Channapatna by-election: ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಸ್ಪರ್ಧೆ ಮಾಡಲ್ಲ ಎಂದು ಹೇಳಿದ್ದಾರೆ. ಸೀಟು ಅವರದ್ದೇ ಆಗಿರುವುದರಿಂದ ಹಾಗೂ ಎನ್ಡಿಎ ಪಾರ್ಟ್ನರ್ ಆಗಿರುವುದರಿಂದ ಜೆಡಿಎಸ್ನವರ ಸಲಹೆ ಪ್ರಮುಖವಾಗಿರುತ್ತದೆ. ಇನ್ನು ಎರಡು ದಿನದಲ್ಲಿ ಎಲ್ಲವೂ ತೀರ್ಮಾನವಾಗಲಿದೆ ಎಂದರು.
ಯೋಗೇಶ್ವರ್ ದೊಡ್ಡವರು, ಅವರ ಬಗ್ಗೆ ಏನು ಚರ್ಚೆ ಮಾಡಲಿ
ಯೋಗೇಶ್ವರ್ ಡಿ.ಕೆ.ಶಿವಕುಮಾರ್ ಸಂಪರ್ಕದಲ್ಲಿದ್ದಾರೆ
ಪಕ್ಷೇತರ ಅಭ್ಯರ್ಥಿಯಾಗ್ತಾರೆ ಅನ್ನೋ ಸುದ್ದಿಯೂ ಇದೆ
ಅವರ ನಿರ್ಧಾರದ ಬಗ್ಗೆ ನನ್ನ ಬಳಿ ಚರ್ಚೆ ನಡೆಸಿಲ್ಲ
ಬೆಂಗಳೂರಿನಲ್ಲಿ ಕೇಂದ್ರ ಸಚಿವ ಎಚ್ಡಿಕೆ ಹೇಳಿಕೆ
ಚನ್ನಪಟ್ಟಣದ ವಿಚಾರ ಯಾವುದೇ ಚರ್ಚೆ ಆಗಿಲ್ಲ
ದೆಹಲಿಯಲ್ಲಿ ಚನ್ನಪಟ್ಟಣ ಬೈ ಎಲೆಕ್ಷನ್ ವಿಚಾರ
HDK-CPY ಮಧ್ಯೆ ಬಗೆಹರಿಯದ ಟಿಕೆಟ್ ಕಗ್ಗಂಟು
ಮೈತ್ರಿ ಸಭೆಯಲ್ಲಿ CPY ವಿರುದ್ಧ ಹೆಚ್ಡಿಕೆ ಕಿಡಿ
ಒಮ್ಮತದ ನಿರ್ಧಾರದ ಬಗ್ಗೆ ಪ್ರಸ್ತಾಪಿಸಿದ ನಾಯಕರು
ನಾನು ಕಾಂಗ್ರೆಸ್ಗೆ ಹೋಗುವ ಬಗ್ಗೆ ಆಲೋಚನೆ ಮಾಡಿಲ್ಲ. ಯಾರೂ ನನ್ನನ್ನು ಮಾತನಾಡಿಸಲಿಲ್ಲ. ಡಿಕೆಶಿ ಅವರು ಏನೇನೋ ಮಾತನಾಡುತ್ತಾರೆ. ಅದು ಅವರ ರಾಜಕೀಯ ತಂತ್ರಗಾರಿಕೆ. ಅವರಿಗೆ ಯಾವಾಗ ಏನು ಮಾತಾಡಬೇಕು ಅಂತಾ ಗೊತ್ತಿದೆ ಎಂದು ಸಿಪಿ ಯೋಗೇಶ್ವರ್ ಹೇಳಿದ್ದಾರೆ.
ರಾಮಾಪುರ ಪ್ರದೇಶದಲ್ಲಿ ಮಹದೇವಯ್ಯನವರ ಕಾರನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಅದರಲ್ಲಿ ರಕ್ತದ ಕಲೆಗಳಿರುವುದು ಕಂಡುಬಂದಿತ್ತು. ಕಾರು ಪತ್ತೆಯಾದ ಬೆನ್ನಲ್ಲೇ ಖಾಕಿಪಡೆ ತನಿಖೆಯನ್ನು ಚುರುಕುಗೊಳಿಸಿತ್ತು. ಆದರೆ ಕೊಲೆಯಾದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.
ಮಾಜಿ ಶಾಸಕರು ಹತಾಶರಾಗಿದ್ದಾರೆ ಎಂದು ಕಾಣಿಸುತ್ತಿದೆ. ಅವರ ಮಾತುಗಳಲ್ಲಿ ಕ್ಲೀಯರ್ ಆಗಿ ಅರ್ಥ ಆಗ್ತಾ ಇದೆ ಎಂದು ಸಿಪಿ ಯೋಗೆಶ್ವರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ರು.
ಸಿ.ಪಿ.ಯೋಗೇಶ್ವರ್ ಕಾರಿಗೆ ಕಲ್ಲು ತೂರಾಟ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ದೂರು ದಾಖಲಾಗಿದೆ. ಸಿಪಿವೈ ತಮ್ಮ ಕಾರು ಚಾಲಕನಿಂದ ದೂರು ಕೊಡಿಸಿದ್ದಾರೆ. 14 ಜನರ ವಿರುದ್ಧ ದೂರು ನೀಡಲಾಗಿದೆ.
30ವರ್ಷಗಳ ಹಿಂದೆ ನನಗೆ ಬೆದರಿಕೆ ಹಾಕಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ನನ್ನ ಬಳಿ ಹಣ ಪಡೆದಿದ್ರು ಎಂದು ಚನ್ನಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಗಂಭೀರ ಆರೋಪ ಮಾಡಿದ್ದಾರೆ.. ಕುಮಾರಸ್ವಾಮಿ ಈಗ ನನ್ನ ವಿರುದ್ಧ ಅವಹೇಳನವಾಗಿ ಮಾತನಾಡ್ತಿದ್ದಾರೆ. ತಾಲೂಕಿನಲ್ಲಿ ಕುಮಾರಸ್ವಾಮಿ ಏನು ಮಾಡ್ತಿದ್ದಾರೆ ಅಂತ ಗೊತ್ತಿದೆ. ಕ್ಷೇತ್ರದಲ್ಲಿ ರಾಜಕೀಯವಾಗಿ ಯಾರನ್ನೂ ಮುಂದೆ ಬರಲು ಅವರು ಬಿಡಲ್ಲ ಎಂದು ಆರೋಪಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.