PM Matru Vandana Yojana: ಪ್ರಧಾನಿ ನರೇಂದ್ರ ಮೋದಿಯವರ ಆಡಳಿತದ ಕೇಂದ್ರ ಸರ್ಕಾರ ದೇಶದ ಜನರಿಗಾಗಿ ಹಲವಾರು ಯೋಜನೆಗಳನ್ನು ತರುತ್ತಿದೆ, ಇಲ್ಲಿಯವರೆಗೂ ದೇಶದಲ್ಲಿ 510 ಕ್ಕೂ ಹೆಚ್ಚು ಯೋಜನೆಗಳು ಜಾರಿಯಲ್ಲಿವೆ ಎಂದೆ ಹೇಳಬಹುದು.
D K Shivakumar : ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುವ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಅಂಕಿತಾಗೆ ₹ 5 ಲಕ್ಷ ಮತ್ತು ಮೂರನೇ ಸ್ಥಾನ ಗಳಿಸಿರುವ ಮಂಡ್ಯದ ನವನೀತ್ಗೆ ₹ 2 ಲಕ್ಷ ಪ್ರೋತ್ಸಾಹಧನ ನೀಡಿ ಉಪ ಮುಖ್ಯಮಂತ್ರಿ ನೀಡಿ ಗೌರವಿಸಿದರು.
ಕೌಶಲರಹಿತ ಕಾರ್ಮಿಕರಿಗೆ ನೀಡುವ ಮಾಸಿಕ ವೇತನವನ್ನು 11,450 ರೂ.ಗೆ, ಅರೆಕೌಶಲ ಕಾರ್ಮಿಕರಿಗೆ 12,446 ರೂ. ಹಾಗೂ ಕೃಷಿ ಕಾರ್ಮಿಕರಿಗೆ 9,160 ರೂ.ಗೆ ಏರಿಕೆ ಮಾಡಲಾಗಿದೆ ಎಂದು ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್ ತಿಳಿಸಿದ್ದಾರೆ.
PM-KISAN Yojana Financial Assistance: 2024ರ ಕೇಂದ್ರ ಬಜೆಟ್ನಲ್ಲಿ ನಿರೀಕ್ಷಿತ 3 ಪ್ರಮುಖ ಸಾಮಾಜಿಕ ವಲಯದ ಘೋಷಣೆಗಳ ಪೈಕಿ ರೈತರಿಗೆ ಪಿಎಂ ಕಿಸಾನ್ ಯೋಜನೆಯ ಮೊತ್ತದ ಹೆಚ್ಚಳವು ಒಂದು ಎಂದು ಅರ್ಥಶಾಸ್ತ್ರಜ್ಞರು ಹೇಳಿದ್ದಾರೆ.
ದೇಶದ ಹಲವು ರಾಜ್ಯಗಳಲ್ಲಿ ಹಾವು ಕಡಿತದಿಂದ ಮೃತಪಟ್ಟ ನಂತರ ಸಂತ್ರಸ್ತ ಕುಟುಂಬಕ್ಕೆ ಪರಿಹಾರ ನೀಡಲಾಗುತ್ತದೆ. ಮೃತರ ಕುಟುಂಬ ಸದಸ್ಯರಿಗೆ ಆದಷ್ಟು ಬೇಗ ಆರ್ಥಿಕ ನೆರವು ನೀಡುವ ಮೂಲಕ ಅವರ ದುಃಖದ ಸಮಯದಲ್ಲಿ ಸಹಾಯ ಮಾಡುವುದು ಈ ಯೋಜನೆಯ ಉದ್ದೇಶವಾಗಿದೆ. ಇದರಿಂದ ಮೃತರ ಕುಟುಂಬವು ಅಪಘಾತದಿಂದ ಚೇತರಿಸಿಕೊಳ್ಳಲು ಆರ್ಥಿಕ ಸಹಾಯವನ್ನು ಪಡೆಯುತ್ತದೆ.
ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಮಂಗಳವಾರ ಹೊಸ ಹಣಕಾಸು ಯೋಜನೆಯನ್ನು ಹೊರತಂದಿದೆ, ಇದರ ಅಡಿಯಲ್ಲಿ ರಾಜ್ಯದ ಒಂದು ಕೋಟಿಗೂ ಹೆಚ್ಚು ರೈತರಿಗೆ ವಾರ್ಷಿಕವಾಗಿ ರಾಜ್ಯ ಸರ್ಕಾರದಿಂದ 6,000 ರೂ ಹಾಗೂ ಕೇಂದ್ರ ಸರ್ಕಾರದಿಂದ 6,000 ರೂ ಒಟ್ಟು ವರ್ಷಕ್ಕೆ 12,000 ರೂ ಸಿಗಲಿದೆ.ಮುಖ್ಯಮಂತ್ರಿ ಏಕನಾಥ್ ಶಿಂಧೆ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಮೋ ಶೆಟ್ಕರಿ ಮಹಾಸನ್ಮಾನ್ ಯೋಜನೆಗೆ ಅನುಮೋದನೆ ನೀಡಲಾಯಿತು.
