2024 ರ ಪದವೀಧರ ಬ್ಯಾಚ್ನ ಅಭ್ಯರ್ಥಿಗಳಿಗೆ ಸ್ವದೇಶಿ ಐಟಿ ಕ್ಷೇತ್ರದ ಪ್ರಮುಖ ಕಂಪೆನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಫ್ರೆಶರ್ಗಳ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಎಂಜಿನಿಯರಿಂಗ್ ಪದವೀಧರರಿಗೆ ಸಿಹಿಸುದ್ದಿಯನ್ನು ಟಿಸಿಎಸ್ ನೀಡಿದೆ.
ಕರ್ನಾಟಕದಲ್ಲಿ ಮತ್ತೊಂದು ವಂದೇ ಭಾರತ್ ರೈಲು ಸಂಚಾರ ಆರಂಭಿಸಿದ್ದು, ಬೆಂಗಳೂರು-ಕಲಬುರಗಿ ನಡುವಿನ ರೈಲು ಸಂಚಾರ ಮಾರ್ಚ್ 15ರಿಂದ ಆರಂಭವಾಗಿದೆ. ಈಗ ರೈಲಿನ ದರಪಟ್ಟಿ ಬಿಡುಗಡೆಯಾಗಿದೆ.
Engineering education in Kannada : ರಾಜ್ಯದಲ್ಲಿ ಕಳೆದ ವರ್ಷದಿಂದ ಎರಡು ಕಾಲೇಜುಗಳು ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್ ಶಿಕ್ಷಣವನ್ನು ನೀಡುತ್ತವೆ. ಎರಡು ಖಾಸಗಿ ಕಾಲೇಜುಗಳು ಈ ವರ್ಷವೂ ಸಹ ಮತ್ತೆ ಕನ್ನಡ ಮಾಧ್ಯಮದಲ್ಲಿ ಎಂಜಿನಿಯರಿಂಗ್ ಕೋರ್ಸ್ ನೀಡಲು ಆಸಕ್ತಿ ತೋರಿವೆ.
ರಾಜ್ಯದ ಎಲ್ಲ ಖಾಸಗಿ ವಿಶ್ವವಿದ್ಯಾಲಯಗಳು, ತಮ್ಮ ಮ್ಯಾನೇಜ್ಮೆಂಟ್ ಕೋಟಾದ ಎಂಜಿನಿಯರಿಂಗ್ ಸೀಟುಗಳ ಭರ್ತಿಗೆ ಸದ್ಯ ಪ್ರತ್ಯೇಕವಾದಂತಹ ಪ್ರವೇಶ ಪರೀಕ್ಷೆಗಳನ್ನು ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗಿದೆ. ಹೀಗಾಗಿ ಎಲ್ಲ ವಿ.ವಿಗಳೂ ಒಪ್ಪುವುದಾದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದಲೇ ರಾಷ್ಟ್ರ ಮಟ್ಟದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಸಲು ಸರ್ಕಾರ ಸಿದ್ಧ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಗುರುವಾರ ಇಲ್ಲಿ ತಿಳಿಸಿದರು.
ಹರ್ಷ ಮತ್ತು ಚೇತನ್ ಇಬ್ಬರೂ ಏರ್ಟೆಲ್ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದರು. ಸಿಮ್ ಖರೀದಿಸಲು ಬರುವರ ಬಳಿ ಒಂದಕ್ಕಿಂತಿ ಹೆಚ್ಚು ಫಾರ್ಮ್ ಗೆ ಸಹಿ ಮಾಡಿಸಿಕೊಳ್ತಿದ್ದರು.
Ukraine Crisis - ರಷ್ಯಾ (Russia) ಮತ್ತು ಉಕ್ರೇನ್ (Ukraine) ನಡುವಿನ ಸಂಘರ್ಷ ಮುಂದುವರಿದಿದೆ. ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭಾರತೀಯ ರಾಯಭಾರ ಕಚೇರಿಯು (Embassy Of India In Kyiv) ಅಲ್ಲಿನ ವಿದ್ಯಾರ್ಥಿಗಳಿಗೆ ಸ್ವಲ್ಪ ಸಮಯದವರೆಗೆ ಸ್ವದೇಶಕ್ಕೆ ಮರಳುವಂತೆ ಮನವಿ ಮಾಡಿದೆ.
ನೀಟ್ ಪರೀಕ್ಷೆಯಲ್ಲಿ (NEET Exam) ಆಗಿರುವ ವಿಳಂಬದಿಂದಾಗಿ, ಈಗಾಗಲೇ ಎಂಜಿನಿಯರಿಂಗ್ ಸೀಟು ಪಡೆದುಕೊಂಡು ಈಗ ವೈದ್ಯಕೀಯ ಕೋರ್ಸಿಗೆ (Medical) ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ವಿಧಿಸುತ್ತಿದ್ದ ದಂಡ ಶುಲ್ಕವನ್ನು ರದ್ದುಪಡಿಸಲಾಗಿದೆ.
ಹೊಸ ನಿಯಮದ ಪ್ರಕಾರ, ಬಿ.ಟೆಕ್ (BTech)ಪ್ರವೇಶಕ್ಕಾಗಿ, ವಿದ್ಯಾರ್ಥಿಗಳು 12 ನೇ ತರಗತಿಯಲ್ಲಿ ಕನಿಷ್ಠ 45 ಶೇಕಡಾ ಅಂಕಗಳನ್ನು ಪಡೆಯಬೇಕಾಗುತ್ತದೆ. ಇದರೊಂದಿಗೆ, 14 ವಿಷಯಗಳ ಪಟ್ಟಿಯಲ್ಲಿ ಯಾವುದೇ 3 ವಿಷಯಗಳಲ್ಲಿ ಉತ್ತೀರ್ಣರಾಗುವುದು ಅನಿವಾರ್ಯವಾಗಿರುತ್ತದೆ.
ಭಾರತದಾದ್ಯಂತ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಶೇಕಡಾ ಐವತ್ತಕ್ಕೂ ಹೆಚ್ಚು ಸೀಟುಗಳು ಖಾಲಿ ಇವೆ. 20ರಷ್ಟು ಮಾತ್ರ ಭರ್ತಿಯಾಗಿರುವ ಒಡಿಶಾ ಮೊದಲ ಸ್ಥಾನದಲ್ಲಿದ್ದರೆ, ಪಶ್ಚಿಮ ಬಂಗಾಳದಲ್ಲಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿ 40 ರಷ್ಟು ಮಾತ್ರ ಭರ್ತಿ ಮಾಡಲಿಕೊಳ್ಳಲಾಗಿದೆ. ಉಳಿದಿರುವ ಸೀಟುಗಳಿಗೆ ಯಾರು ಕೇಳುವವರೆ ಇಲ್ಲದಂತಾಗಿದೆ ಎಂದು ಹೇಳುತ್ತಿವೆ ಅಂಕಿ ಅಂಶಗಳು.
ರಾಜ್ಯಾದ್ಯಂತ ಒಟ್ಟು 430 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 1,98, 639 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ತೆಗೆದುಕೊಳ್ಳಲಿದ್ದು, 1,00,071 ಪುರುಷ ಮತ್ತು 98,568 ಮಹಿಳಾ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.