Priyamani : ಭಾರತೀಯ ನಟಿ ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಮತ್ತು ಮೂರು ಫಿಲ್ಮ್ಫೇರ್ ಪ್ರಶಸ್ತಿಗಳು ದಕ್ಷಿಣ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ .ಅವರು ಪ್ರಧಾನವಾಗಿ ತೆಲುಗು , ಕನ್ನಡ , ತಮಿಳು , ಹಿಂದಿ ಮತ್ತು ಮಲಯಾಳಂ ಭಾಷೆಗಳ ಚಲನಚಿತ್ರಗಳಲ್ಲಿ ಕೆಲಸ ಮಾಡುತ್ತಾರೆ. 2003 ರಲ್ಲಿ ತೆರೆಕಂಡ ತೆಲುಗು ಚಿತ್ರ ಇವರೇ ಆಟಗಾಡು ಚಿತ್ರದ ಮೂಲಕ ಪ್ರಿಯಾಮಣಿ ನಟನೆಗೆ ಪಾದಾರ್ಪಣೆ ಮಾಡಿದರು . ಯಾರೇ ಆಟಗಾಡು ಎಂಬ ತೆಲುಗು ಚಿತ್ರದ ಮೂಲಕ ಪ್ರಿಯಾಮಣಿ ಪಾದಾರ್ಪಣೆ ಮಾಡಿದರು . ಆಕೆ ತನ್ನ ನಟನಾ ವೃತ್ತಿಯನ್ನು ಭಾರತಿರಾಜರ ತಮಿಳು ಚಲನಚಿತ್ರ, ಕಂಗಳಲ್ ಕೈದು ಸೇಯ್ ,ನೊಂದಿಗೆ ಪ್ರಾರಂಭಿಸಿದರೂ ಅದು ಮೊದಲು ಬಿಡುಗಡೆಯಾದ ಅವರೇ ಆಟಗಾಡು.
Priyamani : ಭಾರತೀಯ ನಟಿ, ಕನ್ನಡ ಸೇರಿದಂತೆ ಬೇರೆ ಬೇರೆ ಭಾಷೆಗಳಲ್ಲಿ ನಟಿಸುತ್ತಾರೆ. 2003 ರಲ್ಲಿ ತೆರೆಕಂಡ ತೆಲುಗು ಚಿತ್ರ ಇವರೇ ಆಟಗಾಡು ಚಿತ್ರದ ಮೂಲಕ ಪ್ರಿಯಾಮಣಿ ನಟನೆಗೆ ಪಾದಾರ್ಪಣೆ ಮಾಡಿದರು . 2007 ರಲ್ಲಿ ತಮಿಳಿನ ಪ್ರಣಯ ನಾಟಕ ಪರುತ್ತಿವೀರನ್ನಲ್ಲಿ ಹಳ್ಳಿ ಹುಡುಗಿಯ ಪಾತ್ರಕ್ಕಾಗಿ ಅವರು ವ್ಯಾಪಕವಾದ ಮನ್ನಣೆಯನ್ನು ಪಡೆದರು. ಇತ್ತೀಚಿಗೆ ತೆರೆ ಕಂಡ ಜವಾನ್ ಸಿನಿಮಾದಲ್ಲಿಯೂ ಪೋಷಕ ಪಾತ್ರದಲ್ಲಿ ನಟಿಸಿದ್ದಾರೆ.
Shilpa Shetty : ಬಹುಭಾಷಾ ನಟಿ ಶಿಲ್ಪಾ ಶೆಟ್ಟಿ ಬಹುನಿರೀಕ್ಷಿತ ʼಸುಖೀʼ ಚಿತ್ರದ ಪ್ರಚಾರದಲ್ಲಿ ಗುಲಾಬಿ ಬಣ್ಣದ ಸೀರೆಯಲ್ಲಿ ಕಂಗೊಳಿಸುತ್ತಿದ್ದರು. ಸಂಪೂರ್ಣವಾಗಿ ಗುಲಾಬಿ ಬಣ್ಣದ ಉಡುಗೆಗಳನ್ನು ತೊಟ್ಟು ಆಕರ್ಷಕವಾಗಿ ಕಾಣುತ್ತಿದ್ದರು.
ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ- ಹೆಚ್.ಡಿ. ಕುಮಾರಸ್ವಾಮಿ
ಭಾರತವು ವಿಭಿನ್ನ ಸಂಸ್ಕೃತಿಗಳು ಮತ್ತು ಭಾಷೆಗಳ ವೈವಿಧ್ಯಮಯ ದೇಶವೆಂಬುದು ಇಡೀ ಜಗತ್ತಿಗೆ ಗೊತ್ತಾಗಿದೆ. ಭಾರತವೆಂದರೆ ಕೇವಲ ಹಿಂದಿಯಲ್ಲ. ಭಾರತ ಕೇವಲ ಬಾಲಿವುಡ್ ಅಲ್ಲ. ಭಾರತವೆಂದರೆ ಹಿಂದಿಯೆಂಬ ರೂಢಿಗತ ಚಿಂತನೆಯೊಂದು ಆಲಸಿತನ ಎಂದು ನಟಿ ರಮ್ಯಾ ಹೇಳಿದ್ದಾರೆ
ಟಾಲಿವುಡ್ ಮೋಸ್ಟ್ ಎನರ್ಜಿಟಿಕ್ ನಟ ಯಾರು ಅಂದ್ರೆ ಅದು ಬಾಲಯ್ಯ ಅನ್ನೋ ಉತ್ತರ ಬರುತ್ತೆ.. ಅವ್ರ ಮಾಡೋ ಸ್ಟಂಟ್ಸ್ ಮುಂದೆ, ಟಾಲಿವುಡ್ ಎಲ್ಲಾ ಸ್ಟಾರ್ಗಳೂ ಡಮ್ಮಿನೆ.. ವಯಸ್ಸು 62 ಆದ್ರೂ, ಸಿನಿ ಕೆರಿಯರ್ ಮಾತ್ರ ಕೊಂಚನೂ ವಯಸ್ಸಾಗಿತ್ತು, ಅದಿನ್ನು ಸ್ಟಿಲ್ ಟ್ವಿಂಟಿ ಫೈವ್ನಲ್ಲೇ ಇದೆ.. ಇನ್ನು ಬಾಕ್ಸ್ ಆಫೀಸ್ನಲ್ಲೂ ಇವರದ್ದೇ ಮೇಲುಗೈ.
Actor and politician Kamal Haasan : ಹಿಂದಿ ಭಾಷೆಯನ್ನು ಇತರರ ಮೇಲೆ ಹೇರುವುದು ಮೂರ್ಖತನ ಎಂದು ನಟ ಕಮಲ್ ಹಾಸನ್ ಹೇಳಿದ್ದಾರೆ. ಈ ಮೂಲಕ ಹಿಂದಿ ಹೇರಿಕೆ ಸಂಬಂಧಿಸಿದಂತೆ ಮತ್ತೆ ವಿವಾದ ಶುರುವಾಗಿದೆ.
