Karnataka Politics: ಈಶ್ವರಪ್ಪ ಬಿಜೆಪಿಯಲ್ಲಿ ಕುರುಬ ಸಮುದಾಯದ ಫೇಸ್ ಅನ್ನುವುದರ ಜೊತೆಗೆ ಕಟ್ಟಾ ಹಿಂದುತ್ವವಾದಿಯೂ ಹೌದು. ಇದೇ ಕಾರಣದಿಂದ ಈಶ್ವರಪ್ಪ ನೀಡುವ ಹೇಳಿಕೆ ಭಾರೀ ಸದ್ದು ಮಾಡುತ್ತದೆ.
former minister KS Eshwarappa: ಶಿವಮೊಗ್ಗ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಮೊಹಮ್ಮದ್ ಶಫಿ ಎಂಬವರ ಫೇಸ್ಬುಕ್ನಲ್ಲಿ, ಈ ವಿಡಿಯೋ ಮೊದಲು ಪ್ರಕಟವಾಗಿದ್ದು, ಆನಂತರ ಸೋಶಿಯಲ್ ಮೀಡಿಯಾಗಳಲ್ಲಿ ಪರ-ವಿರೋಧ ಚರ್ಚೆಗಳೊಂದಿಗೆ ಹಂಚಿಕೆಯಾಗುತ್ತಿದೆ.
ಸಿದ್ದು, ಡಿಕೆಶಿ ಇಬ್ಬರ ಕೈಯಲ್ಲೂ ಚೂರಿ ಇದೆ. ಇಬ್ಬರು ಕೂಡಾ ಚುಚ್ಚೋಕೆ ಕಾಯ್ತಾ ಇದ್ದಾರೆ. ರಾಹುಲ್ ಬಲವಂತದಿಂದ ಅಪ್ಪಿಕೊಂಡರು ಅಷ್ಟೇ ಎಂದು ಕಾಂಗ್ರೆಸ್ ನಾಯಕರ ಬಗ್ಗೆ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.
ಸತ್ರೂ ಬಿಜೆಪಿ ಸೇರಲ್ಲ ಎಂಬ ಸಿದ್ದು ಹೇಳಿಕೆ ವಿಚಾರ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ.. ಸಿದ್ದರಾಮಯ್ಯ ಜೀವಂತ ಇದ್ದಾಗಲೇ BJP ಸೇರಿಸೋದಿಲ್ಲ. ಅವರ ಹೆಣ ತಗೊಂಡು ಏನು ಮಾಡೋದು ಹೇಳಿ..? ಅವರ ಹೆಣ ನಾಯಿ ಕೂಡ ಮೂಸಲ್ಲ ಅಂತಾ ಈಶ್ವರಪ್ಪ ಹೇಳಿದ್ದಾರೆ..
ರಾಜ್ಯದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ. ಅಧಿವೇಶನಕ್ಕೆ ಗೈರಾಗಿ ಬೆಂಗಳೂರಿಗೆ ಹಾರಿದ ಸಚಿವಾಕಾಂಕ್ಷಿಗಳು. ಪೂರ್ವ ಮಾತುಕತೆ ಮಾಡಿಯೇ ಅಧಿವೇಶನಕ್ಕೆ ಅತೃಪ್ತರ ಗೈರು. ನಿನ್ನೆ ಒಂದೇ ವಿಮಾನದಲ್ಲಿ ಬೆಳಗಾವಿಯಿಂದ ಬೆಂಗಳೂರಿಗೆ ಆಗಮನ. ಮಾಜಿ ಸಚಿವರಾದ ರಮೇಶ್ ಜಾರಕಿಹೋಳಿ, ಈಶ್ವರಪ್ಪ ಪ್ರಯಾಣ. ಸಚಿವ ಸ್ಥಾನ ಸಿಗದೇ ತೀವ್ರ ಅಸಮಾಧಾನಗೊಂಡಿರುವ ನಾಯಕರು.
