ನೀರು ನುಗ್ಗಿರುವ ಮನೆಗಳ ಮಾಲೀಕರಿಗೆ ತಲಾ ಹತ್ತು ಸಾವಿರ ರೂ.ಗಳ ಪರಿಹಾರ ಕೊಟ್ಟಿರುವುದನ್ನು ಬಿಟ್ಟರೆ ಪ್ರವಾಹಪೀಡಿತ ಪ್ರದೇಶಗಳಲ್ಲಿ ಯಾವುದೇ ಕೆಲಸವಾಗಿಲ್ಲ. ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್ಗಳನ್ನು ಬಹುತೇಕ ಕಡೆ ನಿರ್ಮಿಸಿಲ್ಲ.
'ಯಡಿಯೂರಪ್ಪ ಗುಡುಗಿದರೆ ವಿಧಾನಸೌಧ ನಡುಗುತ್ತದೆ' ಎಂಬ ಮಾತೊಂದಿತ್ತು. ಯಡಿಯೂರಪ್ಪ ಹೆಸರಿನ ಹಿಂದೆ 'ಹೋರಾಟಗಾರ' ಎಂಬ ವಿಶೇಷಣವನ್ನು ಸೇರಿಸಲಾಗುತ್ತಿತ್ತು. ಬಲ್ಲವರು, ಬಗಿಲಲ್ಲಿರುವವರು 'ಛಲದಂಕ ಮಲ್ಲ' ಎಂಬ ಬಿರುದನ್ನು ನೀಡಿದ್ದರು.
ಪ್ರವಾಹದಿಂದ ಸಂಪೂರ್ಣ ಮನೆಗಳನ್ನು ಕಳೆದುಕೊಂಡಿರುವ ಕುಟುಂಬಗಳಿಗೆ ಹೊಸ ಮನೆ ನಿರ್ಮಾಣಕ್ಕೆ ಅಡಿಪಾಯ ಹಾಕಲು ಒಂದು ವಾರದೊಳಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದ- ಸಿಎಂ ಬಿ.ಎಸ್. ಯಡಿಯೂರಪ್ಪ ಭರವಸೆ
ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರ ನೋವಿಗೆ ಸ್ಪಂದಿಸುವುದು ನಮ್ಮ ಸರ್ಕಾರದ ಪ್ರಥಮ ಆದ್ಯತೆಯಾಗಿದೆ. ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸ ಕೈಗೊಂಡು ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಪರಿಶೀಲನಾ ಸಭೆ ನಡೆಸುವುದಲ್ಲದೆ ಪ್ರವಾಹದಿಂದ ತೀವ್ರ ತೊಂದರೆಯಾಗಿರುವ ಗ್ರಾಮಗಳಿಗೆ ಭೇಟಿ ನೀಡಿ, ಸಂತ್ರಸ್ತರೊಂದಿಗೆ ವಿಚಾರ ವಿನಿಮಯ ಮಾಡಿ, ವರದಿ ಸಲ್ಲಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದರು.
ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿರುವ ವೀಡಿಯೊದಲ್ಲಿ ವೆಂಕಟೇಶ್ ಅವರು ಪ್ರವಾಹಕ್ಕೆ ಸಿಲುಕಿದ ಸೇತುವೆಯ ಮೇಲೆ ತನ್ನ ಜೀವದ ಹಂಗನ್ನೂ ತೊರೆದು ನೀರಿನಿಂದ ತುಂಬಿದ ರಸ್ತೆಗೆ ಅಡ್ಡಲಾಗಿ ಓಡುತ್ತಾ ಆಂಬುಲೆನ್ಸ್ಗೆ ಮಾರ್ಗದರ್ಶನ ನೀಡುತ್ತಿದ್ದಾರೆ.
ಕಳೆದ ಕೆಲ ದಿನಗಳಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ನಿರ್ಮಾಣವಾಗಿ ಲಕ್ಷಾಂತರ ಜನರು ನಿರಾಶ್ರಿತರಾಗಿದ್ದಾರೆ. ಇವರ ನೆರವಿಗೆ ಎಲ್ಲ ಕೈಗಾರಿಕೋದ್ದಿಮೆದಾರರು ಉದಾರವಾಗಿ ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮನವಿ.
ಶಿವಮೊಗ್ಗ ನಗರದಲ್ಲಿ 32 ಕಿ.ಮೀ. ಹೊರವರ್ತುಲ ರಸ್ತೆ ನಿರ್ಮಾಣ ಕಾರ್ಯಕ್ಕೆ ಶೀಘ್ರವೇ ಚಾಲನೆ ನೀಡಲಾಗುವುದು. ಈಗಾಗಲೇ ಶೇ.30ರಷ್ಟು ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದ್ದು, ಇನ್ನುಳಿದ ಭೂಸ್ವಾಧೀನ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು.
