ರಾಮ್ ಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದ 10 ನೇ ದಿನದ ಸುಪ್ರೀಂ ಕೋರ್ಟ್ ವಿಚಾರಣೆ ಗುರುವಾರ ಪ್ರಾರಂಭವಾಗಿದೆ, ವಿವಾದಿತ ಸ್ಥಳದಲ್ಲಿ ಪೂಜಿಸುವ ಹಕ್ಕುಗಳನ್ನು ಜಾರಿಗೊಳಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿ ಕುರಿತು ಕೋರ್ಟ್ ವಿಚಾರಣೆ ನಡೆಸುತ್ತಿದೆ.
ಅಯೋಧ್ಯೆಯಲ್ಲಿರುವ ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂ ವಿವಾದ ಪ್ರಕರಣದಲ್ಲಿ ಪ್ರತಿದಿನವೂ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ಸುನ್ನಿ ವಕ್ಫ್ ಮಂಡಳಿ ಶುಕ್ರವಾರದಂದು ಸುಪ್ರೀಂಕೋರ್ಟ್ಗೆ ತಿಳಿಸಿದೆ. ಈ ವಿಷಯವನ್ನು ಈ ರೀತಿ ತ್ವರಿತಗೊಳಿಸಬಾರದು ಎಂದು ಸುನ್ನಿ ವಕ್ಫ್ ಮಂಡಳಿ ಮನವಿ ಮಾಡಿಕೊಂಡಿದೆ.
ಅಯೋಧ್ಯೆ ವಿವಾದ ಪ್ರಕರಣದಲ್ಲಿ ಮೂವರು ಸದಸ್ಯರ ಸಮಿತಿಯ ಸಂಧಾನ ಪ್ರಕ್ರಿಯೆ ವಿಫಲವಾಗಿದೆ ಎಂದು ಸುಪ್ರೀಕೋರ್ಟ್ ತಿಳಿಸಿದ್ದು, ಈ ಹಿನ್ನಲೆಯಲ್ಲಿ ಆಗಸ್ಟ್ 6 ರಂದು ರಾಮ ಜನ್ಮಭೂಮಿ-ಬಾಬರಿ ಮಸೀದಿ ವಿವಾದದ ವಿಚಾರಣೆಯನ್ನು ಪ್ರಾರಂಭಿಸುವುದಾಗಿ ಸುಪ್ರೀಂಕೋರ್ಟ್ನ ಐದು ನ್ಯಾಯಾಧೀಶರ ನ್ಯಾಯಪೀಠ ಶುಕ್ರವಾರ ತಿಳಿಸಿದೆ.
ಅಯೋಧ್ಯೆ ಭೂ ವಿವಾದದ ಮಧ್ಯಸ್ಥಿಕೆ ಸಮಿತಿ ಪ್ರಕ್ರಿಯೆ ಮುಂದುವರೆಸಲು ಸುಪ್ರೀಂಕೋರ್ಟ್ ಗುರುವಾರದಂದು ಅನುಮತಿ ನೀಡಿದೆ. ಫಲಿತಾಂಶದ ಕುರಿತು ವರದಿ ಪಡೆಯಲು ಆಗಸ್ಟ್ 1 ರವರೆಗೆ ಸಮಯವನ್ನು ನೀಡಿತು.
ರಾಮಜನ್ಮ ಭೂಮಿ ವಿವಾದ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪಂಚ ಸದಸ್ಯ ಪೀಠ, ಸಂಧಾನ ಪ್ರಗತಿ ಸ್ಥಿತಿಗತಿ ವರದಿಯನ್ನು ಜುಲೈ 18ರೊಳಗೆ ಸಲ್ಲಿಸುವಂತೆ ಸೂಚನೆ ನೀಡಿದೆ.
ರಾಮಜನ್ಮಭೂಮಿ ಟ್ರಸ್ಟ್ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಈ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಭೆಯಲ್ಲಿ ಸಾಧು-ಸಂತರು ದೊಡ್ಡ ನಿರ್ಧಾರ ತೆಗೆದುಕೊಳ್ಳಬಹುದು ಎಂದು ನಿರೀಕ್ಷಿಸಲಾಗಿದೆ.