ಆಸ್ಪತ್ರೆಯು ಕಳೆದ 45 ವರ್ಷಗಳಿಂದ ಸುಮಾರು 10ಕ್ಕಿಂತಲೂ ಹೆಚ್ಚು ಜಿಲ್ಲೆಗಳ ಬಡರೋಗಿಗಳ ಆಶಾಕಿರಣವಾಗಿದೆ. ಆಯುಷ್ಮಾನ್ ಭಾರತ, ಆರೋಗ್ಯ ಕರ್ನಾಟಕ, ಇಎಸ್ಐ, ರೇಲ್ವೆ, ಇಸಿಎಚ್ಎಸ್ ಯೋಜನೆಯಡಿ ಪ್ರತಿ ತಿಂಗಳು ಸುಮಾರು 200 ಕ್ಕೂ ಹೆಚ್ಚು ಬಡ ರೋಗಿಗಳು ಹಾಗೂ ವರ್ಷಕ್ಕೆ 2,000 ಬಡರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.
ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಬೀಡಿ, ಗಣಿ ಹಾಗೂ ಸಿನೆಮಾ ಕಾರ್ಮಿಕರ ಮಕ್ಕಳಿಗೆ 2022-23 ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳಿಗೆ ಆರ್ಥಿಕ ನೆರವಿಗೆ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಡಿ ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಮತ್ತು 3ಬಿ ಗೆ ಸೇರಿದ ಅರ್ಹ ಫಲಾನುಭವಿಗಳಿಂದ ಸ್ವಯಂ ಉದ್ಯೋಗ ಸಾಲ ಯೋಜನೆಯಡಿಯಲ್ಲಿ ಅರ್ಜಿ ಆಹ್ವಾನಿಸಲಾಗಿದೆ.
ಮೇರಾ ಪಾನಿ ಮೇರಿ ವಿರಾಸತ್ ಯೋಜನೆ: ಹರಿಯಾಣ ಸರ್ಕಾರವು ತನ್ನ ರಾಜ್ಯದ ರೈತರಿಗೆ 7000 ರೂ.ಗಳ ಆರ್ಥಿಕ ನೆರವು ನೀಡುತ್ತದೆ. ‘ಮೇರಾ ಪಾನಿ ಮೇರಿ ವಿರಾಸತ್ ಯೋಜನೆ’ ಅಡಿ ಈ ಸಹಾಯಧನ ನೀಡಲಾಗುತ್ತಿದೆ.
Delhi Govt Financial Assistance: ದೆಹಲಿ ಸರ್ಕಾರದ ವತಿಯಿಂದ ಅಫಿಡವಿಟ್ ಪ್ರಕಾರ ನೋಂದಾಯಿತ ನಿರ್ಮಾಣ ಕಾರ್ಮಿಕರಿಗೆ 5000 ರೂ.ಗಳ ಆರ್ಥಿಕ ನೆರವು ನೀಡಲಾಗುವುದು. ಅದೇ ಸಮಯದಲ್ಲಿ, ವಲಸೆ ಕಾರ್ಮಿಕರನ್ನು ಗುರುತಿಸಲು ಮತ್ತು ಸಹಾಯ ಮಾಡಲು ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿದುಬಂದಿದೆ.
2020-21ನೇ ಸಾಲಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ವತಿಯಿಂದ 18 ವರ್ಷದಿಂದ 55 ವರ್ಷದೊಳಗೆ ವಯೋಮಿತಿ ಇರುವ ನಿರುದ್ಯೋಗಿ ಮಹಿಳೆಯರಿಗೆ ಸ್ವ ಉದ್ಯೋಗಕ್ಕಾಗಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು : ಭಾರತ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಬೀಡಿ, ಸುಣ್ಣದ ಕಲ್ಲು, ಡೊಲೊಮೈಟ್, ಕಬ್ಬಿಣ, ಕ್ರೋಮ್, ಮ್ಯಾಂಗನೀಸ್ ಅದಿರಿನ ಗಣಿಗಳು ಹಾಗೂ ಚಲನಚಿತ್ರ ಕ್ಷೇತ್ರದಲ್ಲಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳಿಗೆ 2020-21 ನೇ ಸಾಲಿನ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡಲು ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಿದೆ.
1 ನೇ ತರಗತಿಯಿಂದ ಪದವಿ, ಸ್ನಾತಕೋತ್ತರ ಪದವಿ ವರೆಗಿನ ವಿದ್ಯಾಥಿಗಳು, ವೃತ್ತಿಪರ ಮತ್ತು ಸಾಮಾನ್ಯ ಶಿಕ್ಷಣ ಕೊರ್ಸುಗಳನ್ನು ಪಡೆಯುತ್ತಿರುವವರು ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್ನಲ್ಲಿ https://schoolarships.gov.in ಆನ್ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದು.
ಕೊರೋನಾ ವೈರಸ್ ಲಾಕ್ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಠದಲ್ಲಿರುವ ಕೈಮಗ್ಗ ನೇಕಾರರಿಗೆ ನೇಕಾರರ ಸಮ್ಮಾನ ಯೋಜನೆಯಡಿ ರಾಜ್ಯ ಸರ್ಕಾರವು ವಾರ್ಷಿಕವಾಗಿ 2,000 ರೂ. ಗಳ ಆರ್ಥಿಕ ನೆರವು ನೀಡುತ್ತಿದೆ.ಇದಕ್ಕಾಗಿ ಅರ್ಹ ಕೈಮಗ್ಗ ನೇಕಾರರಿಂದ ಅರ್ಜಿ ಸಲ್ಲಿಕೆ ಅವಧಿಯನ್ನು 2020ರ ಜುಲೈ 30 ರವರೆಗೆ ವಿಸ್ತರಿಸಲಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.