ಪ್ರಧಾನಿ ಮೋದಿ ಸರ್ಕಾರದಲ್ಲಿ ಅಭಿವೃದ್ಧಿ ಮತ್ತು ಆರ್ಥಿಕ ಬೆಳವಣಿಗೆಗೆ ಒತ್ತು ನೀಡಲಾಗಿದೆ. ಉತ್ತಮ ಆಡಳಿತದಿಂದಾಗಿ ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯು ಪಾರದರ್ಶಕ ಮತ್ತು ಸಮಯಕ್ಕೆ ಬದ್ಧವಾಗಿದೆ. ಬಡತನ ಮತ್ತು ಸಾಮಾಜಿಕ-ಆರ್ಥಿಕ ಅಸಮಾನತೆ ಹೋಗಲಾಡಿಸುವುದು ಮೋದಿ ಸರ್ಕಾರದ ಗುರಿಯಾಗಿದೆ. ಮೋದಿ ಸರ್ಕಾರದ ಅಂತ್ಯೋದಯ ಯೋಜನೆಗಳಿಂದ ಸಮಾಜದ ಬಡ ವರ್ಗದವರು ಪ್ರಯೋಜನ ಪಡೆದಿದ್ದಾರೆ ಎಂದು ಗಡ್ಕರಿ ಹೇಳಿದ್ದಾರೆ.
ಬೆಂಗಳೂರಲ್ಲಿ ಸಚಿವ ಮಂಕಾಳ್ ವೈದ್ಯ ಹೇಳಿಕೆ ಸಮುದ್ರದಲ್ಲಿ ಈಗ ಕಡಲ್ಕೊರೆತ ಬಹಳ ಹಚ್ಚಾಗಿದೆ ಕಡಲ್ಕೊರೆತ ಸಮಸ್ಯೆ ಆಗದಂತೆ ತೆಗೆದುಕೊಳ್ಳುತ್ತೇವೆ ಮೀನುಗಾರರ ಸಮಸ್ಯೆ ಬಗೆಹರಿಸಲು ಕ್ರಮ ವಹಿಸ್ತೇವೆ ಸುಮಾರು 300 ಕಿ.ಮೀ ದೂರ ಕಡಲ್ಕೊರೆತ ಇದೆ ಕಡಲ್ಕೊರೆತ ಗುರ್ತಿಸೋ ಕೆಲಸ ಆಗಿದೆ ಟೂರಿಸ್ಟ್ಗಳಿಗೆ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ
ಇಂದು ಮಂಡ್ಯದ ಕೆ.ಆರ್.ಪೇಟೆಗೆ ಸಿಎಂ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. 1,700 ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಕೆ.ಆರ್.ಪೇಟೆ ಪಟ್ಟಣ ಪುರಸಭೆಯ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಿಎಂ ಕಾರ್ಯಕ್ರಮಕ್ಕಾಗಿ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ.
ಜನಸಾಮಾನ್ಯರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಬಡವರಿಗೆ ನೆರವಾಗಲು, ಅಭಿವೃದ್ಧಿ ಉದ್ದೇಶದಿಂದ ಯಾವುದೇ ನಿರ್ಧಾರ ತೆಗೆದುಕೊಂಡರೂ ಸರ್ಕಾರ ನಿಮ್ಮ ರಕ್ಷಣೆಗೆ ನಿಲ್ಲುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಹನುಮನ ಜನ್ಮಸ್ಥಳ ಹಂಪಿ ಬಳಿ ಇರುವ ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿ ಪಡಿಸಲು ತೀರ್ಮಾನಿಸಿದೆ.
ಈ ಉದ್ದೇಶಕ್ಕಾಗಿ 100 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ.
ಜಿಲ್ಲೆಯಲ್ಲಿ ಕೊರೋನಾ ಸೋಂಕು ಪ್ರಕರಣಗಳು ನಿಯಂತ್ರಣಕ್ಕೆ ಬಂದಿತ್ತು. ಆದರೆ, ಪುನಃ ಸೋಂಕು ಕಾಣಿಸಿಕೊಂಡಿರುವುದು ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯದಿಂದ ಬಂದವರಿಂದ. ಹೀಗಾಗಿ ಅಂಥವರನ್ನು ಕ್ವಾರಂಟೇನ್ ಮಾಡಲಾಗಿದೆ.
ಸರ್ಕಾರ ನೂರು ದಿನ ಪೂರೈಸಿದೆ. ಎರಡು ತಿಂಗಳ ಕಾಲ ನೆರೆ ಪರಿಹಾರದ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಸರ್ಕಾರ ಅಧಿಕಾರಕ್ಕೆ ಬಂದ ಸಮಯದಲ್ಲಿ ರೈತರಿಗೆ ನಾಲ್ಕು ಸಾವಿರ ಹಣ ನೀಡುವುದಾಗಿ ಘೋಷಿಸಲಾಗಿತ್ತು. ಅದರಂತೆ ಈಗಾಗಲೇ ಎರೆಡು ಸಾವಿರ ಹಣ ರೈತರ ಖಾತೆಗೆ ಜಮೆ ಮಾಡಲಾಗಿದೆ- ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.