ಸವದತ್ತಿ ಜೊತೆ ಉತ್ತರ ಕರ್ನಾಟಕ ದತ್ತು ತೆಗೆದುಕೊಳ್ಳುವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.. ತಾರತಮ್ಯಗಳನ್ನು ಸರಿಪಡಿಸುವುದೇ ನನ್ನ ಜೀವನದ ಗುರಿ ಎಂದು ಎಚ್ಡಿಕೆ ಹೇಳಿದ್ದಾರೆ.
ಮಂಡ್ಯದ ಕೆ.ಆರ್.ಪೇಟೆ ಜೆಡಿಎಸ್ನಲ್ಲಿ ಬಂಡಾಯ ಭುಗಿಲೆದ್ದಿದ್ದು ತಾಲೂಕಿನ ರಾಜಕೀಯ ಅಖಾಡಕ್ಕೆ ಇಂದು ಎಚ್ಡಿಕೆ ಎಂಟ್ರಿಕೊಡಲಿದ್ದಾರೆ.. ಕಾರ್ಯಕರ್ತರು ಮತ್ತು ಮುಖಂಡ ಜೊತೆ ಕುಮಾರಸ್ವಾಮಿ ಸಭೆ ನಡೆಸಲಿದ್ದಾರೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಜತೆ ಸುದೀರ್ಘ ಮಾತುಕತೆ ನಡೆಸಲಾಯಿತು. ಮುಂಬರುವ ಕರ್ನಾಟಕದ ವಿಧಾನಸಭೆ ಚುನಾವಣೆ, ರಾಷ್ಟ್ರ ರಾಜಕಾರಣ, ರಾಹುಲ್ ಗಾಂಧಿ ಅವರ ಅನರ್ಹತೆ ಸೇರಿ ಅನೇಕ ವಿದ್ಯಮಾನಗಳ ಬಗ್ಗೆ ಮಾತುಕತೆ ನಡೆಸಲಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಮಾಹಿತಿ ನೀಡಿದ್ದಾರೆ.
MP Sumalatha: ಸುಮಲತಾ ಪಕ್ಷ ಸೇರ್ಪಡೆ ಕುರಿತಂತೆ ಬಿಜೆಪಿ ಸೇರ್ತಾರಾ ಎಂಬ ಹಲವು ಅನುಮಾನಗಳಿಗೆ ಕಾರಣರಾಗಿದ್ದರು. ಅದಕ್ಕೆಲ್ಲಾ ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ತೆರೆ ಎಳೆದಿದ್ದಾರೆ.
ರಾಜ್ಯಕ್ಕೆ ಮತ್ತೆ ಇಂದು ಹಾರಿ ಬಂದ ಅಮಿತ್ ಶಾ ಅವರಿಗೆ ಹಾರ್ದಿಕ ಸ್ವಾಗತ.. ಸುಸ್ವಾಗತ. ನಿಮ್ಮ ಡಬಲ್ ಎಂಜಿನ್ ಬಿಜೆಪಿ ಸರಕಾರ ಭರ್ತಿ 40% ಕಮೀಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ನಳಿನ್ ಕುಮಾರ್ ಕಟೀಲ್ಗೆ ಏನು ರಾಜಕೀಯ ಗೊತ್ತು? ರಾಜಕೀಯ ಗೊತ್ತಿರದಿದ್ರೆ ಕಟೀಲು ಅನ್ನುವುದು ಬಿಟ್ಟು ಪಿಟೀಲು ಅಂತ ಇಟ್ಟುಕೊಳ್ಳುವುದು ಒಳ್ಳೆಯದು ಅಲ್ವಾ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯ ರಾಜಕಾರಣದಲ್ಲಿ ಬ್ರಾಹ್ಮಣ ಬಡಿದಾಟದ ಬಿರುಗಾಳಿ ಎದ್ದಿದೆ.. ಬ್ರಾಹ್ಮಣರಿಗೆ ಸಿಎಂ ಸ್ಥಾನ ಹೆಚ್ಡಿಕೆ ಹೇಳಿಕೆ ಬಿಜೆಪಿಯಲ್ಲಿ ತಲ್ಲಣ ಸೃಷ್ಟಿಸಿದೆ.. ಲಿಂಗಾಯತ, ಒಕ್ಕಲಿಗ, SC/ST, ಒಬಿಸಿ ನಾಯಕರ ಪೀಕಲಾಟ ಶುರುವಾಗಿದೆ.
