ಈ ವೇಳೆ ಶಾಖೆಯ ಮುಖ್ಯ ವ್ಯವಸ್ಥಾಪಕರು ಗ್ರಾಹಕರ ಕೋರಿಕೆಯನ್ನು ತಿರಸ್ಕರಿಸಿ, ಬ್ಯಾಂಕಿನ ನಿಯಮದಂತೆ ಮತ್ತು ಆಡಿಟ್ಗೆ ಸಂಬಂಧಪಟ್ಟಂತೆ ಹೆಚ್ಚುವರಿಯಾಗಿ ನೀಡಿದ ಗೃಹರಕ್ಷಕ ಪಾಲಸಿಯನ್ನು ರದ್ದುಗೊಳಿಸಲು ಬರುವುದಿಲ್ಲವೆಂದು ಹಿಂಬರಹ ನೀಡಿ ಕಳುಹಿಸಿದ್ದರು.
ಸಂದಾಯವಾಗುವವರೆಗೆ ದೂರುದಾರರಿಗೆ ಕೊಡುವಂತೆ ಆಯೋಗ ತನ್ನ ತೀರ್ಪಿನಲ್ಲಿ ತಿಳಿಸಿದೆ. ದೂರುದಾರರಿಗೆ ಆಗಿರುವ ಮಾನಸಿಕ ತೊಂದರೆ ಹಾಗೂ ಅನಾನುಕೂಲಕ್ಕಾಗಿ ರೂ.50 ಸಾವಿರ ಪರಿಹಾರ ಮತ್ತು ರೂ.10 ಸಾವಿರ ಪ್ರಕರಣದ ಖರ್ಚು ವೆಚ್ಚವನ್ನು ಕೊಡುವಂತೆ ಎದುರುದಾರ ಮ್ಯಾಗಮಾ ವಿಮಾ ಕಂಪನಿಗೆ ಆಯೋಗ ಆದೇಶಿಸಿದೆ.
ಮೊಬೈಲ್ನಲ್ಲಿ ತಯಾರಿಕಾ ದೋಷವಿರುವ ಕಾರಣ ಮೊಬೈಲ್ ಖರೀದಿಯ ಮೊತ್ತ ರೂ.40,800/-ಗಳನ್ನು ಹಾಗೂ ಎದುರುದಾರರ ಸೇವಾ ನ್ಯೂನ್ಯತೆಯಿಂದ ಆದ ಮಾನಸಿಕ ಹಿಂಸೆಗೆ ರೂ.50,000/-ಗಳನ್ನು ಹಾಗೂ ರೂ.2.000/-ಗಳ ವೆಚ್ಚಗಳನ್ನು ಎದುರುದಾರರು ನೀಡಲು ನಿರ್ದೇಶಿಸಬೇಕೆಂದು ವಿನಂತಿಸಿರುತ್ತಾರೆ.
ಧಾರವಾಡ ತಾಲ್ಲೂಕಿನ ನಾರಾಯಣಪುರದ ವಾಸಿ ಮಾರುತಿ ಶಾನಬಾಗ್ ಎಂಬುವವರು ದಿ:22/12/2023 ರಂದು ರೂ.10,000/- ಕಿಮ್ಮತ್ತಿನ ಆಯುರ್ವೇದಿಕ್ ಆಹಾರ ಸಾಮಾನುಗಳನ್ನು ಮುಂಬೈಯಲ್ಲಿರುವ ಸಂತೋಷ ಎಂಬುವವರಿಗೆ ಎದುರುದಾರರಾದ ಎಸ್.ಆರ್.ಎಸ್. ಟ್ರಾವೆಲ್ಸ್ನವರ ಮುಖಾಂತರ ಸರ್ವಿಸ್ ಚಾರ್ಜ ಪಾವತಿಸಿ ಪಾರ್ಸಲ್ ಕಳುಹಿಸಿದ್ದರು. ಆದರೆ ಅದು ಸಂತೋಷ ಅವರಿಗೆ ತಲುಪಿರಲಿಲ್ಲ.
ಒಂದು ವರ್ಷ ಕಳೆದರೂ ತಾನು ಕೇಳಿದ ದಾಖಲೆಗಳನ್ನು ನೀಡದೆ ಅವರು ಕರ್ತವ್ಯ ಲೋಪ ಎಸಗಿ ತನಗೆ ಸತಾಯಿಸುತ್ತಿರುವುದಾಗಿ ಮತ್ತು ಸೇವಾ ನ್ಯೂನ್ಯತೆ ಎಸಗಿದ್ದಾರೆ ಅಂತಾ ಹುಬ್ಬಳ್ಳಿಯ ಭೂದಾಖಲೆಗಳ ಸಹಾಯಕ ನಿರ್ದೇಶಕರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಫಿರ್ಯಾದುದಾರರು ಧಾರವಾಡ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ದೂರನ್ನು ಸಲ್ಲಿಸಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.