India vs New Zealand : T20 ವಿಶ್ವಕಪ್ 2022 ರ ಸೆಮಿಫೈನಲ್‌ನಲ್ಲಿ ಹೀನಾಯವಾಗಿ ಸೋತ ನಂತರ ಇದೀಗ ಏಕಾಏಕಿ ಟೀಮ್ ಇಂಡಿಯಾದ ಕೋಚ್ ಅನ್ನು ಬದಲಾಯಿಸಲಾಗಿದೆ. ಮುಂಬರುವ ನ್ಯೂಜಿಲೆಂಡ್ ಪ್ರವಾಸದಲ್ಲಿ ವಿವಿಎಸ್ ಲಕ್ಷ್ಮಣ್ ಭಾರತ ತಂಡದ ಕೋಚ್ ಆಗಲಿದ್ದಾರೆ. ಟಿ20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ನೇತೃತ್ವದ ಕೋಚಿಂಗ್ ಸಿಬ್ಬಂದಿಗೆ ವಿರಾಮ ನೀಡಲಾಗಿದೆ. ಗುರುವಾರ ನಡೆದ ಟಿ20 ವಿಶ್ವಕಪ್‌ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 10 ವಿಕೆಟ್‌ಗಳ ಸೋಲು ಅನುಭವಿಸಿತ್ತು.
T20 ವಿಶ್ವಕಪ್ ಸೋಲಿನ ನಂತರ ಹೊಸ ಕೋಚ್ :
ಇದೀಗ ನ್ಯೂಜಿಲೆಂಡ್ ಪ್ರವಾಸದಲ್ಲಿ ಭಾರತ 3 ಟಿ20 ಮತ್ತು 3 ಏಕದಿನ ಸರಣಿಯನ್ನು ಆಡಬೇಕಿದೆ. ಈ ವೈಟ್ ಬಾಲ್ ಸರಣಿಯು ನವೆಂಬರ್ 18 ರಿಂದ ವೆಲ್ಲಿಂಗ್ಟನ್ ನಲ್ಲಿ ಆರಂಭವಾಗಲಿದೆ. ನಾಯಕ ರೋಹಿತ್ ಶರ್ಮಾ, ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ, ಆರಂಭಿಕ ಕೆಎಲ್ ರಾಹುಲ್ ಮತ್ತು ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರಂತಹ ಹಿರಿಯ ಆಟಗಾರರಿಗೆ ಪ್ರವಾಸದಲ್ಲಿ ವಿಶ್ರಾಂತಿ ನೀಡಲಾಗಿದೆ. ಇದರೊಂದಿಗೆ ಟಿ20 ವಿಶ್ವಕಪ್ ಬಳಿಕ ಕೋಚಿಂಗ್ ಸಿಬ್ಬಂದಿಗೂ ವಿಶ್ರಾಂತಿ ನೀಡಲಾಗಿದೆ.
ಇದನ್ನೂ ಓದಿ : ಹಲವು ಕ್ರಿಕೆಟಿಗರು ನಿವೃತ್ತಿ, ಈತನೇ ಟೀಂ ಇಂಡಿಯಾದ ಭವಿಷ್ಯದ ನಾಯಕ: ಸುನಿಲ್ ಗವಾಸ್ಕರ್
ಇವರೇ ಮುಂದಿನ ಕೋಚ್ :
"ಲಕ್ಷ್ಮಣ್ ನೇತೃತ್ವದ ಎನ್‌ಸಿಎ ತಂಡವು ನ್ಯೂಜಿಲೆಂಡ್‌ಗೆ ಪ್ರಯಾಣಿಸುವ ತಂಡದೊಂದಿಗೆ ಸೇರಿಕೊಳ್ಳಲಿದೆ. ಈ ತಂಡ ಹೃಷಿಕೇಶ್ ಕಾನಿಟ್ಕರ್ (ಬ್ಯಾಟಿಂಗ್ ಕೋಚ್) ಮತ್ತು ಸಾಯಿರಾಜ್ ಬಹುಲೆ (ಬೌಲಿಂಗ್ ಕೋಚ್) ಅವರನ್ನು ಒಳಗೊಂಡಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ತಂಡದ ನಾಯಕ ಯಾರಾಗಲಿದ್ದಾರೆ ? :
ಭಾರತ ತಂಡದಲ್ಲಿ ಲಕ್ಷ್ಮಣ್ ಅವರಿಗೆ ಈ ಜವಾಬ್ದಾರಿ ನೀಡಿರುವುದು ಇದೇ ಮೊದಲಲ್ಲ. ಲಕ್ಷ್ಮಣ್ ಅವರು, ಈ ಹಿಂದೆ ಜಿಂಬಾಬ್ವೆ ಮತ್ತು ಐರ್ಲೆಂಡ್ ಪ್ರವಾಸಗಳಲ್ಲಿ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಇತ್ತೀಚಿನ ಏಕದಿನ ಸರಣಿಯಲ್ಲಿ ತಂಡದ ತರಬೇತುದಾರರಾಗಿ ಜವಾಬ್ದಾರಿ ಹೊತ್ತಿದ್ದರು. ಇನ್ನು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಟಿ20 ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದು, ಅನುಭವಿ ಆರಂಭಿಕ ಆಟಗಾರ ಶಿಖರ್ ಧವನ್ ಏಕದಿನ ತಂಡವನ್ನು ಮುನ್ನಡೆಸಲಿದ್ದಾರೆ.
ಇದನ್ನೂ ಓದಿ : ಆ ಮಾಡೆಲ್ ನ ಜೊತೆಗಿನ ಬೋಲ್ಡ್ ಫೋಟೋ ಶೂಟ್ ನಿಂದಾಗಿಯೇ ಮಿರ್ಜಾ–ಮಲಿಕ್ ದಂಪತಿ ಡೈವರ್ಸ್?
ಬಾಂಗ್ಲಾದೇಶ ಪ್ರವಾಸಕ್ಕೆ ಮರಳಿರುವ ರೋಹಿತ್ ಶರ್ಮಾ :
ನಾಯಕ ರೋಹಿತ್ ಬಾಂಗ್ಲಾದೇಶ ಪ್ರವಾಸಕ್ಕೆ ಮರಳಲಿದ್ದಾರೆ. ಬಾಂಗ್ಲಾದೇಶ ಪ್ರವಾಸದ ವೇಳೆಗೆ ಕೊಹ್ಲಿ ಮತ್ತು ಅಶ್ವಿನ್ ಕೂಡಾ ತಂಡಕ್ಕೆ ಮರಳಲಿದ್ದಾರೆ. ಇದರಲ್ಲಿ ಭಾರತ ಮೂರು ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಡಿಸೆಂಬರ್ 4ರಂದು ಪ್ರವಾಸ ಆರಂಭವಾಗಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.