ಸರಿಯಾದ ಸಮಯಕ್ಕೆ ಬಸ್ ಬಾರದೆ ಶಾಲಾ ವಿದ್ಯಾರ್ಥಿಗಳು ಪರದಾಡಿದ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮೇಕಳಿ ಗ್ರಾಮದಲ್ಲಿ ನಡೆದಿದೆ. ಸಂಜೆ ಶಾಲೆ ಬಿಟ್ಟರು ಸಂಜೆ ಸಮಯದಲ್ಲಿ ಸರಿಯಾದ ಸಮಯಕ್ಕೆ ಬಸ್ ಬಾರದ ಹಿನ್ನಲೆ ವಿದ್ಯಾರ್ಥಿಗಳು ರಾತ್ರಿವರೆಗೂ ಕಾದು ಬಳಿಕ ಗ್ರಾಮಸ್ಥರು ರಾಯಬಾಗ ಬಸ್ ಡಿಪೋ ಮ್ಯಾನೇಜರ್ ಗೆ ತರಾಟೆಗೆ ತೆಗೆದುಕೊಂಡ ಬಳಿಕ ಬಸ್ ಕಳುಹಿಸಿದ ಹಿನ್ನಲೆ ವಿದ್ಯಾರ್ಥಿಗಳು ಮನೆಗೆ ಸೇರುವಂತಾಗಿದೆ. ಕಳೆದ ಒಂದು ವಾರದಿಂದಲೂ ಇದೆ ಪರಿಸ್ಥಿತಿ ಇದ್ದು ಸರಿಯಾದ ಸಮಯಕ್ಕೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ..
Belgaum News: ಒಂದು ವರ್ಷದಲ್ಲಿ ಬೆಳಗಾವಿ ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಚಿನ್ನಾಭರಣ, ಹಣ ಕಳ್ಳತನ, ಬೈಕ್ ಕಳ್ಳತನ, ಮೋಟರ್ ಕಳ್ಳತನ ಪ್ರಕರಣಗಳನ್ನು ಬೇಧಿಸಿರುವ ಪೊಲೀಸರು.
ಅಕ್ರಮ ಮದ್ಯ ಮಾರಾಟ ಬಂದ್ ಮಾಡುವಂತೆ ಪಟ್ಟು
ತಡರಾತ್ರಿ ಪೊಲೀಸರನ್ನು ಕರೆಯಿಸಿ ಗ್ರಾಮಸ್ಥರಿಂದ ತರಾಟೆ
ಬೆಳಗಾವಿ ಜಿಲ್ಲೆ ಅಥಣಿ ತಾ. ಬಾಡಗಿ ಗ್ರಾಮದಲ್ಲಿ ಘಟನೆ
ಹಲವು ವರ್ಷದಿಂದ ಬಾಡಗಿ ಗ್ರಾಮದಲ್ಲಿ ಮದ್ಯ ಮಾರಾಟ
ಎಷ್ಟೋ ಬಾರಿ ಮಾಹಿತಿ ನೀಡಿದ್ರೂ ಬ್ರೇಕ್ ಹಾಕದ ಪೊಲೀಸರು
ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಾಡಗಿ ಗ್ರಾಮಸ್ಥರು
ಮತ್ತೆ ಮುನ್ನೆಲೆಗೆ ಬಂತು ಅಖಂಡ ಬೆಳಗಾವಿ ಜಿಲ್ಲಾ ವಿಭಜನೆ ಚರ್ಚೆ
ಜಿಲ್ಲೆ ವಿಭಜನೆ ವಿಚಾರದಲ್ಲಿ ಒಂದು ಹೆಜ್ಜೆ ಮುಂದೆ ಇಟ್ಟ ಲಕ್ಷ್ಮೀ ಹೆಬ್ಬಾಳ್ಕರ್
ಜಿಲ್ಲೆಯ ಕಾಂಗ್ರೆಸ್, ಬಿಜೆಪಿ ಶಾಸಕರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ನಿರ್ಧಾರ
ಉಸ್ತುವಾರಿ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಜಿಲ್ಲೆಯ ಶಾಸಕರ ಸಭೆಗೆ ನಿರ್ಧಾರ
ಬೆಳಗಾವಿ ಜಿಲ್ಲೆಯಲ್ಲಿ ಮುಂದುವರೆದ ಮಳೆ ಆರ್ಭಟ
ಜಿಲ್ಲೆಯ 4 ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ
ಖಾನಾಪುರ, ಬೈಲಹೊಂಗಲ, ಕಿತ್ತೂರು, ಚಿಕ್ಕೋಡಿ
ಬೆಳಗಾವಿ, ನಿಪ್ಪಾಣಿಯ ಶಾಲಾ-ಕಾಲೇಜುಗಳಿಗೆ ರಜೆ
ಪ್ರಾಥಮಿಕ-ಪ್ರೌಢ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಎರಡು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿಗಳ ಆದೇಶ
ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ
ಬುದ್ಧಿಮಾಂದ್ಯೆ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ..!
ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
ಪೋಷಕರು ಜಮೀನಿಗೆ ಹೋಗಿದ್ದಾಗ ಮನೆಗೆ ನುಗ್ಗಿ ಕ್ರೌರ್ಯ
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ನಾಗನೂರ ಪಟ್ಟಣದ ಗೋಕಾಕ ಕ್ರಾಸ್ ಬಳಿ ಇರುವ, ವೈಭವ ರಾಜರತ್ನ ಶೆಟ್ಟಿ ಎಂಬುವವರ ಗದ್ದೆಯಲ್ಲಿರುವ ಬಾವಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಬಾಲಕಿ ಮೃತಪಟ್ಟಿರುವ ಘಟನೆ ಮೂಡಲಗಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
Foreign delegates : ಲೋಕಸಭೆ ಚುನಾವಣೆ ಹಿನ್ನೆಲೆ ಇಂದು ಸೋಮವಾರ ಬೆಳಿಗ್ಗೆ ಐದು ದೇಶಗಳ 10 ಚುನಾವಣೆ ಅಧಿಕಾರಿಗಳ ತಂಡದಿಂದ ಬೆಳಗಾವಿ ಲೋಕಸಭಾ ಚುನಾವಣೆ ಸಿದ್ಧತೆಯನ್ನು ವೀಕ್ಷಿಸಿದರು.
ಬೆಳಗಾವಿ ಜಿಲ್ಲೆಗೆ ಆಗಮಿಸಿದ ಕಾಂಬೋಡಿಯಾ, ನೇಪಾಳ, ಮೊಲ್ಡೊವಾ, ಸಿಷೆಲ್ ಹಾಗೂ ತುನಿಷಿಯಾ ದೇಶಗಳ ಚುನಾವಣಾ ಆಯೋಗಗಳ ಹತ್ತು ಸದಸ್ಯರ ತಂಡವನ್ನು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಬರಮಾಡಿಕೊಂಡರು.
ಬೆಳಗಾವಿಯಲ್ಲಿ ಗೋವು ಸಾಗಾಟ ಲಾರಿ ತಡೆದು ಹಲ್ಲೆ
ಲಾರಿ ಗಾಜು ಪುಡಿ ಪುಡಿ.. ಚಾಲಕನ ಮೇಲೆ ದಾಳಿ..!
ಬಿಮ್ಸ್ ಆಸ್ಪತ್ರೆಯಲ್ಲಿ ಉಮರ್ ಮೋಯಿದಿನ್ಗೆ ಚಿಕಿತ್ಸೆ
ಬೆಳಗಾವಿ ಸುವರ್ಣಸೌಧದ ಮುಂಭಾಗದಲ್ಲಿ ಘಟನೆ
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಯತ್ನಾಳ್, ಇಂದು ಗ್ಯಾರಂಟಿ ಗ್ಯಾರಂಟಿ ಅಂತಿದ್ದಾರೆ. ಆದರೆ ದೇಶ ಉಳಿದರೆ ಮಾತ್ರ ಗ್ಯಾರಂಟಿ ಜಾರಿಯಲ್ಲಿರುತ್ತದೆ. ದೇಶ ಉಳಿಯದಿದ್ದರೆ, ಮುಸ್ಲಿಂರೆಲ್ಲ ಒಂದಾದರೆ ಹಿಂದೂಗಳ ಜಮೀನು ಉಳಿಯಲ್ಲ, ಮನೆಯೂ ಉಳಿಯಲ್ಲ. ಒಂದು ಮತಾಂತರವಾಗಬೇಕು, ಇಲ್ಲ ಸಾಯಬೇಕು.. ಇವೆರಡೇ ಆಯ್ಕೆ ಉಳಿಯುತ್ತವೆ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.