ಏ.30: ಬಿಜೆಪಿಯವರಿಗೆ ಮಾತನಾಡಲು ಮಾತ್ರ ರಾಮನಾ? ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗೆ 100 ಕೋಟಿ ಅನುದಾನ ಕೊಡುವುದಾಗಿ ಬಜೆಟ್ ನಲ್ಲಿ ಘೋಷಿಸಿ ಸುಳ್ಳು ಹೇಳಿದ ಪಕ್ಷ ಬಿಜೆಪಿ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಳೆದ 4 ದಿನಗಳ ಹಿಂದಷ್ಟೇ ಬಾಗಲಕೋಟೆ ಮೂಲದ ವ್ಯಕ್ತಿಯೊಬ್ಬರು 110 ಕೆಜಿ ಜೋಳದ ಚೀಲ ಹೊತ್ತು ಬೆಟ್ಟ ಏರಿದ್ದರು. ಇದೀಗ 105 ಕೆಜಿ ಜೋಳದ ಚೀಲವನ್ನು ಹೊತ್ತು ಬೆಟ್ಟ ಹತ್ತಿದ ಹನುಮಂತಪ್ಪ ಸಾಹಸ ಮಾಡಿದ್ದಾರೆ.
ಅಂಜನಾದ್ರಿ ಬೆಟ್ಟದಲ್ಲಿ ರಾತ್ರಿ ಕರಡಿ ಪ್ರತ್ಯಕ್ಷ. ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ನಿನ್ನೆ ರಾತ್ರಿ ಬಂದಿರುವ ಕರಡಿ. ಅಂಜನಾದ್ರಿಯಲ್ಲಿ ಕರಡಿ ಪ್ರತ್ಯಕ್ಷದಿಂದ ಭಯದಲ್ಲಿ ಭಕ್ತರು.
ರಾಜ್ಯ ಮತ್ತು ರಾಷ್ಟ್ರದ ಗಮನ ಸೆಳೆದಿರುವ ಹನುಮ ಜನ್ಮಭೂಮಿ ಅಂಜನಾದ್ರಿ ಬೆಟ್ಟಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗಿದೆ. ಇದೇ ಡಿಸೆಂಬರ್ 5ರಂದು ಲಕ್ಷಾಂತರ ಜನ ಹನುಮ ಮಾಲಾಧಾರಿಗಳು ಆಗಮಿಸಲಿದ್ದಾರೆ. ಹೀಗಾಗಿ ಕೊಪ್ಪಳ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಳ್ತಾಯಿದೆ. ಮುಜರಾಯಿ ಸಚಿವರು ಅಂಜನಾದ್ರಿ ಬೆಟ್ಟಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ.
ಐತಿಹಾಸಿಕ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಡಿಸೆಂಬರ್ 5 ರಂದು 2 ಲಕ್ಷದಷ್ಟು ಹನುಮ ಮಾಲಾಧಾರಿಗಳು ಆಗಮಿಸುವ ನಿರೀಕ್ಷೆಯಿದ್ದು, ಭಕ್ತಾದಿಗಳಿಗೆ ಯಾವುದೇ ತೊಂದರೆ ಆಗದಂತೆ ಅಚ್ಚುಕಟ್ಟಿನ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮತ್ತು ಧಾರ್ಮಿಕ ದತ್ತಿ ಇಲಾಖೆ ಕಲ್ಪಿಸುವತ್ತ ಕ್ರಮ ವಹಿಸುವಂತೆ ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ಸೂಚನೆ ನೀಡಿದರು.
ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದೆ.
ಈ ಉದ್ದೇಶಕ್ಕಾಗಿ 100 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ.
ಅಂಜನಾದ್ರಿ ಪರ್ವತ ಧಾರ್ಮಿಕ ಹಿನ್ನೆಲೆ ಹೊಂದಿರುವ ಕ್ಷೇತ್ರವಾಗಿರುವುದರಿಂದ ಇದರ ಅಭಿವೃದ್ಧಿಗೆ ಸರ್ಕಾರ ತೀರ್ಮಾನಿಸಿದೆ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರದ ಸಚಿವರಾದ ಸಿ.ಪಿ.ಯೋಗೇಶ್ವರ ಹೇಳಿದರು.
Lord Hanuman Birth Place:ಈ ಕುರಿತು ಹೇಳಿಕೆ ನೀಡಿರುವ ಕರ್ನಾಟಕದ ರಾಮಚಂದ್ರಾಪುರ ಮಠದ (Ramachandrapur Mutt) ಶ್ರೀ ರಾಘವೇಶ್ವರ ಭಾರತಿ (Shri Raghaveshwara Bharati Swamiji) ಸ್ವಾಮೀಜಿಗಳು ರಾಮಾಯಣವನ್ನು ಉಲ್ಲೇಖಿಸಿದ್ದಾರೆ. ರಾಮಾಯಣದ ಪ್ರಕಾರ ಶ್ರೀ ಆಂಜನೇಯ ಸೀತಾಮಾತೆಗೆ ತನ್ನ ಜನ್ಮಸ್ಥಾನ ಸಮುದ್ರದಾಚೆ ಗೋಕರ್ಣದಲ್ಲಿದೆ (Gokarna) ಎಂದು ಉಲ್ಲೇಖಿಸಿರುವುದಾಗಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.