ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ 20 ವರ್ಷದ ದಲಿತ ಮಹಿಳೆಯ ಮೇಲೆ ನಡೆದ ಮೇಲ್ಜಾತಿ ವ್ಯಕ್ತಿಗಳಿಂದ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐ ತನಿಖೆ ನಡೆಸಲಿದೆ.
ಉತ್ತರ ಪ್ರದೇಶ ಮತ್ತು ಕೇಂದ್ರದ ಬಿಜೆಪಿ ನಾಯಕರ ದಲಿತ ವಿರೋಧಿ, ಬಡಬರ ವಿರೋಧಿ ನಿಲುವನ್ನು ಖಂಡಿಸಿ ಅಕ್ಟೋಬರ್ 5ರಂದು ದೇಶಾದ್ಯಂತ ಮಹಾತ್ಮ ಗಾಂಧಿ ಮತ್ತು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಧರಣಿ ನಡೆಸುವಂತೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC)ಯ ಸಂಘಟನಾ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಎಲ್ಲಾ ರಾಜ್ಯ ಘಟಕಗಳಿಗೂ ಪತ್ರ ಬರೆದಿದ್ದಾರೆ.
ಹತ್ರಾಸ್ನಲ್ಲಿ ದಲಿತ ಮಹಿಳೆ ಮೇಲೆ ಮೇಲ್ಜಾತಿ ಠಾಕೂರ್ ಸಮುದಾಯಕ್ಕೆ ಸೇರಿದ ಯುವಕರಿಂದ ನಡೆದ ಸಾಮೂಹಿಕ ಅತ್ಯಾಚಾರದ ನಂತರ, ಬಾಲಿಯಾ ಮೂಲದ ಬಿಜೆಪಿ ಶಾಸಕ ಬಾಲಕಿಯರಿಗೆ 'ಸಂಸ್ಕಾರ' ಕಲಿಸಿದರೆ ಅತ್ಯಾಚಾರಗಳನ್ನು ನಿಲ್ಲಿಸಬಹುದು ಎಂದು ಹೇಳಿದ್ದಾರೆ.
ಹತ್ರಾಸ್ ಮೂಲದ 20 ವರ್ಷದ ದಲಿತ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಠಾಕೂರ್ ಸಮುದಾಯದ ಆರೋಪಿಗಳಿಗೆ ನ್ಯಾಯ ಒದಗಿಸಬೇಕು ಎಂದು ಸಭೆ ನಡೆಸಲಾಗಿದೆ.ವಿಧಿವಿಜ್ಞಾನ ವಿಜ್ಞಾನ ಪ್ರಯೋಗಾಲಯದ ಪೋಸ್ಟ್ಮಾರ್ಟಂ ವರದಿಯಯು ಈ ದಲಿತ ಮಹಿಳೆ ಅತ್ಯಾಚಾರಕ್ಕೊಳಗಾಗಲಿಲ್ಲ ಎಂದು ಹೇಳಿದ ನಂತರ ಈ ಬೇಡಿಕೆ ಬಂದಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಹತ್ರಾಸ್ ಗೆ ತೆರಳಿ ಸಂತ್ರಸ್ಥ ದಲಿತ ಮಹಿಳೆ ಕುಟುಂಬಕ್ಕೆ ನೀಡಿ ಸಾಂತ್ವಾನ ಹೇಳಿದರು.ಇದಕ್ಕೂ ಮೊದಲು ಅವರಿಗೆ ಹತ್ರಾಸ್ ಗೆ ಭೇಟಿ ನೀಡಲು ನಿರಾಕರಿಸಲಾಗಿತ್ತು.
ದೆಹಲಿ-ನೋಯ್ಡಾ ಡಿಎನ್ಡಿ ಫ್ಲೈಓವರ್ನ ಟೋಲ್ ಪ್ಲಾಜಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಉತ್ತರ ಪ್ರದೇಶದ ಪೊಲೀಸರು ನಡುವೆ ನಡೆದ ಘರ್ಷಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶನಿವಾರ ಮಧ್ಯಾಹ್ನ ರಕ್ಷಕಿ ಪಾತ್ರವನ್ನು ನಿರ್ವಹಿಸಿದ್ದಾರೆ.
ಉತ್ತರ ಪ್ರದೇಶದ ಹತ್ರಾಸ್ನಲ್ಲಿ 20 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿರುದ್ಧ ರಾಷ್ಟ್ರವ್ಯಾಪಿ ಆಕ್ರೋಶದ ಮಧ್ಯೆ, ಬಿಹಾರದ ಗಯಾ ಜಿಲ್ಲೆಯ ದಲಿತ ಬಾಲಕಿಯೊಬ್ಬಳ ಮೇಲೆ ನಾಲ್ವರು ಸಾಮೂಹಿಕ ಅತ್ಯಾಚಾರ ಎಸಗಿದ ನಂತರ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೇಲ್ಜಾತಿಯ ಠಾಕೂರ್ ಸಮುದಾಯದ ವ್ಯಕ್ತಿಗಳಿಂದ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ 20 ವರ್ಷದ ದಲಿತ ಮಹಿಳೆ ಮನೀಷಾ ವಾಲ್ಮೀಕಿಯ ಪ್ರಕರಣ ಈಗ ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿದೆ.
ಬಿಜೆಪಿಯ ಹಿರಿಯ ಮುಖಂಡ ಉಮಾ ಭಾರತಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ರಾಜಕಾರಣಿಗಳು ಮತ್ತು ಮಾಧ್ಯಮ ಸಿಬ್ಬಂದಿಗಳು ಹತ್ರಾಸ್ನಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾಗಿ ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ದಲಿತ ಮಹಿಳೆಯರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಅವಕಾಶ ನೀಡಬೇಕೆಂದು ಒತ್ತಾಯಿಸಿದರು.