ರಾಜ್ಯದ ಬಸವರಾಜ ಬೊಮ್ಮಾಯಿ ಸರ್ಕಾರ ಕೇಂದ್ರ ಬಿಜೆಪಿ ನಾಯಕರ ಓಲೈಕೆಗಾಗಿ ಮತ್ತೆ ಮತ್ತೆ ಕನ್ನಡವನ್ನು ತುಳಿದು ಹಿಂದಿಯನ್ನು ಮೆರೆಸಿ ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಮಾಡುತ್ತಿರುವುದು ಖಂಡನೀಯ ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಎರಡು ದಿನಗಳ ಭೇಟಿಗಾಗಿ ಜಪಾನ್ಗೆ ಆಗಮಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರದಂದು ಕ್ವಾಡ್ ಶೃಂಗಸಭೆಯಲ್ಲಿ ಜಪಾನ್ನ ಪ್ರಧಾನಿ ಫ್ಯೂಮಿಯೊ ಕಿಶಿಡಾ, ಯುಎಸ್ ಅಧ್ಯಕ್ಷ ಜೋ ಬಿಡನ್ ಮತ್ತು ಆಸ್ಟ್ರೇಲಿಯಾದ ಹೊಸ ಪಿಎಂ ಆಂಥೋನಿ ಅಲ್ಬನೀಸ್ ಜೊತೆ ಭಾಗವಹಿಸಲಿದ್ದಾರೆ.
ಭಾರತದ ಹೆಸರಾಂತ ಚಿತ್ರ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ತಮ್ಮ ನೇರ ನುಡಿಗೆ ಮತ್ತು ಮುಕ್ತ ಅಭಿಪ್ರಾಯಕ್ಕೆ ಹೆಸರುವಾಸಿಯಾದವರು.ಈಗ ಅವರು ಹಿಂದಿ ಭಾಷೆಯ ವಿಚಾರವಾಗಿ ಕಿಚ್ಚ ಸುದೀಪ್ ಮತ್ತು ಅಜಯ್ ದೇವಗನ್ ನಡುವಿನ ಭಾಷಾ ಸಂಘರ್ಷದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ್ದಾರೆ.
ರಾಜ್ಯದಲಿ ʻರಾಷ್ಟ್ರಭಾಷೆʼ ವಿರುದ್ಧ ಸಮರ ಶುರುವಾಗಿದೆ.. ಸುದೀಪ್ ಹೇಳಿಕೆ ಬಗ್ಗೆ ಅಜಯ್ ದೇವಗನ್ ಟ್ವೀಟ್ ಮಾಡಿದ ಬೆನ್ನಲ್ಲೇ ʻರಾಷ್ಟ್ರಭಾಷೆʼ ವಿಚಾರದ ಚರ್ಚೆ ಮುನ್ನೆಲೆಗೆ ಬಂದಿದೆ. ಅಷ್ಟಕ್ಕೂ ಹಿಂದಿ ʻರಾಷ್ಟ್ರಭಾಷೆʼ ಅನ್ನೋದು ನಿಜನಾ..? ಒಂದೊಂದು ರಾಜ್ಯದಲ್ಲಿ ಒಂದೊಂದು ಭಾಷೆಯಿದೆ. ಹೀಗಿರುವಾಗ ಹಿಂದಿ ರಾಷ್ಟ್ರಭಾಷೆ ಆಗೋದು ಹೇಗೆ..? ಹಿಂದಿಯನ್ನು ರಾಷ್ಟ್ರಭಾಷೆ ಅನ್ನೋದು ಎಷ್ಟು ಸರಿ..? ಎಂಬ ಪ್ರಶ್ನೆಗಳು ಎದ್ದಿವೆ..
ನಮ್ಮ ಭಾಷೆಗೆ ಧಕ್ಕೆಯಾದ್ರೆ ಯಾರು ಕೂಡ ಸುಮ್ಮನೆ ಇರಲ್ಲ ಎಂದು ಸಂಸದೆ ಸುಮಲತಾ ಹೇಳಿದ್ದಾರೆ.. ಒಂದು ರಾಷ್ಟ್ರ ಭಾಷೆ ಅನ್ನೋ ಪ್ರಶ್ನೆಯೇ ಬರಲ್ಲ ಎಂದ ಸುಮಲತಾ, ಉತ್ತರ ಭಾರತದಲ್ಲಿ ಹಿಂದಿ ಪ್ರಾಮುಖ್ಯತೆ ಇದೆ. ಕರ್ನಾಟಕದಲ್ಲಿ ಕನ್ನಡಕ್ಕೆ ಪ್ರಾಮುಖ್ಯತೆ ಇದೆ. ಇದು ನಮ್ಮ ಸ್ವಾಭಿಮಾನ. ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ಯಾರು ಸುಮ್ಮನೆ ಇರಲ್ಲ ಎಂದು ಸುಮಲತಾ ಹೇಳಿದ್ದಾರೆ.