ಚಳಿಗಾಲ ಅಧಿವೇಶನಕ್ಕೂ ಮುನ್ನವೇ ಸಚಿವ ಸಂಪುಟ ವಿಸ್ತರಣೆ ಆಗೋ ಸಾಧ್ಯತೆ ಇದೆ. ಖಾಲಿ ಇರುವ 5 ಸ್ಥಾನಗಳ ಬದಲಿಗೆ 2 ಸ್ಥಾನ ತುಂಬಲು ಚಿಂತನೆ ನಡೆಸಲಾಗಿದೆ. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಮತ್ತೆ ಸಂಪುಟ ಸೇರ್ಪಡೆ ಆಗೋ ಸಾಧ್ಯತೆ ಇದೆ ಎನ್ನಲಾಗ್ತಿದೆ.
ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ತನಿಖೆ ನಡೆಸಿ ಉಡುಪಿ ಪೊಲೀಸರು ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಂತೋಷ್ ಕುಟುಂಬಸ್ಥರು ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಈಶ್ವರಪ್ಪನವರನ್ನು ಆಹ್ವಾನಿಸದೇ ಕೇವಲ ಸಿದ್ದರಾಮಯ್ಯರನ್ನು ಆಹ್ವಾನಿಸಿರುವುದೇ ಈ ಗಲಾಟೆಗೆ ಕಾರಣ ಎನ್ನಲಾಗಿದೆ. ಈಶ್ವರಪ್ಪನವರನ್ನು ಆಹ್ವಾನಿಸದೇ, ಇದ್ದ ಕಾರಣ ಈಶ್ವರಪ್ಪ ಬಣ ಆಕ್ಷೇಪ ವ್ಯಕ್ತಪಡಿಸಿದೆ.
ಮಾಜಿ ಸಚಿವ ಈಶ್ವರಪ್ಪ ರಾಜೀನಾಮೆ ನೀಡುವ ಮುನ್ನ ಅನೇಕ ಟೆಂಡರ್ಗಳಿಗೆ ಮಂಜೂರಾತಿ ನೀಡುವ ಮೂಲಕ 40% ಕಮಿಷನ್ ಪಡೆದಿದ್ದಾರೆ. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ತರಾತುರಿಯಲ್ಲಿ 5,500 ಕೋಟಿ ಟೆಂಡರ್ಗಳಿಗೆ 8 ದಿನಗಳಲ್ಲಿ ಮಂಜೂರಾತಿ ನೀಡಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಆಲಂ ಪಾಷಾ ಆರೋಪಿಸಿದರು.
ಕಮಿಷನ್ ವಿಚಾರವಾಗಿ ಈಶ್ವರಪ್ಪ ರಾಜೀನಾಮೆ ಘೋಷಿಸಿದ್ದು, ಇದೊಂದೇ ವಿಕೆಟ್ ಅಲ್ಲ, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿದ್ರೆ ಸರ್ಕಾರದ ಅರ್ಧ ಕ್ಯಾಬಿನೆಟ್ ಖಾಲಿಯಾಗುತ್ತದೆ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಮಾಜಿ ಮಿನಿಸ್ಟರ್ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ಶಿವಮೊಗ್ಗದ ಈಶ್ವರಪ್ಪ ನಿವಾಸಕ್ಕೆ ಸ್ವಾಮೀಜಿಗಳು ಭೇಟಿ ನೀಡಿದ್ದಾರೆ. ಕಾಗಿನೆಲೆ ಸೇರಿದಂತೆ ಹದಿನೈದಕ್ಕೂ ಹೆಚ್ಚು ಸ್ವಾಮೀಗಳು ಭೇಟಿ ನೀಡಿದ್ದು, ಈಶ್ವರಪ್ಪ ಜೊತೆ ಚರ್ಚೆ ನಡೆಸಿದ್ದಾರೆ.
ಸಂತೋಷ್ ಪಾಟೀಲ್ ಎಂಬ ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮ ಹೇಳಿಕೆ ನೀಡಿರುವ ಅವರು, ಗುತ್ತಿಗೆದಾರ ಹಾಗೂ ಬಿಜೆಪಿ ಕಾರ್ಯಕರ್ತನೊಬ್ಬ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರಿಗೆ ಕಮೀಷನ್ ನೀಡಿ ರಸ್ತೆ ಕಾಮಗಾರಿಯನ್ನು ಗುತ್ತಿಗೆ ಪಡೆದಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.