"ಅವರಿಗೆ ನಿಜವಾಗಿಯೂ ಕ್ರೀಡಾಪಟುಗಳ ಬಗ್ಗೆ ಕಾಳಜಿ ಇದ್ದರೆ, ಅವರು ಅದನ್ನು ರೆಕಾರ್ಡ್ ಮಾಡದೆಯೇ ಕರೆ ಮಾಡಬಹುದಿತ್ತು, ಅದಕ್ಕೆ ನಾನು ಕೃತಜ್ಞನಾಗಿರುತ್ತಿದ್ದೆ. ಬಹುಶಃ ನಾನು ವಿನೇಶ್ ಜೊತೆ ಮಾತನಾಡಿದರೆ ಅವಳು ಕಳೆದ ಎರಡು ವರ್ಷಗಳ ಬಗ್ಗೆ ಕೇಳುತ್ತಾಳೆ ಎಂದು ಅವರಿಗೆ ತಿಳಿದಿದೆ.
ರೇವಂತ್ ರೆಡ್ಡಿ ಅವರ ವಿಶ್ಲೇಷಣೆ ಪ್ರಕಾರ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ತಮ್ಮ ಪಕ್ಷಕ್ಕೆ ಕೇವಲ 125 ಸ್ಥಾನಗಳು ಬೇಕಾಗುತ್ತದೆ ಎನ್ನುತ್ತಾರೆ. ಇನ್ನೊಂದೆಡೆಗೆ ಬಿಜೆಪಿ ಮೂರನೇ ಬಾರಿಗೆ ಅಧಿಕಾರಕ್ಕೆ ಬರಲು ಕನಿಷ್ಠ 240-250 ಸ್ಥಾನಗಳನ್ನು ಗೆಲ್ಲಬೇಕು. ಆದ್ದರಿಂದ ಈ ಹಿನ್ನೆಲೆಯಲ್ಲಿ ರೇವಂತ್ ರೆಡ್ಡಿ ಅವರ ಹೇಳಿಕೆಯನ್ನು ನಾವು ಸ್ವಲ್ಪ ವಿಭಿನ್ನ ದೃಷ್ಟಿಕೋನದಿಂದ ಅರ್ಥೈಸಿಕೊಳ್ಳಬೇಕು.
(ರಾಣೆಬೆನ್ನೂರು) ಚಿತ್ರನಟ ಪ್ರಕಾಶ್ ರಾಜ್ ಪೂರ್ವಾಗ್ರಹ ಪೀಡಿತ ವ್ಯಕ್ತಿ. ಅವರು ಏನೇ ಮಾತನಾಡಿದರೂ ಅಜೆಂಡಾ ಇಟ್ಟುಕೊಂಡು ಮಾತನಾಡುತ್ತಾರೆ ಅವರ ಮಾತಲ್ಲಿ ಯಾವುದೇ ಸತ್ಯಾಂಶ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದ ಜನರ ಪಿತ್ರಾರ್ಜಿತ ಆಸ್ತಿಯ ಮರುಹಂಚಿಕೆ ಮಾಡುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಜನರ ಬಳಿ ಅಲವತ್ತುಕೊಳ್ಳುತ್ತಿರುವ ಹಿಂದಿನ ನಿಜವಾದ ಉದ್ದೇಶ ಜನರ ಮೇಲಿನ ಕಾಳಜಿಯೂ ಅಲ್ಲ, ದೇಶದ ಮೇಲಿನ ಪ್ರೀತಿಯಿಂದಲೂ ಅಲ್ಲ.ಮೋದಿ ಅವರಿಗೆ ಆತಂಕ ಶುರುವಾಗಿರುವುದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತನ್ನ ಉದ್ಯಮ ಮಿತ್ರರ ಆಸ್ತಿಯ ದಿಢೀರ್ ಏರಿಕೆಯ ಹಿಂದಿನ ಸತ್ಯ ಎಲ್ಲಿ ಹೊರಗೆ ಬರುವುದೋ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ನಿಗದಿಪಡಿಸುವುದೊಂದೇ ಮೀಸಲಾತಿಗೆ ಸಂಬಂಧಿಸಿದ ವಿವಾದ ಬಗೆಹರಿಸಲು ಇರುವ ಶಾಶ್ವತ ಮತ್ತು ಏಕೈಕ ಪರಿಹಾರವಾಗಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಸಿದ್ಧವಿದೆ, ಪ್ರಧಾನಿ ಮೋದಿ ಅವರು ಈ ಸವಾಲು ಸ್ವೀಕರಿಸಲು ಸಿದ್ಧ ಇದ್ದರೆ ಅದನ್ನು ಚುನಾವಣಾ ಭರವಸೆಯಾಗಿ ಘೋಷಿಸಬೇಕು ಇಲ್ಲದೆ ಇದ್ದರೆ ಈಗಿನ ಬಾಯಿ ಬಡಾಯಿಯನ್ನು ನಿಲ್ಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