ಪೇಶ್ವೆಗಳ ಡಿಎನ್ ಎ ಇರುವ ವ್ಯಕ್ತಿಯನ್ನು ಸಿಎಂ ಮಾಡಲು ಬಿಜೆಪಿಯವರು ಹುನ್ನಾರ ಮಾಡಿದ್ದಾರೆ ಅಂತ ಹೇಳಿದ್ದೇನೆ. ಇದಕ್ಕೆ ಗಾಬರಿ ಯಾಕೆ? ಬ್ರಾಹ್ಮಣ ಸಮುದಾಯವೂ ಸೇರಿ ನಾನು ಯಾವುದೇ ಸಮಾಜಕ್ಕೆ ಅಗೌರವ ತೋರಿಲ್ಲ. ತೋರುವುದೂ ಇಲ್ಲ ಎಂದು ಎಂದು ಸ್ಪಷ್ಟ ಮಾತುಗಳಲ್ಲಿ ಕುಮಾರಸ್ವಾಮಿ ಹೇಳಿದರು.
ಫೆ. 4ರ ಬಳಿಕ ಜೆಡಿಎಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗಲಿದೆ. ಸಿ.ಎಂ.ಇಬ್ರಾಹಿಂ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಮಾಡಲಾಗುತ್ತೆ ಎಂದು ಕೊಂಡಜ್ಜಿಯಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು.
ನಾನು ಸ್ವತಂತ್ರವಾದ ಸರ್ಕಾರದ ಆಡಳಿತ ಕೊಡಲಿಕ್ಕೆ ಆಗಲಿಲ್ಲ. ಒಂದು ಬಾರಿ ಬಿಜೆಪಿ, ಒಂದು ಬಾರಿ ಕಾಂಗ್ರೆಸ್ ಜೊತೆ ಸರ್ಕಾರ ಮಾಡಿದೆ. ಸಿದ್ದರಾಮಯ್ಯ ಹೇಳಿದಂತೆ ನಾನು ಗೆದ್ದಿತ್ತಿನ ಬಾಲ ಹಿಡ್ಕೊಂಡು ಹೋಗಲಿಲ್ಲ. ಎರಡೂ ರಾಷ್ಟ್ರೀಯ ಪಕ್ಷಗಳು ಸೋತ ಎತ್ತಿನ ಬಾಲ ಹಿಡ್ಕೊಂಡು ಹೊರಟವು ಅಂತಾ ಸಿದ್ದರಾಮಯ್ಯ ಹೇಳಿಕೆಗೆ ಎಚ್ಡಿಕೆ ತಿರುಗೇಟು ನೀಡಿದ್ದಾರೆ..
ವೇಶ್ಯಾವಾಟಿಕೆ ಮತ್ತು ವರ್ಗಾವಣೆ ದಂಧೆಯ ಕಿಂಗ್ ಪಿನ್ ಎನಿಸಿಕೊಂಡಿರುವ ಸ್ಯಾಂಟ್ರೊ ರವಿ ಹೆಸರು ಈಗ ಭಾರೀ ಸದ್ದು ಮಾಡುತ್ತಿದೆ. ಈ ಬಗ್ಗೆ ರಾಜಕೀಯ ಕಿತ್ತಾಟ ಶುರುವಾಗಿದ್ದು ಬಿಜೆಪಿ ನಾಯಕರ ವಿರುದ್ಧ ವಿಪಕ್ಷ ನಾಯಕರು ಕೆಂಡಕಾರುತ್ತಿದ್ದಾರೆ. ಈ ಬಗ್ಗೆ ಗೃಹ ಸಚಿವರು ಕೂಡ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ
ಪ್ರಭಾವಿಗಳೊಂದಿಗೆ ಸ್ಯಾಂಟ್ರೋ ರವಿ ಲಿಂಕ್ ಕೇಸ್ ವಿಚಾರ..
ಯಾರು ಏನೆ ಹೇಳಿದ್ರು ತನಿಖೆಯಲ್ಲಿ ಸಂಪೂರ್ಣ ಮಾಹಿತಿ...
ಬೀದರ್ನಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ...
20 ವರ್ಷದಲ್ಲಿ ಯಾರ ಯಾರ ಜೊತೆಗೆ ರವಿಗೆ ಸಂಬಂಧವಿದೆ...
ಈ ಬಗ್ಗೆ ತನಿಖೆಯಾಗಲಿ ಅಂತ ಹೇಳಿದ್ದೆನೆ ಎಂದ ಸಿಎಂ...
ಯಾರಿದ್ದಾರೆ ಕಾದೂ ನೋಡಿ ಎಂದು ಬಾಂಬ್ ಹಾಕಿದ ಸಿಎಂ...
ಪರೋಕ್ಷವಾಗಿ ಮಾಜಿ ಸಿಎಂ ಎಚ್ಡಿಕೆ ಗೆ ಟಾಂಗ್ ಕೊಟ್ಟ ಸಿಎಂ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.