಾನಿಂಗ್‌ಗೆ ಕರೆದೊಯ್ಯಲಾಯಿತು. ಅವರು ಚಾಂಪಿಯನ್ಸ್ ಟ್ರೋಫಿ ತಂಡಕ್ಕೆ ಆಯ್ಕೆಯಾದರು. ಆದರೆ, ಈ ಟೂರ್ನಿಯಲ್ಲಿ ಅವರ ಪರಿಸ್ಥಿತಿ ಇನ್ನೂ ಸ್ಪಷ್ಟವಾಗಿಲ್ಲ. ಫೆಬ್ರವರಿ 2 ರಂದು ಬುಮ್ರಾ ಅವರನ್ನು ಸ್ಕ್ಯಾನ್ ಮಾಡಲಾಗುವುದು ಮತ್ತು ನಂತರ ನಿರ್ಧಾರ ತೆಗೆದುಕೊಳ್ಳಲಾಗುವುದು.

ಮೊಹಮ್ಮದ್ ಶಮಿ:
ಮೊಹಮ್ಮದ್ ಶಮಿ 2023 ರ ಏಕದಿನ ವಿಶ್ವಕಪ್ ಫೈನಲ್ ನಂತರ ಪಾದದ ಗಾಯದಿಂದ ಬಳಲುತ್ತಿದ್ದರು. ನಂತರ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅಂದಿನಿಂದ ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ದೂರ ಉಳಿದಿದ್ದರು. ಆದರೂ ಆಯ್ಕೆಗಾರರು ಚಾಂಪಿಯನ್ಸ್ ಟ್ರೋಫಿಗಾಗಿ ಅವರ ಮೇಲೆ ನಂಬಿಕೆ ಇಟ್ಟಿದ್ದಾರೆ. ಶಮಿ ಗಾಯದಿಂದ ಚೇತರಿಸಿಕೊಂಡಿದ್ದಾರೆ. ಇತ್ತೀಚೆಗಷ್ಟೇ ದೇಶಿ ಕ್ರಿಕೆಟ್‌ನಲ್ಲಿ ಕಣಕ್ಕೆ ಇಳಿದಿದ್ದರು. ಆದರೆ ಸುಮಾರು 14 ತಿಂಗಳ ನಂತರ ಏಕದಿನ ಕ್ರಿಕೆಟ್‌ನಲ್ಲಿ ಆಡುವುದು ಅವರಿಗೆ ಸುಲಭವಾಗಿರಲಿಲ್ಲ.  

ಹಾರ್ದಿಕ್ ಪಾಂಡ್ಯ:
ಹಾರ್ದಿಕ್ ಪಾಂಡ್ಯ ಚಾಂಪಿಯನ್ಸ್ ಟ್ರೋಫಿ ಮೂಲಕ 15 ತಿಂಗಳ ನಂತರ ಏಕದಿನ ಕ್ರಿಕೆಟ್‌ಗೆ ಮರಳಲಿದ್ದಾರೆ. ಹಾರ್ದಿಕ್ ಕೂಡ ಗಾಯದಿಂದ ಬಳಲುತ್ತಿದ್ದಾರೆ. 19 ಅಕ್ಟೋಬರ್ 2023 ರಂದು ಬಾಂಗ್ಲಾದೇಶ ವಿರುದ್ಧದ ವಿಶ್ವಕಪ್ ಪಂದ್ಯದ ವೇಳೆ ಹಾರ್ದಿಕ್ ಪಾದದ ಗಾಯಕ್ಕೆ ಒಳಗಾಗಿದ್ದರು. ಆ ಬಳಿಕ ಅವರು ಯಾವುದೇ ಏಕದಿನ ಪಂದ್ಯ ಆಡಿಲ್ಲ. ಆದರೆ, ಅವರು ದೇಶೀಯ ಕ್ರಿಕೆಟ್, IPL 2024, T-20 ವಿಶ್ವಕಪ್‌ನಲ್ಲಿ ಆಡಿದರು. ಚಾಂಪಿಯನ್ಸ್ ಟ್ರೋಫಿಯನ್ನು 50 ಓವರ್ ಮಾದರಿಯಲ್ಲಿ ಆಡಲಾಗುತ್ತದೆ. ನಿರಂತರ ಗಾಯಗಳಿಂದಾಗಿ ಹಾರ್ದಿಕ್ ಅವರನ್ನು ಚಾಂಪಿಯನ್ಸ್ ಟ್ರೋಫಿ ತಂಡದ ಉಪನಾಯಕನನ್ನಾಗಿ ಮಾಡಲಾಗಿಲ್ಲ. ಯುವ ಆಟಗಾರ ಶುಭಮನ್ ಗಿಲ್ ಅವರಿಗೆ ಈ ಜವಾಬ್ದಾರಿ ನೀಡಲಾಗಿದೆ.

ಕುಲದೀಪ್ ಯಾದವ್:
ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ಕುಲದೀಪ್ ಯಾದವ್ 2024 ರಲ್ಲಿ ನ್ಯೂಜಿಲೆಂಡ್ ವಿರುದ್ಧದ ತವರು ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಗಾಯಗೊಂಡರು. ಅವರು ತೊಡೆಸಂದು ಗಾಯದಿಂದ ತೊಂದರೆಗೀಡಾದರು. ನಂತರ ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ಈ ಗಾಯದಿಂದ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಜನವರಿ 22ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಜೊತೆಗೆ ಚಾಂಪಿಯನ್ಸ್ ಟ್ರೋಫಿ ತಂಡದಲ್ಲಿಯೂ ಸ್ಥಾನ ಪಡೆದಿದ್ದಾರೆ. ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ಗಾಯದಿಂದ ಹಿಂತಿರುಗಲು ಮತ್ತು ತನ್ನನ್ನು ತಾನು ಸಾಬೀತುಪಡಿಸಲು ಕುಲದೀಪ್‌ಗೆ ಉತ್ತಮ ಅವಕಾಶವಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News