ಅಸೆಂಬ್ಲಿ ಹಾಲ್ ನಲ್ಲಿ ಸಾವರ್ಕರ್ ಫೋಟೋ ಹಾಕಿದ್ದನ್ನು ಖಂಡಿಸಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಸುವರ್ಣಸೌಧದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಸುವರ್ಣಸೌಧದ ವಿಐಪಿ ಗೇಟ್ ನಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಯುತ್ತಿದೆ.
ಸಿಎಂ ಬಸವರಾಜ ಬೊಮ್ಮಾಯಿ ಮೂಢನಂಬಿಕೆಗೆ ಸೆಡ್ಡು ಹೊಡೆಯಲು ಮುಂದಾಗಿದ್ದಾರೆ. ಇಂದು ಚಾಮರಾಜನಗರ ಜಿಲ್ಲೆ ಪ್ರವಾಸಕ್ಕೆ ತೆರಳಲಿದ್ದಾರೆ. ವಿವಿಧ ಕಾಮಗಾರಿಗೆ ಸಿಎಂ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ವೇದಿಕೆಯಲ್ಲಿ ಅಳವಾಡಿಸಿದ್ದ ಎಲ್ ಸಿ ಡಿ ಪರದೆಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪೋಟೋ ಇಲ್ಲದ್ದಕ್ಕೆ ಕುಪಿತಗೊಂಡ ಅಭಿಮಾನಿಗಳು ಯಡಿಯೂರಪ್ಪಗೆ ಜೈಕಾರ ಹಾಕಿ ಫೋಟೋ ಹಾಕುವಂತೆ ಒತ್ತಾಯಿಸಿದರು. ಕೆಲಹೊತ್ತು ಇದು ಗೊಂದಲಕ್ಕೂ ಕಾರಣವಾಯಿತು.
ಕಾಂಗ್ರೆಸ್ ಕರ್ನಾಟಕದಲ್ಲಿ ಸಂಪೂರ್ಣವಾಗಿ ನೆಲಕಚ್ಚುವುದು ನೂರಕ್ಕೆ ನೂರು ಸತ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕುಣಿಗಲ್ ನಲ್ಲಿ ಭಾಜಪ ಹಮ್ಮಿಕೊಂಡಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಹಿಂದೂ ಪದದ ವಿವಾದಿತ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂಗೆ ಪತ್ರ ಬರೆದು ಜಾರಕಿಹೊಳಿ ಹೇಳಿಕೆ ಹಿಂಪಡೆದ ವಿಚಾರಕ್ಕೆ 'ಮಾತು ಆಡಿದ್ರೆ ಹೋಯ್ತು.. ಮುತ್ತು ಒಡೆದರೆ ಹೋಯ್ತು' ಎಂದು ಬೆಳಗಾವಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ತಮ್ಮ ನಿವಾಸದ ಬಳಿ ಇಂದು ಭೇಟಿ ಮಾಡಿದ ಆಸಿಡ್ ದಾಳಿಗೊಳಗಾದ ಮಹಿಳೆಗೆ ಕೂಡಲೇ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯ ಮಂತ್ರಿಗಳು ಮಾಧ್ಯಮದವರಿಗೆ ತಿಳಿಸಿದರು.
ಎಸ್ಸಿ, ಎಸ್ಟಿ ಸಮುದಾಯಕ್ಕೆ ಬೊಮ್ಮಾಯಿ ದೀಪಾವಳಿ ಗಿಫ್ಟ್ ನೀಡಿದ್ದಾರೆ. SC ಮತ್ತು ST ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದ್ದು ರಾಜ್ಯಪಾಲರು ಅಂಕಿತ ಹಾಕಿದ್ದಾರೆ.
