RBI Provides 2 Lakh Loan To Farmers: ಭಾರತೀಯ ರಿಸರ್ವ್ ಬ್ಯಾಂಕ್ (RBI) ಮುಂದಿನ ವರ್ಷ ಜನವರಿ 1ರಿಂದ ರೈತರಿಗೆ 2 ಲಕ್ಷ ರೂ.ವರೆಗೆ ಮೇಲಾಧಾರ ರಹಿತ ಸಾಲ ನೀಡುವ ನಿರ್ಧಾರವನ್ನು ಜಾರಿಗೆ ತರಲು ನಿರ್ಧರಿಸಿದೆ.
ರೈತರನ್ನು ಆರ್ಥಿಕವಾಗಿ ಬಲಿಷ್ಠರನ್ನಾಗಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವು ವಿಶೇಷ ಸೌಲಭ್ಯಗಳನ್ನು ನೀಡುತ್ತಿವೆ. ನೀವೂ ಸಹ ರೈತರಾಗಿದ್ದರೆ ನಿಮಗೊಂದು ಸಂತಸದ ಸುದ್ದಿ. ಸಾಗುವಳಿ ಮಾಡುವ ರೈತರ ಆದಾಯವನ್ನು ಹೆಚ್ಚಿಸಲು ಸರ್ಕಾರ ಅನೇಕ ವಿಶೇಷ ಪ್ರಯತ್ನಗಳನ್ನು ಮಾಡುತ್ತಿದೆ. ಈ ಮಧ್ಯೆ, ಉತ್ತರ ಪ್ರದೇಶ ಸರ್ಕಾರವು ರೈತರ ಸಾಲ ಮನ್ನಾ ಯೋಜನೆಯಡಿ ಫಲಾನುಭವಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪಶು ಕಿಸಾನ್ ಕ್ರೆಡಿಟ್ ಕಾರ್ಡ್ ಮೋದಿ ಸರ್ಕಾರದ ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯನ್ನು ಹೋಲುತ್ತದೆ. ಇದರಲ್ಲಿ ಹಸು, ಎಮ್ಮೆ, ಕುರಿ, ಮೇಕೆ, ಕೋಳಿ ಸಾಕಣೆಗೆ ಗರಿಷ್ಠ 3 ಲಕ್ಷ ರೂ. ನೀಡಲಾಗುತ್ತದೆ.
ಸುಗ್ಗಿ ಹಬ್ಬಕ್ಕೆ ರೈತರಿಗೆ ಉಡುಗೊರೆ ನೀಡಿದ್ದ ರಾಜ್ಯ ಸರ್ಕಾರ, ಜನವರಿ 11 ರವರೆಗೆ ವಾಣಿಜ್ಯ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕುಗಳಲ್ಲಿ 1.1 ಲಕ್ಷ ಸಹಕಾರಿ ಬ್ಯಾಂಕುಗಳ ಸಾಲಖಾತೆಗಳಿಗೆ 616 ಕೋಟಿ ರೂ. ಹಾಗೂ ವಾಣಿಜ್ಯ ಬ್ಯಾಂಕುಗಳಲ್ಲಿ 58 ಸಾವಿರ ಸಾಲಖಾತೆಗಳಿಗೆ 260 ಕೋಟಿ ರೂ. ರೈತರ ಬೆಳೆಸಾಲ ಮನ್ನಾ ಮೊತ್ತ ಬಿಡುಗಡೆ ಮಾಡಿತ್ತು.
ಸುಸ್ತಿ ಸಾಲ, ಪುನರಾವರ್ತಿ ಸಾಲ, ಅನುತ್ಪಾದಕ ಆಸ್ತಿ ಸಾಲಗಳನ್ನು ಒಳಗೊಂಡಂತೆ 2009 ರ ಏಪ್ರಿಲ್ 1 ರಿಂದ 2017 ರ ಡಿಸೆಂಬರ್ 31 ರವರೆಗೆ ವಾಣಿಜ್ಯ ಬ್ಯಾಂಕ್ಗಳಲ್ಲಿ ಬಾಕಿ ಇರುವ ರೈತರ ಬೆಳೆ ಸಾಲಗಳ ನೋಂದಣಿ ಪ್ರಕ್ರಿಯೆಗೆ ಇದೀಗ ಚಾಲನೆ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.