ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಮನೋಹರ್ ಲಾಲ್ ಖಟ್ಟರ್ ಅವರು ಜವಾಹಲ್ ಲಾಲ್ ನೆಹರು ಅವರನ್ನು ಭಾರತದ ಮೊದಲ ಪ್ರಧಾನಿಯಾಗಿ ನೇಮಕ ಮಾಡಿರುವುದು "ಆಕಸ್ಮಿಕ" ಎಂದು ಕರೆದಿದ್ದು, ಕಾಂಗ್ರೆಸ್ ನಿಂದ ಟೀಕೆಗೆ ಕಾರಣವಾಗಿದೆ. "ನಾನು ಪಂಡಿತ್ ಜವಾಹರ್ ಲಾಲ್ ನೆಹರೂ ಅವರು ಆಕಸ್ಮಿಕವಾಗಿ ಪ್ರಧಾನಿಯಾದರು ಎಂದು ಹೇಳಲು ಬಯಸುತ್ತೇನೆ.
Unemployment Rate In India: ಕೇಂದ್ರ ಸರ್ಕಾರವೇ ಪ್ರತಿ ೩ ತಿಂಗಳಿಗೊಮ್ಮೆ ನಡೆಸುವ ಪೀರಿಯಾಡಿಕ್ ಲೇಬರ್ ಫೋರ್ಸ್ ಸರ್ವೇ (PLFS) ಪ್ರಕಾರ, 2019ರಿಂದ 2022ರವರೆಗಿನ ಅವಧಿಯಲ್ಲಿ ದೇಶದ ನಿರುದ್ಯೋಗ ಪ್ರಮಾಣ 22.9%ಕ್ಕೆ ಏರಿಕೆಯಾಗಿದೆ. ಹೆಚ್ಚಾಗಿರುವುದು ಉದ್ಯೋಗಗಳ ಸಂಖ್ಯೆಯೇ? ಇಲ್ಲವೇ ನೀವು ಹೇಳುತ್ತಿರುವ ಸುಳ್ಳುಗಳ ಸಂಖ್ಯೆಯೇ ಪ್ರಧಾನಿಗಳೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Pawan Kalyan: ಜನಸೇನಾ ಅಭ್ಯರ್ಥಿಯಾದ ಪವನ್ ಕಲ್ಯಾಣ್ ಬಿಜೆಪಿ ಜೊತೆಗಿನ ಮೈತ್ರಿಯ ಭಾಗವಾಗಿ 8 ಸ್ಥಾನಗಳಲ್ಲಿ ಸ್ಪರ್ಧಿಸಿ ಕನಿಷ್ಠ ಒಂದು ಸ್ಥಾನದಲ್ಲೂ ಠೇವಣಿ ಪಡೆಯದೆ 2023 ವಿಧಾನಸೌಧ ಚುನಾವಣೆಯಲ್ಲಿ ಸೋಲನ್ನು ಕಂಡಿದ್ದಾರೆ.
Maharashtra Political Crisis: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್ ಸಿ ಪಿ) ನಾಯಕ ಅಜಿತ್ ಪವಾರ್ ಅವರ ಈ ಹೆಜ್ಜೆಯ ನಂತರ, ಶರದ್ ಪವಾರ್ ಅವರು ಭಾರಿ ಹಿನ್ನಡೆ ಅನುಭವಿಸಿದ್ದಾರೆ ಮತ್ತು ಎನ್ ಸಿ ಪಿ ಎರಡು ಹೋಳಾಗಿದೆ.
ಪಕ್ಷದ ಪದಾಧಿಕಾರಿಗಳಿಗೆ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಮತ ಗಟ್ಟೆಗಳ ವಿವರ ನೀಡುವಂತೆ ಕೋರಿ ಸಂಸದೆ ಶೋಭಾ ಕರಂದ್ಲಾಜೆ ಪತ್ರ ಬರೆದಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ರಾಜ್ಯದಲ್ಲಿ ಚುನಾವಣಾ ನಡೆಸುತ್ತಿರುವುದು ಚುನಾವಣಾ ಆಯೋಗವೋ? ಭಾರತೀಯ ಜನತಾ ಪಕ್ಷವೋ? ಎಂದು ಅವರು ಪ್ರಶ್ನಿಸಿದ್ದಾರೆ.
ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ನಾಯಕರ ತೀವ್ರ ಕಸರತ್ತು ನಡೆಸುತ್ತಿದ್ದಾರೆ.. ತುಮಕೂರು ಜಿಲ್ಲಾ ಕೋರ್ ಕಮಿಟಿ ಸದಸ್ಯರ ಜತೆ ಸಭೆ ನಡೆದಿದೆ.. ಕ್ಷೇತ್ರದಲ್ಲಿ ಯಾವ ಯಾವ ಅಭ್ಯರ್ಥಿ ಕಡೆ ಹೆಚ್ಚಿನ ಒಲವಿದೆ. ಯಾರಿಗೆ ಟಿಕೆಟ್ ಕೊಟ್ರೆ ಗೆಲುವು ಸಾಧಿಸಬಹುದು ಎಂದು ಜಿಲ್ಲೆಯ ಸದಸ್ಯರಿಂದ ಬಿಜೆಪಿ ನಾಯಕರು ಮಾಹಿತಿ ಪಡೆದಿದ್ದಾರೆ..
ಇಂದು ಬಿಜೆಪಿ ಚುನಾವಣಾ ಚಾಣಕ್ಯ ಕರ್ನಾಟಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಮತ್ತೆ ರಾಜ್ಯದಲ್ಲಿ ಕಮಲ ಅರಳಿಸಲು ನಯಾ ತಂತ್ರ ಹೂಡಿದ್ದಾರೆ. ಅಲ್ಲದೇ ಇಂದು ಬೆಂಗಳೂರಿನಲ್ಲೇ ವಾಸ್ತವ್ಯ ಹೂಡಿದ್ದು, ವಿವಿಧ ಕ್ಷೇತ್ರಗಳ ಪ್ರಮುಖರ ಜೊತೆ ಸಂವಾದ ನಡೆಸಿದ್ದಾರೆ.
Modi message to BJP leaders : ಪ್ರಧಾನಿ ನರೇಂದ್ರ ಮೋದಿ ಕೂಡ ಬಾಲಿವುಡ್ ಚಿತ್ರಗಳ ಬಹಿಷ್ಕಾರದ ಬಗ್ಗೆ ತಮ್ಮ ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಕೊನೆಯ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಪಕ್ಷದ ನಾಯಕರಿಗೆ ಹಲವು ಮಹತ್ವದ ಸಲಹೆ, ಸೂಚನೆಗಳನ್ನು ನೀಡಿದ್ದಾರೆ.
ಭಾರತೀಯ ಜನತಾ ಪಕ್ಷ (ಬಿಜೆಪಿ) 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಸೋತ 144 ಲೋಕಸಭಾ ಕ್ಷೇತ್ರಗಳಲ್ಲಿ 40 ರ್ಯಾಲಿಗಳನ್ನು ನಡೆಸಲು ಯೋಜಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಪ್ರತಿ ಕ್ಲಸ್ಟರ್ನಲ್ಲಿ ಒಂದು ರ್ಯಾಲಿ ನಡೆಸುವ ಸಾಧ್ಯತೆಯಿದೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಶುಕ್ರವಾರ ಕರ್ನಾಟಕಕ್ಕೆ ಪ್ರವೇಶಿಸಿದ್ದು, ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ಚುನಾವಣೆಗೆ ಮುನ್ನ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ಕಾಂಗ್ರೆಸ್ ತನ್ನ ಅವಕಾಶಗಳನ್ನು ಹೆಚ್ಚಿಸುತ್ತದೆ ಎಂದು ಭಾವಿಸಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಶಿವಸೇನೆ ಭಾರತೀಯ ಜನತಾ ಪಕ್ಷದಿಂದ (ಬಿಜೆಪಿ) ಬೇರ್ಪಟ್ಟಿದೆ ಆದರೆ ಹಿಂದುತ್ವದಿಂದ ಅಲ್ಲ ಎಂದು ಶನಿವಾರ ಉತ್ತರ ಪ್ರದೇಶದ ದೇವಾಲಯ ಪಟ್ಟಣವಾದ ಅಯೋಧ್ಯೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದ್ದಾರೆ.
ಫೆಬ್ರವರಿ 2 ರಂದು ಅಮ್ರಾಹಾದಲ್ಲಿ ಪಶ್ಚಿಮ ವಲಯದ ಬೂತ್ ಅಧ್ಯಕ್ಷರ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮಾತನಾಡಲಿದ್ದಾರೆ. ಫೆಬ್ರವರಿ 6 ರಂದು ಇಟಾದಲ್ಲಿ ಬ್ರಾಜ್ ಪ್ರದೇಶದ ಬೂತ್ ಅಧ್ಯಕ್ಷರ ಸಮಾವೇಶದಲ್ಲಿ ಭಾಗಿಯಾಗಲಿರುವ ಅವರು ಪಕ್ಷದ ಕಾರ್ಯಕರ್ತರೊಂದಿಗೆ ನೇರ ಮಾತುಕತೆ ನಡೆಸುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.