ರಾಜ್ಯದೆಲ್ಲೆಡೆ ಮತ್ತೆ ಮಳೆ ಅಬ್ಬರಿಸಿದೆ. ಹಾವೇರಿ ಗ್ರಾಮೀಣ ಭಾಗದ ಜನರು ಮಳೆಯಿಂದ ನಲುಗಿ ಹೋಗಿದ್ದಾರೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಿಂದ ಹೊರಬರದೇ ಜನ ಮನೆಯಲ್ಲೇ ಕುಳಿತುಕೊಳ್ಳುವಂತಾಗಿದೆ.
Heavy Rain in Chamarajanagara : ಕೆರೆ ಏರಿ ಒಡೆದು ನೂರಾರು ಎಕರೆ ಕೃಷಿ ಪ್ರದೇಶಕ್ಕೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿರುವ ಘಟನೆ ಯಳಂದೂರು ತಾಲೂಕಿನ ಯರಗಂಬಳ್ಳಿ ಯಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಮಳೆಯ ನೀರು ಕೋಳಿ ಫಾರಂಗೆ ನುಗ್ಗಿದೆ. ಈ ಹಿನ್ನೆಲೆಯಲ್ಲಿ ಫಾರಂನಲ್ಲಿದ್ದ 15 ಸಾವಿರ ಕೋಳಿಗಳು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿವೆ.
ಬೆಂಗಳೂರಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಬನಶಂಕರಿ, ಎಮ್ಜಿ ರಸ್ತೆ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇನ್ನೂ ಎರಡು ದಿನ ಬೆಂಗಳೂರಲ್ಲಿ ಮಳೆ ಮುನ್ಸೂಚನೆ. ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಬೆಂಗಳೂರು ಹವಾಮಾನ ಇಲಾಖೆ ವಿಜ್ಞಾನಿ ನೀಡಿದೆ. ಇನ್ನು ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಮುನ್ಸೂಚನೆ: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ ಐಎಂಡಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.
ರಾಜ್ಯದಲ್ಲಿ ಮತ್ತೆ ಮಳೆ ಜೋರಾಗಲಿದೆ. ಮುಂದಿನ ವಾರದಿಂದ ಮಳೆ ಮತ್ತೆ ಚುರುಕು ಪಡೆಯಲಿದೆ. ಇನ್ನೊಂದು ವಾರದಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಿಗೆ ಈ ವಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಹಾಸನದ ಸಕಲೇಶಪುರದಲ್ಲಿ ಮಳೆಯ ಆರ್ಭಟ. ಭಾರೀ ಮಳೆ ಹಿನ್ನೆಲೆ ತಾಲೂಕಿನ ಎಲ್ಲಾ ಶಾಲೆಗಳಿಗೆ ರಜೆ. ತಾಲೂಕಿನ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ರಜೆ ನೀಡಿ ಆದೇಶ. ಅಂಗನವಾಡಿಗಳು ಮತ್ತು 10ನೇ ತರಗತಿವರೆಗಿನ ಶಾಲೆಗಳಿಗೆ ರಜೆ. ಸಕಲೇಶಪುರ ತಹಶೀಲ್ದಾರ್ ಹೆಚ್.ಬಿ.ಜೈ ಕುಮಾರ್ ಆದೇಶ.
ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ತಪ್ಪಲಿನಲ್ಲಿರುವ ಹರಪಳ್ಳಿಯಲ್ಲಿ ಭೂ ಕುಸಿತ ಸಂಭವಿಸಿದೆ. ಭೂಕುಸಿತದ ಪರಿಣಾಮ ಬೆಟ್ಟದ ಒಂದು ಭಾಗವೇ ಕೊಚ್ಚಿ ಹೋಗಿದೆ. ಬೆಟ್ಟದ ಮೇಲ್ಭಾಗದಲ್ಲಿ ಬಿರುಕು ಕಾಣಿಸಿಕೊಂಡಿದೆ.
ಕುಂದಾನಗರಿ ಬೆಳಗಾವಿಯಲ್ಲೂ ಮಳೆರಾಯನ ಆರ್ಭಟ ಮುಂದುವರೆದಿದೆ. ಮಳೆಯ ಪರಿಣಾಮ ಮನೆ ಗೋಡೆ ಕುಸಿದು ಬಿದ್ದಿದ್ದು, 2 ತಿಂಗಳ ಮಗು ಮತ್ತು ತಾಯಿ ಸ್ಪಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ತಾಲ್ಲೂಕಿನ ಭೂತರಾಮನಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಬೆಳಗಾವಿ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಘಟಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಹಿರಣ್ಯಕೇಶಿ ನದಿ ಮೈದುಂವಿ ಹರಿಯುತ್ತಿದೆ. ಗೋಕಾಕ್, ಮೂಡಲಗಿ ತಾಲೂಕಿನ 5 ಸೇತುವೆಗಳು ಜಲಾವೃತವಾಗಿವೆ.
ಕರಾವಳಿ-ಮಲೆನಾಡು ಭಾಗದಲ್ಲಿ 3 ದಿನ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಬಿರುಗಾಳಿ, ಮಿಂಚು ಗುಡುಗು ಸಹಿತ ವ್ಯಾಪಕ ಮಳೆ ಸಾಧ್ಯತೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.