Jharkhand ACB Nabs assistant registrar: ಜಾರ್ಖಂಡ್ ದಲ್ಲಿ JPSC ಪರೀಕ್ಷೆಯಲ್ಲಿ 108ನೇ ರ್ಯಾಂಕ್ ಪಡೆದು 1 ವಾರದ ಹಿಂದೆಯಷ್ಟೇ ಮೊದಲ ಪೋಸ್ಟಿಂಗ್ ಪಡೆದುಕೊಂಡಿದ್ದ ಮಿಥಾಲಿ ಶರ್ಮಾ ಅವರು ಮೊದಲ ದಿನವೇ ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಎಂಬ ಹೇಳಿಕೆಗೆ ಕೆಂಡ ಕಾರಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, 40% ಕಮೀಷನ್ ಆರೋಪ ನಮ್ಮ ಸರ್ಕಾರದ ಮೇಲೆ ಮಾಡಿದ್ರಾ ಗುತ್ತಿಗೆದಾರರು? ನಮ್ಮ ಸರ್ಕಾರದ ಮೇಲೆ ಪತ್ರ ಬರೆದಿದ್ದರಾ..?.ಯಾವ ಆಧಾರದಲ್ಲಿ ಇವ್ರು ಹೀಗೆ ಹೇಳ್ತಿದ್ದಾರೆ ಗೊತ್ತಿಲ್ಲ, ಎಂದರು.
ಎಸಿಬಿ ಅಧಿಕಾರಿಗಳನ್ನೇ ಲೋಕಾಯುಕ್ತಕ್ಕೆ ನೇಮಕ ಮಾಡೋದು ಸೂಕ್ತವಾದ ಕ್ರಮವಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದ್ದಾರೆ. ನಾನೊಂದು ಸಲಹೆ ಕೊಟ್ಟಿದ್ದೇನೆ ಮುಂದಿನ ನೇಮಕದ ಬಗ್ಗೆ ಲೋಕಾಯುಕ್ತರ ಸಮ್ಮತಿ ಬೇಕು. ಅಧಿಕಾರಿಗಳ ಬಗ್ಗೆ ಮಾಹಿತಿ ಪಡೆದು ಲೋಕಾಯುಕ್ತರು ಅಧಿಕಾರಿಗಳನ್ನ ನೇಮಕ ಮಾಡಬೇಕು ಎಂದಿದ್ದಾರೆ..
ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಆಪ್ತ ವಿಜಯ್ ಮುಳುಗುಂದ ಅವರಿಗೆ ಸಿ ಬಿ ಐ ನೋಟಿಸ್ ನೀಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಕಿರುಕುಳ ಕೊಡಕ್ಕೂ ಒಂದು ಲಿಮಿಟ್ ಇರಬೇಕು ಎಂದು ಕಿಡಿಕಾರಿದರು.
ನಾನು ಹೋರಾಟ ಮಾಡುವಾಗಲೆಲ್ಲಾ ಪ್ರತಿ ಸಾರಿ ಬಿಜೆಪಿ ಒಂದಲ್ಲ ಒಂದು ರೀತಿ ತಪ್ಪಿಸಲು ಪ್ರಯತ್ನ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯ ಅವರು ಗೊಂದಲದಲ್ಲಿದ್ದಾರೆ. ಎಲ್ಲಾ ಗೊಂದಲಗಳೂ ಅವರ ಹೇಳಿಕೆಯಿಂದಲೇ ಪ್ರಾರಂಭವಾಗಿದೆ.
ರಾಜ್ಯದಲ್ಲಿ ACB ರದ್ದಾದ ಬೆನ್ನಲ್ಲೇ ಲೋಕಾಯುಕ್ತಕ್ಕೆ ಪವರ್?. ಹಾಗಿದ್ರೆ ಹಳೆ ಲೋಕಾಯುಕ್ತ ಗತವೈಭವದ ಶಕ್ತಿ ಮರುಕಳಿಸುತ್ತಾ?.! ಹೈಕೋರ್ಟ್ ಆದೇಶದ ಬೆನ್ನಲ್ಲೇ ಲೋಕಾಯುಕ್ತದಲ್ಲಿ ಗರಿಗೆದರಿದ ಚಟುವಟಿಕೆ. ರಾಜ್ಯಾದ್ಯಂತ ಸಂಪೂರ್ಣ ವ್ಯವಸ್ಥೆ ಬದಲಾವಣೆ ಮಾಡಲು ಲೋಕಾ ಮಾಸ್ಟರ್ ಪ್ಲಾನ್. ಹೈಕೋರ್ಟ್ ಆದೇಶ ಪ್ರತಿ ಬಂದ ಬಳಿಕ ಆಗಸ್ಟ್ 15ರಂದು ಸಭೆಗೆ ಸೂಚನೆ.
ಅಂತೂ ಭ್ರಷ್ಟಾಚಾರ ನಿಗ್ರಹ ದಳ ಬಾಗಿಲು ಹಾಕೋಕೆ ಕ್ಷಣಗಣನೆ ಆರಂಭವಾಗಿದೆ. ಯಾಕಂದ್ರೆ ಮತ್ತೆ ಲೋಕಾಯುಕ್ತಕ್ಕೆ ಬಲ ನೀಡಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹೀಗಾಗಿ ರಾಜ್ಯದಲ್ಲಿ ಮತ್ತೆ ಲೋಕಾಯುಕ್ತ ಸಂಸ್ಥೆ ಸದೃಢವಾಗಲಿದ್ದು ರದ್ದುಮಾಡಿದ್ದ ಸಿದ್ದರಾಮಯ್ಯ ಸರ್ಕಾರಕ್ಕೆ ಮುಖಭಂಗವಾಗಿದೆ.
