ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ನಾಲ್ವರು ಆರೋಪಿಗಳನ್ನು ಇಂದು ಮುಂಜಾನೆ ಪೊಲೀಸರು ಎನ್ಕೌಂಟರ್ ಮಾಡಲಾಗಿದೆ. ಈ ಕುರಿತು ನವರಸನಾಯಕ ಜಗ್ಗೇಶ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದಾರೆ.
ಹೈದರಾಬಾದ್ನ ಮಹಿಳಾ ಪಶುವೈದ್ಯೆಯ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಪ್ರಮುಖ ನಾಲ್ವರು ಆರೋಪಿಗಳನ್ನು ಶುಕ್ರವಾರ ಬೆಳಗ್ಗೆ ಹೈದ್ರಾಬಾದ್ ಪೊಲೀಸರು ಎನ್ಕೌಂಟರ್ ನಡೆಸುವ ಮೂಲಕ ಹತ್ಯೆಗೈದಿದ್ದಾರೆ.
ಹೈದರಾಬಾದ್ನ ಹೊರವಲಯದಲ್ಲಿರುವ ಶಾದ್ನಗರದ ಬಳಿ ನವೆಂಬರ್ 27 ರ ರಾತ್ರಿ ಸಾಮೂಹಿಕ ಅತ್ಯಾಚಾರವೆಸಗಿ ಸಂತ್ರಸ್ತೆಗೆ ಬೆಂಕಿ ಹಚ್ಚಿದ್ದರು. ಇಂದು ಮುಂಜಾನೆ ಅದೇ ಸ್ಥಳದಲ್ಲಿ ಆರೋಪಿಗಳನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ಹಿಂದಿನ ಭಾನುವಾರ, ಭದ್ರತಾ ಪಡೆಗಳಿಗೆ ಬಂಡಿಪೋರಾದ ಲಾವ್ದರಾ ಪ್ರದೇಶದಲ್ಲಿ ಭಯೋತ್ಪಾದಕರನ್ನು ಅಡಗಿಸಿಟ್ಟಿರುವ ಬಗ್ಗೆ ಮಾಹಿತಿ ದೊರೆತಿದ್ದು, ಇದರ ಆಧಾರದ ಮೇಲೆ ಸೇನೆಯುಸಿಆರ್ಪಿಎಫ್ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ಕಾರ್ಯಾಚರಣೆ ನಡೆಸಿದ್ದು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ.
ಛತ್ತೀಸ್ ಗಡ್ ದ ರಾಜನಂದಗಾಂವ್ನ ಸೀತಗೋಟ ಕಾಡು ಪ್ರದೇಶದಲ್ಲಿ ಶನಿವಾರ ಜಿಲ್ಲಾ ಮೀಸಲು ಪಡೆಯೊಂದಿಗಿನ ಗುಂಡಿನ ಚಕಮಕಿಯಲ್ಲಿ ಮೂವರು ಮಹಿಳೆಯರು ಸೇರಿದಂತೆ ಕನಿಷ್ಠ ಏಳು ನಕ್ಸಲರು ಸಾವನ್ನಪ್ಪಿದ್ದಾರೆ. ದಾಳಿಯಲ್ಲಿ ಮೂವರು ಭದ್ರತಾ ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ನ ಗುಂಡ್ ಬ್ರಾತ್ ಪ್ರದೇಶದಲ್ಲಿ ಬುಧವಾರ ಬೆಳಿಗ್ಗೆಯಿಂದ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.
ನಕ್ಸಲರ ಮೃತದೇಹಗಳನ್ನು ಮತ್ತು 7 ಶಸ್ತ್ರಾಸ್ತ್ರಗಳನ್ನು ಅವರಿಂದ ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ರಾಜ್ಯದ ಉಪ ಇನ್ಸ್ಪೆಕ್ಟರ್ ಜನರಲ್ ಪಿ.ಸುಂದರ್ ರಾಜ್ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.