ಡಿಕೆಶಿವಕುಮಾರ್ ಅವರ ಸಹನೆ ಕಟ್ಟೆ ಯಾವಾಗ ಒಡೆಯುತ್ತದೆ ಅನ್ನುವುದು ಮುಖ್ಯವಾಗುತ್ತದೆ. ಅದರ ಪ್ರಕ್ರಿಯೆ ಆರಂಭವಾಗಿದ್ದು, ಕಾಲ ಯಾವಾಗ ಬರುತ್ತದೆ ಎಂದು ನೋಡಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಮುಂದಿನ 2025 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರನ್ನು ಹರಿಸಲು ಪ್ರಯತ್ನ ಮಾಡಲಾಗುವುದು.ಈಗಾಗಲೇ ಎತ್ತಿನಹೊಳೆ ನೀರನ್ನು ಮೇಲಕ್ಕೆ ಎತ್ತಿ ಸಂಗ್ರಹ ಮಾಡಲಾಗಿದ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಗಂಭೀರ ಪ್ರಕರಣಗಳು ಎದುರಾದಾಗ ನಮ್ಮ ಅಧಿಕಾರಿಗಳು ತನಿಖೆಗೆ ಸೂಕ್ತರಲ್ಲ ಎನ್ನುವ ಅಭಿಪ್ರಾಯ ಬಂದರೆ,ಆ ವೇಳೆ ಸಿಬಿಐಗೆ ನೀಡುವ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಕ್ವಿನ್ ಸಿಟಿ ಯೋಜನೆಯ ಮೂಲಕ ಸರ್ಕಾರ ಮತ್ತು ಸಂಪುಟ ಸಹೋದ್ಯೋಗಿಗಳು ಉದ್ಯಮಿಗಳ ಜೊತೆ ನಿಲ್ಲುತ್ತದೆ.ಎಲ್ಲರೂ ಒಟ್ಟಿಗೆ ಸೇರಿ ಉತ್ತಮ ಯೋಜನೆಯನ್ನು ಸಾಕಾರಗೊಳಿಸೋಣ" ಎಂದು ಡಿಕೆ ಶಿವಕುಮಾರ್ ತಿಳಿಸಿದರು.
ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಪ್ರಕರಣ. ಡಿಸಿಎಂ ಡಿಕೆಶಿಗೆ ಶುರುವಾಗುತ್ತಾ ಸಂಕಷ್ಟ..? ಸುಪ್ರೀಂ ಕೋರ್ಟ್ನಲ್ಲಿ ಇಂದು ಅರ್ಜಿ ವಿಚಾರಣೆ. ನ್ಯಾ.ಸೂರ್ಯ ಕಾಂತ್ ನೇತೃತ್ವದ ಪೀಠದಲ್ಲಿ ವಿಚಾರಣೆ. ಹೈಕೋರ್ಟ್ ಆದೇಶ ಪ್ರಶ್ನೆ ಮಾಡಿರುವ ಶಾಸಕ ಯತ್ನಾಳ್. ಈ ಪ್ರಕರಣದಲ್ಲಿ CBI ಇನ್ನೂ ಅರ್ಜಿ ಸಲ್ಲಿಕೆ ಮಾಡಿಲ್ಲ.
ಇಂದೂ ಕೂಡ ನಡೆಯಲಿದೆ ನಗರದ ದಕ್ಷಿಣ ವಲಯದಲ್ಲಿ ನಡೆಯಲಿರೋ ಗುಂಡಿ ಮುಚ್ಚುವ ಕಾರ್ಯ. ಬಿಟಿಎಂ ಲೇಔಟ್ ನ ಪೋಸ್ಟ್ ಆಫೀಸ್ ಬಳಿ ಗುಂಡಿ ಮುಚ್ಚು ಕಾರ್ಯಕ್ಕೆ ಚಾಲನೆ. ಉಪಮುಖ್ಯಮಂತ್ರಿಗಳ ಆದೇಶ ಹಾಗೂ ಮುಖ್ಯ ಆಯುಕ್ತರ ನಿರ್ದೇಶನದಂತೆ ಕಾರ್ಯ . ವಲಯ ಆಯುಕ್ತರ ನೇತೃತ್ವದಲ್ಲಿ ನಡೆಯಲಿರುವ ಕಾಮಗಾರಿ. ಸ್ಥಳದಲ್ಲಿ ಚೀಫ್ ಇಂಜಿನಿಯರ್ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತಿ. ಬೆಳಗ್ಗೆ 11.30ಕ್ಕೆ ಗುಂಡಿ ಮುಚ್ಚು ಕಾರ್ಯಕ್ಕೆ ಚಾಲನೆ .
Siddaramaiah Resign: ಸಿದ್ದರಾಮಯ್ಯ ಹೋಗೋದು ಫಿಕ್ಸ್ ಆಗಿದ್ದು, ಹೀಗಾಗಿ ಕಾಂಪಿಟೇಶನ್ ಶುರುವಾಗಿದೆ. ಒಂದು ಡಜನ್ ಗೆ ಹೆಚ್ಚು ಜನ ಆಕಾಂಕ್ಷಿಗಳಾಗಿದ್ದಾರೆ ಎಂದು ಮಾಜಿ ಸಚಿವ ಸಿಟಿ ರವಿ ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಂತರ ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಚರ್ಚೆ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿದೆ. ಇದಕ್ಕೆ ಉತ್ತರ ಕೂಡಾ ಪಕ್ಷದಲ್ಲಿಯೇ ಹರಿದಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.