Traffic Rules: ರಸ್ತೆ ಅಪಘಾತಗಳನ್ನು ತಡೆಗಟುವ ನಿಟ್ಟಿನಲ್ಲಿ ನಾನಾ ರೀತಿಯ ಕ್ರಮ ಕೈಗೊಳ್ಳುತ್ತಿರುವ ಟ್ರಾಫಿಕ್ ಪೊಲೀಸರು ಇದೀಗ ಹೊಸ ದಂಡ ಪ್ರಯೋಗಕ್ಕೆ ಮುಂದಾಗಿದ್ದಾರೆ. ಇನ್ಮುಂದೆ ಟ್ರಾಫಿಕ್ ನಿಯಮಗಳನ್ನು ಉಲ್ಲಂಘಿಸುವವರಿಗೆ ಶಾಕ್ ನೀಡಲು ಖಾಕಿ ಸಿದ್ದತೆ ನಡೆಸಿದೆ.
‘ಕರಾಳ ಶನಿವಾರ.. ಇಂದು(ಜುಲೈ 13) ಬೆಳಗಿನ ಜಾವ ಚಿತ್ರದುರ್ಗ ಬಳಿ ಸಂಭವಿಸಿದ್ದ ಅಪಘಾತದಲ್ಲಿ ಸಾವಿಗೀಡಾದ ಐವರು ಸೇರಿದಂತೆ 37 ಮಂದಿ ಸಾವಿಗೀಡಾಗಿದ್ದಾರೆ. ಲಾರಿಯ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿತ್ತು’ ಎಂದು ಅವರು ಮಾಹಿತಿ ನೀಡಿದ್ದಾರೆ.
ಕೇರಳ ಮೂಲದ ಅರ್ಜುನ್ ಎಂಬವರಿಗೆ ಬೆಂಗಳೂರು ಮೂಲದ ನಾಲ್ವರು ಯುವಕರು ಅಡ್ಡಹಾಕಿ ಜಟಾಪಟಿ ನಡೆಸಿದ್ದರ ವೀಡಿಯೋವನ್ನು ಥರ್ಡ್ ಐ ಎಂಬ ಖಾತೆದಾರ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಅವರಿಗೆ ಟ್ಯಾಗ್ ಮಾಡಿ ಹಂಚಿಕೊಂಡಿದ್ದರು.
ರಾಜ್ಯದಿಂದ ಎಸ್ಕೇಪ್ ಆಗಿದ್ದ ಸ್ಯಾಂಟ್ರೋ ರವಿಯನ್ನು ಗುಜರಾತ್ನ ಅಹಮದಾಬಾದ್ ಬಳಿ ಬಂಧಿಸಲಾಗಿದೆ. ರಾಮನಗರ ಮತ್ತು ಮೈಸೂರು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಸ್ಯಾಂಟ್ರೋ ರವಿಯನ್ನು ಬಂಧಿಸಿದ್ದಾರೆಂದು ಅಲೋಕ್ ಕುಮಾರ್ ಹೇಳಿದ್ದಾರೆ.
2011 ಸೆ. 26ರಂದು ಸಿಮಿ ಸಂಘಟನೆಯನ್ನು ನಿಷೇಧಿಸಿದ್ದ ಕೇಂದ್ರ ಸರ್ಕಾರ, ಇದೀಗ 2022 ಸೆಪ್ಟೆಂಬರ್ 28ರಂದು ಪಿಎಫ್ಐ ಅನ್ನು ಬ್ಯಾನ್ ಮಾಡಿದೆ. ಇದನ್ನು ಎಡಿಜಿಪಿ ಅಲೋಕ್ ಕುಮಾರ್ ಸೆಪ್ಟೆಂಬರ್ ಕ್ರಾಂತಿ ಎಂದು ಬಣ್ಣಿಸಿದ್ದಾರೆ.
ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಪಿಎಫ್ಐ, ಎಸ್ಡಿಪಿಐ ಸಂಘಟನೆ ಕಾರ್ಯಕರ್ತರ ಮೇಲೆ ದಾಳಿ ನಡೆಯುತ್ತಿದೆ. ಗಡಿ ಜಿಲ್ಲೆ ಚಾಮರಾಜನಗರದಲ್ಲೂ ಪೊಲೀಸರು ಇಬ್ಬರು ಪಿಎಫ್ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಚಾಮರಾಜನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಮುಖಂಡರನ್ನು ಬಂಧಿಸಿ, ತಹಸಿಲ್ದಾರ್ ಮುಂದೆ ಹಾಜರು ಪಡಿಸಿದ್ದಾರೆ.