ಅಪನಂಬಿಕೆಯ ವಾತಾವರಣವನ್ನು ಸೃಷ್ಟಿಸಲು ಭಯ, ಭಾವನೆಗಳು ಮತ್ತು ವದಂತಿಗಳನ್ನು ಹುಟ್ಟುಹಾಕುವ ಮೂಲಕ ಅವರನ್ನು ದಾರಿ ತಪ್ಪಿಸುವ ಏಕೀಕೃತ ಪ್ರಯತ್ನಗಳ ವಿರುದ್ಧ ಬಿಹಾರದ ಜನರು ಹೆಚ್ಚಿನ ಜಾಗರೂಕರಾಗಿರಿ ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ ಮನವಿ ಮಾಡಿದ್ದಾರೆ.
ಭೀಮ್ ಆರ್ಮಿಯ ಮುಖ್ಯಸ್ಥ ಚಂದ್ರಶೇಖರ್ ಆಜಾದ್ ಅವರು 20 ವರ್ಷದ ದಲಿತ ಮಹಿಳೆಯ ಮೇಲೆ ಮೇಲ್ಜಾತಿಯ ಠಾಕೂರ್ ಸಮುದಾಯದ ವ್ಯಕ್ತಿಗಳು ಎಸೆಗಿದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರ ಉತ್ತರವನ್ನು ಕೋರಿದ್ದಾರೆ.
ಹತ್ರಾಸ್ನಲ್ಲಿ ನಡೆದ 20 ವರ್ಷದ ಮನೀಷಾ ವಾಲ್ಮೀಕಿ ಎನ್ನುವ ದಲಿತ ಮಹಿಳೆಯ ಮೇಲೆ ಮೇಲ್ಜಾತಿಯ ಠಾಕೂರ್ ಸಮುದಾಯದ ವ್ಯಕ್ತಿಗಳು ಎಸೆಗಿದ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿಚಾರವಾಗಿ ತೀವ್ರ ಪ್ರತಿಭಟನೆ ಎದುರಿಸುತ್ತಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಟ್ವೀಟ್ ಮಾಡಿದ್ದು, ತಮ್ಮ ಸರ್ಕಾರ "ಎಲ್ಲಾ ಸಹೋದರಿಯರು "ತಾಯಂದಿರ ಸುರಕ್ಷತೆ, ಸುರಕ್ಷತೆ ಮತ್ತು ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಹೇಳಿದರು.
ಉತ್ತರಪ್ರದೇಶದ ಪೊಲೀಸರು ಕಾಂಗ್ರೆಸ್ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು 201 ಪಕ್ಷದ ಮುಖಂಡರ ವಿರುದ್ಧ ಉತ್ತರ ಪ್ರದೇಶ ಪೊಲೀಸರು ದಲಿತ ಅತ್ಯಾಚಾರ ಸಂತ್ರಸ್ತೆಯ ಕುಟುಂಬವನ್ನು ಭೇಟಿಯಾಗಲು ಹತ್ರಾಸ್ ಕಡೆಗೆ ಪಯಾಣ ಬೆಳೆಸಿದ ಹಿನ್ನಲೆಯಲ್ಲಿ ನಿಷೇಧಾಜ್ಞೆ ಉಲ್ಲಂಘನೆಗಾಗಿ ಎಫ್ಐಆರ್ ದಾಖಲಿಸಿದ್ದಾರೆ.
ಹತ್ರಾಸ್ ಮತ್ತು ಬಲರಾಂಪುರ್ ಜಿಲ್ಲೆಗಳಲ್ಲಿ ಇಬ್ಬರು ಮಹಿಳೆಯರು ಅತ್ಯಾಚಾರದಿಂದ ಬಲಿಯಾಗಿರುವ ವಿಚಾರವಾಗಿ ಬಿಎಸ್ಪಿ ನಾಯಕಿ ಮಾಯಾವತಿ ಗುರುವಾರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಬದಲಿಸಬೇಕೆಂದು ಅಥವಾ ಉತ್ತರಪ್ರದೇಶದಲ್ಲಿ ರಾಷ್ಟ್ರಪತಿಗಳ ಆಡಳಿತವನ್ನು ಹೇರಬೇಕೆಂದು ಒತ್ತಾಯಿಸಿದ್ದಾರೆ.
ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಇಂದು ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಾಮೂಹಿಕ ಅತ್ಯಾಚಾರಕ್ಕೊಳಗಾದವರ ಕುಟುಂಬ ಸದಸ್ಯರನ್ನು ಭೇಟಿಯಾಗಲು ಹತ್ರಾಸ್ಗೆ ತೆರಳುತ್ತಿದ್ದಾಗ ಅವರನ್ನು ಬಂಧಿಸಲಾಯಿತು.
ಬಿಜೆಪಿ ಸರ್ಕಾರೇತರ ರಾಜ್ಯಗಳಲ್ಲಿ ಕೊಲೆ, ಅತ್ಯಾಚಾರಗಳಾದಾಗ ಬಿಜೆಪಿ ನಾಯಕರು ಮೊಸಳೆ ಕಣ್ಣೀರು ಸುರಿಸಿ ಅದನ್ನು ರಾಜಕೀಯ ಲಾಭಕ್ಕಾಗಿ ಬಳಕೆ ಮಾಡಿಕೊಳ್ತಿದ್ರು. ಉತ್ತರ ಪ್ರದೇಶದಲ್ಲಿ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯಾಗಿದೆ. ಬಿಜೆಪಿಯವರೇನಾದ್ರೂ ಅಲ್ಲಿನ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರತಿಭಟಿಸಿದ್ರಾ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.