"ಸಂಧಾನ ಸಮಿತಿಯಿಂದ ವರದಿಯನ್ನು ಸ್ವೀಕರಿಸಲಾಗಿದ್ದು, ಸಮಿತಿಯು ಆಗಸ್ಟ್ 15ರ ವರೆಗೆ ಹೆಚ್ಚುವರಿ ಕಾಲಾವಕಾಶವನ್ನು ಕೋರಿದೆ" ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠವು ತಿಳಿಸಿದೆ.
ದೇಶದ ರಾಜಕಾರಣಿಗಳು, ಆಡಳಿತಗಾರರು ಮತ್ತು ಸುಪ್ರೀಂ ಕೋರ್ಟ್ ನಿಂದ ಸಹ ಇದುವರೆಗೂ ಈ ವಿವಾದವನ್ನು ಬಗೆಹರಿಸಲು ಸಾಧ್ಯವಾಗಿಲ್ಲ. ಹೀಗಿರುವಾಗ ಮೂವರು ಸಂಧಾನಕಾರರಿಂದ ಅದು ಹೇಗೆ ಸಾಧ್ಯ? ಎಂದು ಶಿವಸೇನೆ ಪ್ರಶ್ನಿಸಿದೆ.
ಅಯೋಧ್ಯ ವಿವಾದದಲ್ಲಿ ಅರ್ಜಿದಾರರಲ್ಲಿ ಒಬ್ಬರಾಗಿರುವ ಹಿಂದೂ ಮಹಾಸಭಾ "ಸಾರ್ವಜನಿಕರು ಮಧ್ಯಸ್ಥಿಕೆಗೆ ಒಪ್ಪುವುದಿಲ್ಲ" ಎಂದು ವಾದಿಸಿತು. ಇದಕ್ಕೆ ಪ್ರತಿಕ್ರಿಯಿಸಿದ ಜಸ್ಟೀಸ್ ಬಾಬ್ಡೆ" ಇದು ವಿಫಲವಾಗಿದೆ ಎಂದು ನೀವು ಹೇಳುತ್ತಿದ್ದೀರಿ, ಎಲ್ಲವನ್ನು ಪೂರ್ವಾಗ್ರಹ ಪೀಡಿತರಾಗಿ ನೋಡಬೇಡಿ, ಮಧ್ಯಸ್ಥಿಕೆ ನಡೆಸಲು ನಾವು ಪ್ರಯತ್ನಿಸುತ್ತೇವೆ" ಎಂದರು.
ಇದು ಖಾಸಗಿ ಆಸ್ತಿಯ ಪರಭಾರೆ ವಿಷಯವಲ್ಲ. ಮಧ್ಯಸ್ಥಿಕೆ ಮಾತುಕತೆ ಮೂಲಕ ಪಾಲುದಾರರು ಪರಿಹಾರ ಕಂಡುಕೊಳ್ಳುವ ಶೇ1ರಷ್ಟು ಅವಕಾಶ ಸಿಕ್ಕರೂ ನೀಡಬೇಕಾಗುತ್ತದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ರಾಮಜನ್ಮಭೂಮಿ -ಬಾಬ್ರಿ ಮಸೀದಿ ಭೂಮಿಯಲ್ಲಿ ಈ ಹಿಂದೆ ಸರ್ಕಾರವು ವಶಪಡಿಸಿಕೊಂಡಿದ್ದ ಭೂಮಿಯನ್ನು ಮೂಲ ಮಾಲಕರಿಗೆ ಹಿಂದಿರುಗಿಸಲು ಅನುಮತಿ ಕೋರಿ ಕೇಂದ್ರ ಸರ್ಕಾರ ಈಗ ಸುಪ್ರೀಮ್ ಮೊರೆ ಹೋಗಿದೆ.
ನ್ಯಾಯಮೂರ್ತಿ ಎಸ್.ಎ.ಬಾಬ್ಡೆ ಜನವರಿ 29 ಕ್ಕೆ ಲಭ್ಯವಿಲ್ಲದ ಕಾರಣ ಅಯೋಧ್ಯೆ ಪ್ರಕರಣದ ವಿಚಾರಣೆ ನಡೆಯುವುದು ಅನುಮಾನ ಎಂದು ತಿಳಿದುಬಂದಿದೆ.ಈ ಹಿನ್ನಲೆಯಲ್ಲಿ ಅಂದು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಸಂವಿಧಾನದ ಪೀಠವು ಪ್ರಕರಣದ ವಿಚಾರಣೆಯನ್ನು ತೆಗೆದುಕೊಳ್ಳುವುದಿಲ್ಲ ಎನ್ನಲಾಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.