ಬಿಜೆಪಿ ರಾಜ್ಯ ಚುನಾವಣಾ ಪ್ರಚಾರ ಸಮಿತಿ ಮತ್ತು ರಾಜ್ಯ ಕೋರ್ ಕಮಿಟಿ ಸಭೆಯು ಕೇಂದ್ರ ಗೃಹ ಸಚಿವ ಅಮಿತ್ ಶಾ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ಈ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗಿಯಾಗಿದ್ದರು.
Bhadra Upper Bank Project: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಫಲಾನುಭವಿಗಳ ಸೌಲಭ್ಯ ಮತ್ತು ಸಲಕರಣೆಗಳ ವಿತರಣೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿದರು.
ವಿಜಯೇಂದ್ರಗೆ ಟಿಕೆಟ್ ಬಗ್ಗೆ ಸಿ.ಟಿ. ರವಿ ಹೇಳಿಕೆ ವಿಚಾರ. ಬಿಜೆಪಿ ಟಿಕೆಟ್ ವಿಚಾರ ಬಿಎಸ್ವೈ ಕಿಚನ್ನಲ್ಲಿ ಆಗಲ್ಲ ಎಂದು ಶಾಸಕ ಸಿ.ಟಿ.ರವಿಗೆ ಬಿ.ವೈ.ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ.
ತೋಳ್ಬಲ, ಮತ್ತು ಹಣ ಬಲದಿಂದ, ಜಾತಿಯ ವಿಷಬೀಜ ಬಿತ್ತಿ ಚುನಾವಣೆ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ಕನಸು ಕಾಣುತ್ತಿದೆ ಎಂದು ಕಲಬುರಗಿಯಲ್ಲಿ ಬಿಎಸ್ವೈ ಗುಡುಗಿದ್ದಾರೆ.. ಕಲಬುರಗಿಯಲ್ಲಿ ನಡೆದ ವಿಜಯಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು ಬಿಜೆಪಿಗೆ ಜನರ ಬೆಂಬಲ ಇದೆ, ಈ ಉತ್ಸಹ ನೋಡಿದ್ರೆ ಕಾಂಗ್ರೆಸ್ಗೆ ಭಯ ಆಗುತ್ತೆ ಎಂದಿದ್ದಾರೆ..
ಕಾಂಗ್ರೆಸ್ನಲ್ಲಿರೋರು ಯೆಂಕಾ, ನಾಣಿ, ಸೀನ ಲೀಡರ್ಸ್.. ಸಿದ್ದರಾಮಯ್ಯ ವಿಷಬೀಜ ಬಿತ್ತಿ ಅಧಿಕಾರ ಹಿಡಿಯಲು ಹೊರಟಿದ್ದಾರೆ. ಚುನಾವಣೆಯಲ್ಲಿ ಇವರಿಗೆ ತಕ್ಕ ಪಾಠ ಕಲಿಸಿ ಎಂದು ಬಿಎಸ್ವೈ ವಾಗ್ದಾಳಿ ನಡೆಸಿದ್ದಾರೆ..
ವಿಧಾಸಭೆಯಲ್ಲಿ ವಿರೋಧ ಪಕ್ಷಗಳಿಗೆ ಯಡಿಯೂರಪ್ಪ ಸವಾಲು ಹಾಕಿದ್ರು. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಬಿಜೆಪಿ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಅಂತ ಸದನದಲ್ಲಿ ಗುಡುಗಿದ್ರು. ಇನ್ಮುಂದೆ ಚುನಾವಣೆಗೆ ನಿಲ್ಲಲ್ಲ ಅಂತ ಬಿಎಸ್ವೈ ಘೋಷಣೆ ಮಾಡಿದ್ರು.
ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸರ್ಕಾರ ಹಲವಾರು ಯೋಜನೆಗಳ ಪೂರ್ಣಗೊಳಿಸಿ, ಲೋಕಾರ್ಪಣೆ ಮಾಡುವ ಪ್ಲಾನ್ ಮಾಡಿದೆ. ಅದೇ ರೀತಿ ಶಿವಮೊಗ್ಗದ ಹೊಸ ಏರ್ಪೋರ್ಟ್ ಕಾಮಗಾರಿ ಭರದಿಂದ ಸಾಗಿದೆ. ಇದೇ ಫೆಬ್ರವರಿ 27 ರಂದು ಖುದ್ದು ಪ್ರಧಾನಿ ಇದಕ್ಕೆ ಚಾಲನೆ ನೀಡಲಿದ್ದಾರೆ. ಈ ವಿಮಾನ ನಿಲ್ದಾಣಕ್ಕೆ ಬಿಎಸ್ವೈ ಅವರ ಹೆಸರಿಡಲು ಸರ್ಕಾರ ಪಸ್ತಾವನೆ ಸಲ್ಲಿಸಲಿದೆ ಅಂತ ಬೊಮ್ಮಾಯಿ ಹೇಳಿದ್ದಾರೆ...
ವಿದ್ಯಾರ್ಥಿ ಭವನಕ್ಕೆ ಭೇಟಿ ನೀಡಿದ ಯಡಿಯೂರಪ್ಪ. ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಬಿಎಸ್ವೈ. ದೇವೇಗೌಡರನ್ನು ಭೇಟಿಯಾಗಿ ವಾಪಸ್ ಬರುವಾಗ ವಿದ್ಯಾರ್ಥಿ ಭವನಕ್ಕೆ ಭೇಟಿ. ಈ ವೇಳೆ ಶಾಸಕ ಗರುಡಾಚಾರ್, ಎಸ್.ಆರ್.ವಿಶ್ವನಾಥ್, ಎಂ.ಕೃಷ್ಣಪ್ಪ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದರು.
ಸಿಎಂ ಆಗಿದ್ದಾಗ ಗಾಣಿಗ ಸಮಾಜದ ಅನೇಕ ಬೇಡಿಕೆ ಈಡೇರಿಸಿದ್ದೇನೆ. ಆ ತೃಪ್ತಿ ಗಾಣಿಗ ಸಮಾಜಕ್ಕೂ ಇದೆ, ನನಗೂ ಇದೆ ಎಂದು ಮಾಜಿ ಸಿಎಂ ಬಿಎಸ್ವೈ ಹೇಳಿದ್ದಾರೆ. ಚುನಾವಣೆ ಬಂದಾಗ ಯಾರ ಬಣ್ಣ ಏನೂ ಅಂತಾ ಗೊತ್ತಾಗುತ್ತೆ ಎಂದು ಪ್ರಿಯಾಂಕ್ಗೆ ತಿರುಗೇಟು ನೀಡಿದ್ದಾರೆ..
ಪ್ರವೀಣ್ ಹತ್ಯೆಯಿಂದ ಸರ್ಕಾರ, ನಾಯಕರ ವೈಫಲ್ಯ ಬೀದಿಗೆ ಬಂದಿದ್ದು ಬಿಜೆಪಿ ಮತ್ತು ಸರ್ಕಾರದ ವರ್ಚಸ್ಸಿಗೆ ಕೊಡಲಿ ಪೆಟ್ಟು ಬಿದ್ದಿದೆ. ಈ ಹಿನ್ನೆಲೆಯಲ್ಲಿ ಡ್ಯಾಮೇಜ್ ಕಂಟ್ರೋಲ್ ಮಾಡಲು ಯಡಿಯೂರಪ್ಪ ಪ್ಲಾನ್ ಮಾಡಿದ್ದಾರೆ. ಪಕ್ಷ ಮತ್ತು ಸರ್ಕಾರದ ಬಗ್ಗೆ ತಲೆ ಕೆಡಿಸಿಕೊಂಡಿರುವ ಬಿಎಸ್ವೈ, ಪಕ್ಷ ಸಂಘಟನೆ ಹೆಸರಿನಲ್ಲಿ ರಾಜ್ಯ ಪ್ರವಾಸಕ್ಕೆ ಚಿಂತನೆ ನಡೆಸಿದ್ದಾರೆ.
ಆಪರೇಷನ್ ಕಮಲ ಕುಖ್ಯಾತಿಯ ಬಿ.ಎಸ್. ಯಡಿಯೂರಪ್ಪ ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ಕೊಟ್ಟದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ? ಇದು 'ನಾಚಿಕೆಗೇಡಿನ ರಾಜಕೀಯ' ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಡೆ ವಿರುದ್ಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.