Champions Trophy 2025 Schedule: ಚಾಂಪಿಯನ್ಸ್ ಟ್ರೋಫಿಯಲ್ಲಿ ಸತತ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಭಾರತ ತಂಡವು ಸೆಮಿಫೈನಲ್ನಲ್ಲಿ ತನ್ನ ಸ್ಥಾನವನ್ನ ಖಚಿತಪಡಿಸಿಕೊಂಡಿದೆ. ಭಾರತ ಮೂರು ದಿನಗಳಲ್ಲಿ ಎರಡು ಪಂದ್ಯಗಳನ್ನು ಆಡಿದ್ದು, ಇದೀಗ ಮೂರನೇ ಪಂದ್ಯಕ್ಕೂ ಮೊದಲು ವಿಶ್ರಾಂತಿ ಪಡೆಯಲಿದೆ. ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ತಂಡವು ತನ್ನ ಮೂರನೇ ಮತ್ತು ಕೊನೆಯ ಲೀಗ್ ಪಂದ್ಯವನ್ನು ಯಾವಾಗ, ಎಲ್ಲಿ ಮತ್ತು ಯಾರ ವಿರುದ್ಧ ಆಡಲಿದೆ? ಭಾರತದ ಸೆಮಿಫೈನಲ್ ವೇಳಾಪಟ್ಟಿಯ ಬಗ್ಗೆಯೂ ಇಂದು ನಾವು ನಿಮಗೆ ಮಾಹಿತಿ ನೀಡಲಿದ್ದೇವೆ.
ಮಾರ್ಚ್ 2ರಂದು ನ್ಯೂಜಿಲ್ಯಾಂಡ್ ವಿರುದ್ಧ ಸೆಣಸಾಟ
ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಈಗ ಒಂದು ವಾರದ ವಿರಾಮದಲ್ಲಿರುತ್ತದೆ. ಇಡೀ ತಂಡವು ದುಬೈನಲ್ಲಿಯೇ ಉಳಿದು ಮುಂದಿನ ಪಂದ್ಯಕ್ಕೆ ಸಿದ್ಧತೆಗಳು ಮುಂದುವರಿಸಲಿದೆ. ತಂಡದ ಆಟಗಾರರು ಸದ್ಯ ವಿಶ್ರಾಂತಿ ಪಡೆಯಲಿದ್ದಾರೆ. ನಂತರ ಭಾರತ ತಂಡವು ಭಾನುವಾರ ಅಂದರೆ ಮಾರ್ಚ್ 2ರಂದು ಮತ್ತೆ ಮೈದಾನಕ್ಕೆ ಇಳಿಯಲಿದ್ದು, ಬಲಿಷ್ಠ ನ್ಯೂಜಿಲ್ಯಾಂಡ್ ತಂಡವನ್ನು ಎದುರಿಸಲಿದೆ. ಈ ಪಂದ್ಯವು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿಯೇ ನಡೆಯಲಿದೆ. ಇದು ಎಲ್ಲಕ್ಕಿಂತ ದೊಡ್ಡ ಪಂದ್ಯವಾಗಲಿದ್ದು, ಕೋಟ್ಯಂತರ ಅಭಿಮಾನಿಗಳು ʼಮದಗಜʼಗಳ ಸೆಣಸಾಟವನ್ನು ಕಣ್ತುಂಬಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ.