Lok Sabha Election 2024:ಲೋಕಸಭೆ ಸಾರ್ವತ್ರಿಕ ಚುನಾವಣೆ ಅಂಗವಾಗಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಖಚಿತ ಮಾಹಿತಿ ಮೇರೆಗೆ ಎಫ್ಎಸ್ಟಿ ಮತ್ತು ಎಸ್ಎಸ್ಟಿ ತಂಡಗಳು ದಾಳಿ ನಡೆಸಿ, ಜಪ್ತಿ ಮಾಡಲಾಗಿದೆ ಎಂದು ಅವರು ತಿಳಿಸಿದ್ದಾರೆ
Lok Sabha Election 2024: ಗುರುವಾರ ಬೆಂಗಳೂರಿನಲ್ಲಿ ಜೈ ಶ್ರೀರಾಮ್ ಘೋಷಣೆಗೆ ಅಡ್ಡಿಪಡಿಸಿ ಬೆದರಿಕೆ ಹಾಕಿದ ಮುಸ್ಲಿಂ ಮೂಲಭೂತವಾದಿಗಳ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಿ ಕಠಿಣ ಕ್ರಮ ವಹಿಸಬೇಕು. ಇಲ್ಲವಾದರೆ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರವಾಗಿ ಪ್ರತಿಭಟಿಸಲಾಗುವುದು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ.
Basavaraj Bommai: ರಾಜ್ಯದಲ್ಲಿ ಮೊದಲ ಹಂತದ ನಾಮಪತ್ರ ಸಲ್ಲಿಕೆ ಮುಕ್ತಾಯ ಆಗಿದೆ. ಕಣ ಸಿದ್ದವಾಗಿದೆ. ವಿಶ್ವಾಸ ಇದೆ. ಮೊದಲ ಹಂತದಲ್ಲಿ ನಮಗೆ ಅಭೂತಪೂರ್ವ ಬೆಂಬಲ ಸಿಕ್ಕಿದೆ. ಸಿದ್ದರಾಮಯ್ಯ ಓಡಾಡುವುದು ನೋಡಿದರೆ ಅವರಿಗೆ ಭಯ ಹುಟ್ಟಿಕೊಂಡಿದೆ.ಸೋಲಿನ ಭಯದಿಂದ ಗಲ್ಲಿಗಲ್ಲಿಯಲ್ಲಿ ಓಡಾಡುತ್ತಿದ್ದಾರೆ ಎಂದು ಹೇಳಿದರು.
ಬಿಹಾರದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಉಸ್ತುವಾರಿಯನ್ನಾಗಿ ಮಾಡಲಾಗಿದೆ. ಹರೀಶ್ ದ್ವಿವೇದಿ ಅವರು ಮೊದಲಿನಂತೆ ಸಹ-ಪ್ರಭಾರಿ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.
ತೃತೀಯ ರಂಗ ಕಟ್ಟುವ ಸುದ್ದಿಯ ನಡುವೆಯೇ ಪ್ರಶಾಂತ್ ಕಿಶೋರ್ (Prashanth Kishore) ನಿನ್ನೆ ಶರದ್ ಪವಾರ್ ಅವರನ್ನು ಭೇಟಿ ಮಾಡಿದ್ದಾರೆ. ಹತ್ತು ದಿನಗಳ ಅಂತರದಲ್ಲಿ ಇದು ಉಭಯ ನಾಯಕರ ಎರಡನೇ ಭೇಟಿ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.