ಕಾನೂನು ಸುವ್ಯವಸ್ಥೆಯ ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಪೊಲೀಸರು ಪಿಎಫ್ಐ ನಾಯಕ ನಿವಾಸದ ಮೇಲೆ ನಡೆಸಲಾಗಿದ್ದು, ಮಂಗಳೂರು, ಬಾಗಲಕೋಟೆ, ರಾಮನಗರ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ಚಾಮರಾಜನಗರದಲ್ಲೂ ಕಾರ್ಯಾಚರಣೆ ನಡೆಸಲಾಗಿದೆ.
ಶಿವಮೊಗ್ಗದಲ್ಲಿ ಶಂಕಿತ ಉಗ್ರರು ನದಿ ತೀರದಲ್ಲಿ ಯಾರೂ ಇಲ್ಲದ ಜಾಗ ಗುರುತಿಸಿ ಟ್ರಯಲ್ ಬ್ಲಾಸ್ಟ್ ಮಾಡಿದ್ದರು ಎಂದು ಬೆಂಗಳೂರಿನಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ನೀಡಿದ್ದಾರೆ. ಬ್ಲಾಸ್ಟ್ ಮಾಡಿದ ನಂತರ ಗುರುತು ಉಳಿಯದಂತೆ ಪ್ಲ್ಯಾನ್ ಮಾಡಿದ್ದಾರೆ. ನದಿಯಲ್ಲಿ ಅವಶೇಷಗಳು ಹೋಗುತ್ತವೆ. ಹೀಗಾಗಿ ನದಿ ತೀರ ಆಯ್ಕೆ ಮಾಡಿದ್ದರು. ಶಿವಮೊಗ್ಗ ಪೊಲೀಸರ ತನಿಖೆಯಿಂದ ಸ್ಲೀಪರ್ ಸೆಲ್ಗಳನ್ನ ರೀಚ್ ಆಗಿದ್ದೇವೆ ಎಂದಿದ್ದಾರೆ ಅಲೋಕ್ ಕುಮಾರ್.
ಶಿವಮೊಗ್ಗದಲ್ಲಿ ಬಂಧಿಸಲ್ಪಟ್ಟ ಶಂಕಿತ ಉಗ್ರರ ಬಳಿಯಿದ್ದ ಪೆನ್ ಡ್ರೈವ್, ಮೊಬೈಲ್ಅನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ತೀರ್ಥಹಳ್ಳಿಯಲ್ಲಿ ಸ್ಥಳ ಮಹಜರು ವೇಳೆ ಪೆನ್ ಡ್ರೈವ್ ವಶಕ್ಕೆ ಪಡೆಯಲಾಗಿದೆ. ಮಂಗಳೂರಿನಲ್ಲಿ ಮೊಬೈಲ್ ಜಪ್ತಿ ಮಾಡಲಾಗಿದೆ.
ಬೆಳ್ಳಾರೆಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಅವರು ಆರು ಜಿಲ್ಲೆಯ ಎಸ್ಪಿ, ಎನ್ ಐಎ ಅಧಿಕಾರಿಗಳೊಂದಿಗೆ ಎಡಿಜಿಪಿ ಸಭೆ ನಡೆಸಿದರು. ಇಂದು ಎಡಿಜಿಪಿ ಅಲೋಕ್ ಕುಮಾರ್ ಅವರು ಸಭೆಯ ಹಿನ್ನಲೆಯಲ್ಲಿ ಮಂಗಳೂರಿಗೆ ಆಗಮಿಸಿದ್ದರು.
ಎಡಿಜಿಪಿ ಅಲೋಕ್ಕುಮಾರ್ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ, ದಲಿತ ಮುಖಂಡರು ಮತ್ತು ಶ್ರೀರಾಮಸೇನೆ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆಯಿತು. ಕಲಬುರಗಿ ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಅಹವಾಲು ಸ್ವೀಕಾರ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಎರಡು ಗುಂಪುಗಳ ಮಧ್ಯೆ ಮಾತಿನ ಚಕಮಕಿ ನಡೆದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.