ಭಾರತ ಇಲ್ಲಿಯವರೆಗೆ ಬಾಂಗ್ಲಾದೇಶ ಮತ್ತು ಪಾಕಿಸ್ತಾನದೊಂದಿಗೆ ಮಾತ್ರ ಆಡಿದ್ದು, ಆ ತಂಡಗಳು ಭಾರತಕ್ಕೆ ಕಠಿಣ ಸ್ಪರ್ಧೆ ನೀಡುವಲ್ಲಿ ವಿಫಲವಾಗಿವೆ. ಆದರೆ ಐಸಿಸಿ ಟೂರ್ನಿಗಳಲ್ಲಿ ನ್ಯೂಜಿಲ್ಯಾಂಡ್ ತಂಡವು ಭಾರತಕ್ಕೆ ಯಾವಾಗಲೂ ಟಫ್ ಫೈಟ್ ನೀಡುತ್ತದೆ. ಗುಡ್ ನ್ಯೂಸ್ ಏನೆಂದರೆ ಈ ಪಂದ್ಯದಲ್ಲಿನ ಗೆಲುವು ಅಥವಾ ಸೋಲು ಭಾರತೀಯ ತಂಡದ ಮೇಲೆ ಹೆಚ್ಚಿನ ಪರಿಣಾಮ ಬೀರುವುದಿಲ್ಲ. ಏಕೆಂದರೆ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು ʼಎʼ ಗುಂಪಿನಿಂದ ಸೆಮಿಫೈನಲ್ ತಲುಪುವುದು ಬಹುತೇಕ ಖಚಿತವಾಗಿದೆ.
ಮಾರ್ಚ್ 4ರಂದು ದುಬೈನಲ್ಲಿ ಟೀಂ ಇಂಡಿಯಾ ಸೆಮಿಫೈನಲ್ ಪಂದ್ಯ
ಸೆಮಿಫೈನಲ್ ಪಂದ್ಯಗಳ ಬಗ್ಗೆ ಮಾತನಾಡುವುದದಾರೆ, ಐಸಿಸಿ ವೇಳಾಪಟ್ಟಿಯ ಪ್ರಕಾರ ಮೊದಲ ಸೆಮಿಫೈನಲ್ ಮಾರ್ಚ್ 4ರಂದು ದುಬೈನಲ್ಲಿ ನಡೆಯಲಿದೆ. 2ನೇ ಸೆಮಿಫೈನಲ್ ಮಾರ್ಚ್ 5ರಂದು ಲಾಹೋರ್ನಲ್ಲಿ ನಡೆಯಲಿದೆ. ಭಾರತ ತಂಡವು ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಮಾತ್ರ ಆಡಲಿದೆ. ಅಂದರೆ ಭಾರತದ ಸೆಮಿಫೈನಲ್ ಮಾರ್ಚ್ 4ರಂದು ನಡೆಯಲಿದೆ. ಆದರೆ ಭಾರತವನ್ನು ಯಾವ ತಂಡ ಎದುರಿಸಲಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಈಗಾಗಲೇ ಎರಡು ಪಂದ್ಯಗಳನ್ನ ಗೆದ್ದಿರುವ ಟೀಂ ಇಂಡಿಯಾ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ.
ಹೀಗಾಗಿ ಮಾರ್ಚ್ 2ರಂದು ನ್ಯೂಜಿಲ್ಯಾಂಡ್ ವಿರುದ್ಧ ಕೊನೆಯ ಲೀಗ್ ಪಂದ್ಯ ಆಡಿದರೆ, ಮಾರ್ಚ್ 4ರಂದು ಮೊದಲ ಸೆಮಿಫೈನಲ್ ಪಂದ್ಯವನ್ನ ಆಡಲಿದೆ. ಅಂದರೆ ಮೂರೇ ದಿನಗಳಲ್ಲಿ ಭಾರತ ತಂಡವು ಎರಡು ಪಂದ್ಯಗಳನ್ನು ಆಡಬೇಕಾಗುತ್ತದೆ. ಇದಾದ ನಂತರ ಟೀಂ ಇಂಡಿಯಾ ಫೈನಲ್ ತಲುಪಿದರೆ, ಅದು ಕೂಡ ದುಬೈನಲ್ಲಿಯೇ ನಡೆಯಲಿದೆ. ಮಾರ್ಚ್ 9ರಂದು ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ ನಡೆಯಲಿದೆ. ಒಂದು ವೇಳೆ ಟೀಂ ಇಂಡಿಯಾ ಫೈನಲ್ ತಲುಪಲು ಸಾಧ್ಯವಾಗದಿದ್ದರೆ ಫೈನಲ್ ಪಂದ್ಯವನ್ನು ಲಾಹೋರ್ನ ಗಡಾಫಿ ಕ್ರೀಡಾಂಗಣದಲ್ಲಿ ನಡೆಸಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.