ಭಾರತೀಯ ಜನತಾ ಪಕ್ಷ ಮತ್ತೊಮ್ಮೆ 2023 ರ ಚುನಾವಣೆಯಲ್ಲಿ ವಿಜಯಶಾಲಿಯಾಗುವ ವಿಶ್ವಾಸವಿದೆ, ಎಲ್ಲೆಡೆ ಬಹಳಷ್ಟು ಉತ್ಸಾಹವಿದೆ. ಜನಸಂಕಲ್ಪ ಯಾತ್ರೆ ಮೂಲಕ ಜನರ ವಿಶ್ವಾಸವನ್ನು ಗಳಿಸಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹಿರಿಯ ನಟಿ ಡಾ.ಎಂ.ಲೀಲಾವತಿ ನಿರ್ಮಿಸಿರುವ ಆಸ್ಪತ್ರೆಯನ್ನು ಸಿಎಂ ಬಸವಾಜ ಬೊಮ್ಮಾಯಿ ಉದ್ಘಾಟಿಸಿದ್ರು.. ಇದೇ ವೇಳೆ ಮಾತನಾಡಿದ ಸಿಎಂ, ಲೀಲಾವತಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ರು.
ಸಚಿವ ಉಮೇಶ್ ಕತ್ತಿ ನಿಧನರಾದ ಹಿನ್ನೆಲೆ ರಾಜ್ಯಾದ್ಯಂತ ಮೂರು ದಿನಗಳ ಕಾಲ ಶೋಕಾಚರಣೆಗೆ ತೀರ್ಮಾನ ಮಾಡಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸರ್ಕಾರದಿಂದ ಯಾವುದೇ ಕಾರ್ಯಕ್ರಮಗಳನ್ನ ಮಾಡದಿರಲು ತೀರ್ಮಾನಿಸಲಾಗಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಿಎಂ ಬಸವರಾಜ ಬೊಮ್ಮಾಯಿ ಚಿಂತನೆ ನಡೆಸಿದ್ದಾರೆ. ಆದ್ರೆ ಚುನಾವಣೆ ಹೊಸ್ತಿಲಲ್ಲಿ ಸಂಪುಟ ವಿಸ್ತರಣೆ ಬೇಡ ಅಂತಾ ಹಿರಿಯ ಶಾಸಕರು ಅಭಿಪ್ರಾಯ ಪಟ್ಟಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜುಲೈ 28ರಂದು ದೊಡ್ಡಬಳ್ಳಾಪುರದಲ್ಲಿ ಜನೋತ್ಸವ ನಿಗದಿಯಾಗಿ ಕಾರಣಾಂತರಗಳಿಂದ ರದ್ದಾಗಿದ್ದ ಜನೋತ್ಸವ ಕಾರ್ಯಕ್ರಮವನ್ನು ಆಗಸ್ಟ್ 28 ರಂದು ನಡೆಸಲು ನಿರ್ಧರಿಸಲಾಗಿದೆ.
ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ಗಲಾಟೆ ಪ್ರಕರಣ ಸಂಬಂಧ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸ್ಥಳೀಯ ನಾಯಕರು ಪೊಲೀಸರಿಗೆ ಸಹಕಾರ ಕೊಡ್ತಿದ್ದಾರೆ. ಯಾರೇ ತಪ್ಪು ಮಾಡಿದ್ರೂ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ.
ಇಂದಿನಿಂದ ಎರಡು ದಿನಗಳ ಕಾಲ ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 11.30ಕ್ಕೆ ದೆಹಲಿಗೆ ಪ್ರಯಾಣಿಸಲಿರೋ ಬೊಮ್ಮಾಯಿ, ಸಂಜೆ 4.30ಕ್ಕೆ ಅಜಾದಿ ಕಾ ಅಮೃತ ಮಹೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ನಾಳೆ ಬೆಳಗ್ಗೆಯಿಂದ ಸಂಜೆಯವರೆಗೆ ನೀತಿ ಆಯೋಗ ಸಭೆಯಲ್ಲಿ ಪಾಲ್ಗೊಂಡು, ರಾತ್ರಿ 11.30ಕ್ಕೆ ಬೆಂಗಳೂರಿಗೆ ವಾಪಸಾಗಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.