WTC Points Table: 2023-25ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ (ಡಬ್ಲ್ಯುಟಿಸಿ) ಫೈನಲ್ಗೆ ತಲುಪುವ ಭಾರತದ ಕನಸಿಗೆ ದೊಡ್ಡ ಪೆಟ್ಟು ಬಿದ್ದಿದೆ. ಅಕ್ಟೋಬರ್ 26 ರಂದು ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಭಾರತವನ್ನು 113 ರನ್ಗಳಿಂದ ಸೋಲಿಸಿತು. ತವರು ನೆಲದಲ್ಲಿ ಸತತ 18 ಟೆಸ್ಟ್ ಸರಣಿ ಗೆದ್ದ ಭಾರತದ ದಾಖಲೆ ಈ ಸೋಲಿನ ಮೂಲಕ ಮುರಿದಿದೆ. ಈ ಸೋಲಿನ ನಂತರ ಸತತ ಮೂರನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ ತಲುಪುವ ಭಾರತದ ಕನಸಿಗೆ ಹಿನ್ನಡೆಯಾಗಿದೆ.
ಇನ್ನು ಈ ಸೋಲಿನ ನಂತರವೂ ಭಾರತ ಅಗ್ರಸ್ಥಾನದಲ್ಲಿದೆ. ಆದರೆ ಶೇಕಡಾವಾರು ಅಂಕಗಳು 68.06 ರಿಂದ 62.82 ಕ್ಕೆ ಕುಸಿದಿದೆ. ಮತ್ತೊಂದೆಡೆ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ಶೇ.62.50 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಹೀಗಿರುವಾಗ, ಫೈನಲ್ಗೆ ತಲುಪಬೇಕಾದರೆ ಭಾರತ ವಿರುದ್ಧದ ಸರಣಿಯನ್ನು ಗೆಲ್ಲಲೇಬೇಕು.
ಶ್ರೀಲಂಕಾ ಶೇ.55.56 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದರೆ, ಭಾರತದ ವಿರುದ್ಧ ಸತತ ಗೆಲುವಿನ ನಂತರ ನ್ಯೂಜಿಲೆಂಡ್ ಶೇ.50 ಅಂಕಗಳೊಂದಿಗೆ ನಾಲ್ಕನೇ ಸ್ಥಾನಕ್ಕೆ ತಲುಪಿದೆ. ಬಾಂಗ್ಲಾದೇಶ ವಿರುದ್ಧದ ಇತ್ತೀಚಿನ ಗೆಲುವಿನ ನಂತರ ದಕ್ಷಿಣ ಆಫ್ರಿಕಾ ಶೇಕಡಾ 47.62 ಅಂಕಗಳೊಂದಿಗೆ ಐದನೇ ಸ್ಥಾನದಲ್ಲಿದೆ. ಪಾಕಿಸ್ತಾನ ವಿರುದ್ಧದ ಸರಣಿಯನ್ನು 1-2 ಅಂತರದಲ್ಲಿ ಕಳೆದುಕೊಂಡಿರುವ ಇಂಗ್ಲೆಂಡ್ ಶೇ.40.79 ಅಂಕಗಳೊಂದಿಗೆ ಆರನೇ ಸ್ಥಾನಕ್ಕೆ ಬಂದಿದೆ. ಮತ್ತೊಂದೆಡೆ, ಪಾಕಿಸ್ತಾನವು ಶೇಕಡಾ 33.33 ಅಂಕಗಳೊಂದಿಗೆ ಏಳನೇ ಸ್ಥಾನವನ್ನು ತಲುಪಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಸೋತಿರುವ ಬಾಂಗ್ಲಾದೇಶ ತಂಡ ಶೇ.30.56 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ. 18.52 ಅಂಕಗಳೊಂದಿಗೆ ವೆಸ್ಟ್ ಇಂಡೀಸ್ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
India's lead at the top of the WTC table has been reduced to a thin margin after two straight losses #INDvNZ #PAKvENG pic.twitter.com/IYftv0JCXB
— ESPNcricinfo (@ESPNcricinfo) October 26, 2024
ಇದೀಗ ಟೀಂ ಇಂಡಿಯಾ ಫೈನಲ್ಗೆ ತಲುಪಬೇಕೆಂದರೆ ತಮ್ಮ ಉಳಿದ ಆರು ಟೆಸ್ಟ್ ಪಂದ್ಯಗಳಲ್ಲಿ 4 ಪಂದ್ಯಗಳನ್ನು ಗೆಲ್ಲಬೇಕಾಗಿದೆ. ಇದೀಗ ಮುಂಬೈನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್ಧದ ಕೊನೆಯ ಪಂದ್ಯವನ್ನು ಗೆದ್ದು ಒತ್ತಡವನ್ನು ಕಡಿಮೆ ಮಾಡಲು ಭಾರತ ತಂಡ ಬಯಸಿದೆ. ಒಂದುವೇಳೆ ಇದು ಸಾಧ್ಯವಾಗದಿದ್ದರೆ ಆಸ್ಟ್ರೇಲಿಯಾ ವಿರುದ್ಧದ 5 ಟೆಸ್ಟ್ ಪಂದ್ಯಗಳಲ್ಲಿ 4 ಪಂದ್ಯಗಳನ್ನು ಗೆಲ್ಲಲೇ ಬೇಕಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