ಅತಿವೃಷ್ಟಿಯಿಂದ ಹಾನಿಗೀಡಾದ ಹಾಗೂ ಸಂಪೂರ್ಣ ಬಿದ್ದು ಹೋಗಿರುವ ಮನೆಗಳ ಸಂಖ್ಯೆ, ರಸ್ತೆ, ಸೇತುವೆ, ಕಟ್ಟಡಗಳ ಸೇರಿದಂತೆ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಉಂಟಾಗಿರುವ ಹಾನಿಯ ಬಗ್ಗೆ ಸಮರ್ಪಕವಾದ ಸಮೀಕ್ಷೆ ನಡೆಸಬೇಕು. ಕೃಷಿ ಹಾಗೂ ತೋಟಗಾರಿಕೆ ಪ್ರದೇಶ ಹಾಗೂ ಬೆಳೆಗಳಿಗೆ ಹಾನಿಯ ಕುರಿತು ನೆರೆ ನೀರು ಖಾಲಿಯಾದ ಬಳಿಕ ನಿಖರವಾಗಿ ಅಂದಾಜಿಸಬೇಕು- ಅಧಿಕಾರಿಗಳಿಗೆ ಸಿಎಂ ಸೂಚನೆ
ರಾಜ್ಯದಲ್ಲಿ ಇದು ದೊಡ್ಡಮಟ್ಟದ ಮಳೆಯ ಅನಾಹುತ. ಹಿಂದೆ ಕೆಲವೇ ಜಿಲ್ಲೆಗಳಲ್ಲಿ ಇಂಥ ಅನಾಹುತವಾಗಿತ್ತು. ಆದರೆ ಈ ಬಾರಿಯ ಪರಿಸ್ಥಿತಿ ಎಲ್ಲರ ಕೈ ಮೀರಿ ಹೋಗಿದೆ. ಬೆಳಗಾವಿ ಜನರ ಬದುಕು ಶೋಚನೀಯವಾಗಿದೆ.
ರಾಜ್ಯದಲ್ಲಿ ನೆರೆ ಪರಿಸ್ಥಿತಿ ವಿಪರೀತವಾಗಿದೆ. ಈ ಪರಿಸ್ಥಿತಿ ನಿಭಾಯಿಸಲು ರಾಜ್ಯದಲ್ಲಿ ಪೂರ್ಣ ಪ್ರಮಾಣದ ಸರಕಾರವೇ ಇಲ್ಲ. ಪ್ರಧಾನಿ ಅಥವಾ ಕೇಂದ್ರ ಗೃಹ ಸಚಿವರು ಕೂಡಲೇ ರಾಜ್ಯದಲ್ಲಿ ನೆರೆ ಪರಿಸ್ಥಿತಿಯನ್ನೂ ವೈಮಾನಿಕ ಸಮೀಕ್ಷೆ ನಡೆಸಿ, 10 ಸಾವಿರ ಕೋಟಿ ರೂ. ಮೊತ್ತದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು. ಜೊತೆಗೆ ಕೇಂದ್ರದಿಂದ ತಂಡ ಆಗಮಿಸಿ ಸೂಕ್ತ ಸಮೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದರು.
ಬಾದಾಮಿ ಸಮೀಪದ ಪಟ್ಟದಕಲ್ಲು ಗ್ರಾಮದಲ್ಲಿ ಪ್ರವಾಹದಲ್ಲಿ ಸಿಲುಕಿರುವ 20ಕ್ಕೂ ಹೆಚ್ಚು ಗ್ರಾಮಸ್ಥರು ರಕ್ಷಣೆಗಾಗಿ ದೇವಾಲಯ ಏರಿ ಕುಳಿತಿದ್ದಾರೆ. ಹೆಲಿಕಾಪ್ಟರ್ ಮೂಲಕ ಅವರನ್ನು ಸುರಕ್ಷಿತ ತಾಣಕ್ಕೆ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿಯವರಿಗೆ ತಿಳಿಸಿರುವ ಸಿದ್ದರಾಮಯ್ಯ.
ಉತ್ತರ ಕನ್ನಡದಲ್ಲಿ 5 ಅಣೆಕಟ್ಟುಗಳ ಗೇಟ್ ತೆಗೆದು ನೀರನ್ನು ಬಿಟ್ಟಿರುವ ಕಾರಣ ಹೆಚ್ಚಿನ ಪ್ರವಾಹ ಪರಿಸ್ಥಿತಿ ಉಂಟಾಗಿದೆಯೆಂದು ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಅವರಿಗೆ ಕೊಡಗು, ಉತ್ತರ ಕನ್ನಡ , ದಕ್ಷಿಣ ಕನ್ನಡ ಮತ್ತು ಉಡುಪಿಯ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.