ಪುಣೆ: ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೀ 20 ಪಂದ್ಯದಲ್ಲಿ ಟೀಮ್ ಇಂಡಿಯಾ 15 ರನ್ ಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದೆ.
ಟಾಸ್ ಗೆದ್ದು ಇಂಗ್ಲೆಂಡ್ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು, ಇದೆ ವೇಳೆ ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ 20 ಓವರ್ ಗಳಲ್ಲಿ ಒಂಬತ್ತು ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿತು.ಟೀಮ್ ಇಂಡಿಯಾದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ಶಿವಂ ದುಭೆ 53,ಹಾರ್ದಿಕ್ ಪಾಂಡ್ಯ 53, ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು.ಟೀಮ್ ಇಂಡಿಯಾ ನೀಡಿದ 182 ರನ್ ಗಳ ಗೆಲುವಿನ ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡವು 19.4 ಓವರ್ ಗಳಲ್ಲಿ ಎಲ್ಲ ವಿಕೆಟ್ ಕಳೆದುಕೊಂಡು 166 ರನ್ ಗಳನ್ನಷ್ಟೇ ಗಳಿಸಲು ಶಕ್ತವಾಯಿತು.
An all-round show helps India clinch the T20I series in Pune, taking an unassailable 3-1 lead 👏#INDvsENG 📝: https://t.co/pZoGk04y47 pic.twitter.com/rxSeWCVy7J
— ICC (@ICC) January 31, 2025
ಭಾರತದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ರವಿ ಬಿಶ್ನೋಯ್, ಹರ್ಷಿತ್ ರಾಣಾ,ತಲಾ ಮೂರು ವಿಕೆಟ್ ಕಬಳಿಸುವ ಮೂಲಕ ಇಂಗ್ಲೆಂಡ್ ತಂಡದ ಬ್ಯಾಟಿಂಗ್ ಬೆನ್ನೆಲುಬು ಮುರಿದರು.ಆ ಮೂಲಕ ಐದು ಪಂದ್ಯಗಳ ಟಿ 20 ಟೂರ್ನಿಯಲ್ಲಿ ಭಾರತ ಈಗ 3-1 ಅಂತರದಿಂದ ಸರಣಿಯನ್ನು ವಶಪಡಿಸಿಕೊಂಡಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.