ಉತ್ತರ ಭಾರತದಲ್ಲಿ ಹಿಂದಿ ಪ್ರಾಮುಖ್ಯತೆ ಇದೆ. ಕರ್ನಾಟಕದಲ್ಲಿ ಕನ್ನಡಕ್ಕೆ ಪ್ರಾಮುಖ್ಯತೆ ಇದೆ. ನಮ್ಮ ಭಾಷೆಗೆ ಧಕ್ಕೆಯಾದ್ರೆ ಯಾರು ಕೂಡ ಸುಮ್ಮನೆ ಇರಲ್ಲ. ಇದು ನಮ್ಮ ಸ್ವಾಭಿಮಾನ. ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ಯಾರು ಸುಮ್ಮನೆ ಇರಲ್ಲ.
ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ- ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ
ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿದ್ದ ಸುದೀಪ್ ಹೇಳಿಕೆ ಪ್ರತಿಕ್ರಿಯಿಸುತ್ತಾ ಹಿಂದಿ ನಟ ಅಜಯ್ ದೇವಗನ್ 'ಬ್ರದರ್ ಕಿಚ್ಚ ಸುದೀಪ್, ನಿಮ್ಮ ಪ್ರಕಾರ ಹಿಂದಿ ರಾಷ್ಟ್ರೀಯ ಭಾಷೆಯಲ್ಲ ಎಂದು ಹೇಳುತ್ತಿದ್ದೀರಿ. ಹಾಗಿದ್ದಲ್ಲಿ ನಿಮ್ಮ ಮಾತೃಭಾಷೆಯಲ್ಲಿ ನಿರ್ಮಾಣ ಮಾಡಿರುವ ಚಿತ್ರಗಳನ್ನೇಕೆ ಹಿಂದಿಯಲ್ಲಿ ಡಬ್ ಮಾಡಿ ಬಿಡುಗಡೆ ಮಾಡುತ್ತಿದ್ದೀರಿ? ಹಿಂದಿ ನಮ್ಮ ಮಾತೃಭಾಷೆ ಹಾಗೂ ಬಹುಶಃ ಮುಂದೆಯೂ ಕೂಡ ಇದು ನಮ್ಮ ರಾಷ್ಟ್ರಭಾಷೆಯಾಗಿಯೇ ಇರಲಿದೆ. ಜನ ಗಣ ಮನ' ಎಂದು ಟ್ವೀಟ್ ಮಾಡಿದ್ದರು.
ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಕಿಚ್ಚ ಸುದೀಪ್ ಹೇಳಿಕೆ ನೀಡಿದ್ದಕ್ಕೆ ಹಿಂದಿಯಲ್ಲಿ ಟ್ವೀಟ್ ಮಾಡುವುದರ ಮೂಲಕ ಪ್ರತಿಕ್ರಿಯಿದ್ದ ಬಾಲಿವುಡ್ ನಟ ಅಜಯ್ ದೇವಗನ್ ನಡೆಗೆ ಈಗ ಮಾಜಿ ಮುಖ್ಯಮಂತ್ರಿ ಎಚ್.ಡಿ,ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಸುದೀಪ್ ಹೇಳಿದ್ದರಲ್ಲಿ ಸರಿ ಇದೆ ಎಂದು ಹೇಳುವ ಮೂಲಕ ಈಗ ಕುಮಾರಸ್ವಾಮಿ ಕಿಚ್ಚ ಸುದೀಪ್ ಅವರ ಬೆಂಬಲಕ್ಕೆ ಧಾವಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.