ಮಲಗುವ ಮುನ್ನ ಬೆಳ್ಳುಳ್ಳಿ ನೀರು ಕುಡಿಯುವುದರಿಂದ ವಿಶ್ರಾಂತಿ ಪಡೆಯಲು, ಉತ್ತಮವಾಗಿ ನಿದ್ರೆ ಮಾಡಲು ಮತ್ತು ನಿಮ್ಮ ಒಟ್ಟಾರೆ ಆರೋಗ್ಯವನ್ನು ಸುಧಾರಿಸಲು ಸಹಾಯ ಮಾಡುತ್ತದೆ. ಬೆಳ್ಳುಳ್ಳಿಯಲ್ಲಿ ಸಲ್ಫರ್ ಸಂಯುಕ್ತಗಳು ಮತ್ತು ಸತುವು ಇದ್ದು, ಇದು ನಿಮಗೆ ವೇಗವಾಗಿ ನಿದ್ರಿಸಲು ಸಹಾಯ ಮಾಡುತ್ತದೆ. ಇದು ಉರಿಯೂತ ನಿವಾರಕ, ಉತ್ಕರ್ಷಣ ನಿರೋಧಕ ಮತ್ತು ನಿರ್ವಿಶೀಕರಣ ಗುಣಗಳನ್ನು ಸಹ ಹೊಂದಿದೆ.
Garlic water: ಬೆಳ್ಳುಳ್ಳಿ ನೀರನ್ನು ಸೇವಿಸುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ ಎಂದು ತಜ್ಞರು ಹೇಳುತ್ತಾರೆ. ಮಧುಮೇಹ ಸಮಸ್ಯೆಯಿಂದ ಬಳಲುತ್ತಿರುವವರು ಇದನ್ನು ಕುಡಿಯುವುದರಿಂದ ಉತ್ತಮ ಫಲಿತಾಂಶ ದೊರೆಯುತ್ತದೆ ಎಂದು ಹೇಳಲಾಗುತ್ತದೆ. ಹಾಗಾದರೆ ಈ ರಸವನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಆಗುವ ಪ್ರಯೋಜನಗಳೇನು..? ತಿಳಿಯಲು ಮುಂದೆ ಓದಿ...
Benefits of Garlic Water: ಬೆಳ್ಳುಳ್ಳಿ ಅತ್ಯಂತ ಶಕ್ತಿಶಾಲಿ ಔಷಧೀಯ ಆಹಾರ ಪದಾರ್ಥವಾಗಿದೆ.. ಇದು ಆಹಾರದ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ ಅನೇಕ ರೋಗಗಳನ್ನು ಗುಣಪಡಿಸುತ್ತದೆ..
ಬೆಳ್ಳುಳ್ಳಿ ಆಂಟಿವೈರಲ್, ಆಂಟಿಫಂಗಲ್ ಮತ್ತು ಆಂಟಿಆಕ್ಸಿಡೆಂಟ್ ಗುಣಗಳನ್ನು ಹೊಂದಿದೆ. ಇಷ್ಟು ಮಾತ್ರವಲ್ಲದೆ ಬೆಳ್ಳುಳ್ಳಿಯಲ್ಲಿ ವಿಟಮಿನ್ ಬಿ1, ಬಿ6 ಮತ್ತು ವಿಟಮಿನ್ ಸಿ ಜೊತೆಗೆ ಮ್ಯಾಂಗನೀಸ್, ಕ್ಯಾಲ್ಸಿಯಂ ಮತ್ತು ಕಬ್ಬಿಣಾಂಶಗಳು ಹೇರಳವಾಗಿ ಕಂಡುಬರುತ್ತವೆ. ಬೆಳ್ಳುಳ್ಳಿಯಲ್ಲಿರುವ ಎಲ್ಲಾ ಪೋಷಕಾಂಶಗಳು ನಮ್ಮ ದೇಹಕ್ಕೆ ಬಹಳ ಮುಖ್ಯ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.