Chikkalur Jatre: ಜಾತ್ರೆಯ 4ನೇ ದಿನದಂದು ಪಂಕ್ತಿಸೇವೆ ಎಂಬ ವಿಶಿಷ್ಟ ಆಚರಣೆ ನಡೆಯಲಿದ್ದು, ಸಿದ್ದಪ್ಪಾಜಿ, ಮಂಟೇಸ್ವಾಮಿ ದೇವರಿಗೆ ಅನ್ನ, ಮುದ್ದೆ, ಮಾಂಸದ ಭಕ್ಷ್ಯಗಳನ್ನು ಎಡೆ ಇಟ್ಟು ಪೂಜೆ ಸಲ್ಲಿಸಿ ಸಹಪಂಕ್ತಿ ಭೋಜನ ಸವಿಯುವುದೇ ಪಂಕ್ತಿ ಸೇವೆಯಾಗಿದೆ.
Male Mahadeshwar: ಶ್ರೀ ಮಲೆ ಮಹದೇಶ್ವರ ಸ್ವಾಮಿ ದೇಗುಲದಲ್ಲಿ ಭಕ್ತರು ಕಾಣಿಕೆ ರೂಪದಲ್ಲಿ 73 ಗ್ರಾಂ ಚಿನ್ನ ಹಾಗೂ 3.9 ಕೆಜಿ ಬೆಳ್ಳಿಯನ್ನು ಅರ್ಪಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
Bandipur Tiger Reserve: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಕರ್ನಾಟಕ ಸರ್ಕಾರ ರಾತ್ರಿ ಸಂಚಾರವನ್ನು ನಿಷೇಧಿಸಿದೆ.
ಕುರಿ ಸಾಕಣಿಗೆ ಮಾಡುತ್ತಿದ್ದ ಮಾಲೀಕರು ಕಡು ಬಡವರಾಗಿದ್ದು, ಕುರಿಗಳನ್ನೆ ನಂಬಿ ಜೀವನ ನಡೆಸುತ್ತಿದ್ದರು.ಇದೀಗ 10 ಕುರಿಗಳು ಒಮ್ಮೆಲೆ ಸಾವನ್ನಪ್ಪಿರುವ ಕಾರಣ ಅಪಾರ ನಷ್ಟ ಉಂಟಾಗಿದೆ.ಇದನ್ನು ಗಂಭೀರವಾಗಿ ತೆಗೆದುಕೊಂಡು ಈ ಕೂಡಲೇ ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸೂಕ್ತ ಪರಿಹಾರ ದೊರಕಿಸಿಕೊಡಬೇಕೆಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಶಿವಪುರ ಮಹದೇವಪ್ಪ ಒತ್ತಾಯಿಸಿದ್ದಾರೆ
Karimani Malika Ninalla: ಆತ್ಮಹತ್ಯೆ ಮಾಡಿಕೊಂಡಿರುವ ಕುಮಾರ್ ಪತ್ನಿ ರೂಪಾ ಊರಿನಲ್ಲಿದ್ದ ವೇಳೆ ಸೋದರಮಾವ ಹಾಗೂ ತನ್ನ ಸಹೋದರಿ ಜೊತೆ ಸೇರಿ ʼಕರಿಮಣಿʼ ಮಾಲೀಕ ಎಂಬ ಹಾಡಿಗೆ ರೀಲ್ಸ್ ಮಾಡಿ ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದಳಂತೆ.
ಪತ್ರಕರ್ತನ ಸಮಯಪ್ರಜ್ಞೆಯಿಂದ ನೀರಿನಲ್ಲಿ ಮುಳುಗುತ್ತಿದ್ದ ಮರಿಯಾನೆಯೊಂದು ತಾಯಿ ಮಡಿಲು ಸೇರಿದ ಘಟನೆ ಚಾಮರಾಜನಗರ ಗಡಿಭಾಗದ ತಮಿಳುನಾಡಿನ ಪಾಲಾರ್ ಅರಣ್ಯ ಪ್ರದೇಶದ ಬೀಟ್ ನಲ್ಲಿ ಗುರುವಾರ ನಡೆದಿದೆ.
ಚಾಮರಾಜನಗರ ಜಿಲ್ಲಾ ಕೇಂದ್ರದಲ್ಲೇ ಕಳೆದ 4 ದಿನಗಳಲ್ಲಿ ಮೂರು ಮನೆಗೆ ಕನ್ನ ಹಾಕಿದ್ದಾರೆ. ಕನ್ನ ಹಾಕಲು ಹೊಂಚು ಹಾಕುತ್ತಿದ್ದ ಆರೋಪದ ಮೇಲೆ ಜನರೇ ಒಬ್ಬನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆಯೂ ನಡೆದಿದ್ದು ಕಳ್ಳರ ಕೃತ್ಯಕ್ಕೆ ಯಾಕೋ ಬ್ರೇಕ್ ಬೀಳುತ್ತಿಲ್ಲ.
ಒಂದು ತಿಂಗಳ ಕಾಲ ಚಾಮರಾಜನಗರದಲ್ಲಿ ಗಣಿಗಾರಿಕೆ ಸ್ಥಗಿತಗೊಳಿಸಿ ಡಿಸಿ, ಭೂ ವಿಜ್ಞಾನಿಗಳ ತಂಡ ತಪಾಸಣೆ ಮಾಡಿದ ಬಳಿಕವಷ್ಟೇ ಕ್ವಾರಿ ನಡೆಸಲು ಅವಕಾಶ ಎಂದು ಗುಡುಗಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಎಚ್ಚರಿಕೆ ಸುದ್ದಿಗೋಷ್ಠಿಗಷ್ಟೇ ಸೀಮಿತವಾಯಿತೇ ಎಂಬ ಪ್ರಶ್ನೆ ಉದ್ಭವಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.