ಇಡಿ ದಾಖಲಿಸಿದ ಇಸಿಐಆರ್ ತನಿಖೆಯಲ್ಲಿ ಜಮೀರ್ ಅಹಮದ್ ಸಾರ್ವಜನಿಕ ಸೇವಕರಾಗಿದ್ದು, 2005 ರಿಂದ ಆಗಸ್ಟ್ 5, 2021ರ ಅವಧಿಯಲ್ಲಿ ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದು ಈ ವೇಳೆ ಅಪಾರ ಪ್ರಮಾಣದ ಆಸ್ತಿ ಗಳಿಸಿರುವ ಅಂಶ ಬೆಳಕಿಗೆ ಬಂದಿದೆ.
ಲೋಕಾಯುಕ್ತ ಹಲ್ಲು ಕಿತ್ತಾ ಹಾವೇ..? ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಏನಂತಾರೆ..? ಜೀ ಕನ್ನಡ ನ್ಯೂಸ್ ಡಿಜಿಟಲ್ ವಿಶೇಷ ಸಂದರ್ಶನದಲ್ಲಿ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿದ್ದಾರೆ..
ಎಸಿಬಿ ಎಡಿಜಿಪಿ ಸೀಮಂತ್ ಕುಮಾರ್ ಅವರ ವಿರುದ್ದ ವಕೀಲ ಎಸ್.ನಟರಾಜ ಶರ್ಮಾ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ದೂರು ನೀಡಿದ್ದಾರೆ. ಸೀಮಂತ್ ಕುಮಾರ್ ಸಿಂಗ್ ಅವರನ್ನು ವರ್ಗಾವಣೆ ಮಾಡುವಂತೆ ಮನವಿ ಸಲ್ಲಿಸಿದ್ದಾರೆ.
ಕರ್ನಾಟಕದಲ್ಲಿ ಭ್ರಷ್ಟಾಚಾರ ನಿಗ್ರಹ ಮಾಡುವ ನಿಟ್ಟಿನಲ್ಲಿ ಹೈಕೋರ್ಟ್ ಬೀಸಿದ ಚಾಟಿಯಿಂದಾಗಿ ಓರ್ವ ಜಿಲ್ಲಾಧಿಕಾರಿ, ಓರ್ವ ಐಪಿಎಸ್ ಅಧಿಕಾರಿಯೇ ಜೈಲು ಸೇರಿದ್ದಾರೆ. ಬೆಕ್ಕಿಗೆ ನಾನೇ ಗಂಟೆ ಕಟ್ಟುತ್ತೇನೆಂದು ನಾಡಿನ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಹೇಳಿದ್ದಾರೆ. ಇದು ಜನ ಸಾಮಾನ್ಯರಲ್ಲಿ ನ್ಯಾಯಾಂಗದ ಬಗ್ಗೆ ನಂಬಿಕೆ ಹುಟ್ಟಿಸಿದೆ- ಹೆಚ್.ವಿಶ್ವನಾಥ್
ಎಸಿಬಿ ಕಾರ್ಯವೈಖರಿ ಕುರಿತು ಹೈಕೋರ್ಟ್ ನ್ಯಾಯಮೂರ್ತಿಗಳ ಇತ್ತೀಚಿನ ಹೇಳಿಕೆ ಅನುಮೋದಿಸಿ ಟ್ವೀಟ್ ಮಾಡಿರುವ ಭಾಸ್ಕರ್ ರಾವ್, ನ್ಯಾಯಮೂರ್ತಿ ಹೆಚ್.ಪಿ ಸಂದೇಶ್ ಅವರ ಅಭಿಪ್ರಾಯ 100% ಸತ್ಯವಾಗಿದ್ದು, ಹಿಂದಿನ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತವನ್ನು ನಿಯಂತ್ರಿಸಲು ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ವನ್ನ ರಚಿಸಿತು ಎಂದು ಆರೋಪಿಸಿದ್ದಾರೆ.
ಕಾಂಗ್ರೆಸ್ ನಾಯಕ ಜಮೀರ್ ಅಹಮದ್ ಖಾನ್ಗೆ ಎಸಿಬಿ ಶಾಕ್ ನೀಡಿದೆ. ನಿನ್ನೆ ಜಮೀರ್ ಮನೆಯ ಮೇಲೆ ಎಸಿಬಿ ದಾಳಿ ಮಾಡಿದ್ದು ಮನೆಯ ಮೂಲೆ ಮೂಲೆ ತಡಕಾಡಿದ್ದಾರೆ. ದಾಳಿ ವೇಳೆ ಹಲವು ದಾಖಲೆ ವಶಪಡಿಸಿಕೊಂಡಿದ್ದಾರೆ... ಇನ್ನೊಂದೆಡೆ ದಾಳಿ ಖಂಡಿಸಿ ಜಮೀರ್ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.